Home Bibles ಯೆಹೆಜ್ಕೇಲ 17:7 · ಕನ್ನಡ ಬೈಬಲ್
ಯೆಹೆಜ್ಕೇಲ 17:7 · ಕನ್ನಡ ಬೈಬಲ್

ದೊಡ್ಡ ರೆಕ್ಕೆಗಳೂ ಬಹಳ ಗರಿಗಳೂ ಇದ್ದ ಇನ್ನೊಂದು ದೊಡ್ಡ ಹದ್ದು ಇತ್ತು; ಆಗ ಇಗೋ, ಆ ದ್ರಾಕ್ಷೇ ಗಿಡವು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ ತನ್ನ ರೆಂಬೆಗಳನ್ನು ಚಾಚಿ ಅದರ ಮೂಲಕ ನೀರನ್ನು ಹಾಯಿಸುತ್ತಿತ್ತು.

Cross references

2 ಅರಸುಗಳು 24:20

ಕರ್ತನು ಅವರನ್ನು ತನ್ನ ಸಮ್ಮುಖದಿಂದ ದೊಬ್ಬಿ ಹಾಕುವ ವರೆಗೆ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಉಂಟಾದ ಆತನ ಕೋಪದ ನಿಮಿತ್ತ ಚಿದ್ಕೀಯನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದನು.

2 ದಿನವೃತ್ತಾಂತ 26:13

ಅವರ ಕೈಕೆಳಗೆ ಅರಸನಿಗೆ ಸಹಾಯವಾಗಿ ಶತ್ರುವಿನ ಮೇಲೆ ಬಹಳ ಪರಾಕ್ರಮದಿಂದ ಯುದ್ಧಮಾಡುವ ಮೂರು ಲಕ್ಷದ ಏಳು ಸಾವಿರದ ಐನೂರು ಮಂದಿ ಯುಳ್ಳ ಸೈನ್ಯವಿತ್ತು.

ಯೆರೆಮಿಯ 37:5

ಆಗ ಅರಸನಾದ ಚಿದ್ಕೀಯನು ಇಗೋ, ಅವನು ನಿಮ್ಮ ಕೈಯಲ್ಲಿ ಇದ್ದಾನೆ; ನಿಮಗೆ ವಿರೋಧವಾಗಿ ಅರಸನು ಏನು ಮಾಡಬಲ್ಲವ ನಲ್ಲ ಅಂದನು.

ಯೆಹೆಜ್ಕೇಲ 17:15

ಆದರೆ ಇವನು ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ತನ್ನ ರಾಯಭಾರಿಗಳನ್ನು ಐಗುಪ್ತಕ್ಕೆ ಕಳು ಹಿಸಿ ತನಗೆ ಕುದುರೆಗಳನ್ನೂ ಬಹಳ ಜನರನ್ನೂ ಕೊಡ ಬೇಕೆಂದು ಹೇಳಿ ಕಳುಹಿಸಿದನು. ಇವನು ಅಭಿವೃದ್ಧಿ ಯಾಗುವನೋ? ಇಂಥಾ ಸಂಗತಿಗಳನ್ನು ಮಾಡುವ ವನು ತಪ್ಪಿಸಿಕೊಳ್ಳುವನೋ? ಅಥವಾ ಒಡಂಬಡಿಕೆ ಯನ್ನು ಮುರಿದು ತಪ್ಪಿಸಿಕೊಳ್ಳಲಾಗುವದೋ?

ಯೆಹೆಜ್ಕೇಲ 31:4

ನೀರು ಅದನ್ನು ಬೆಳೆಸಿತು, ಅಗಾಧವು ತನ್ನ ನದಿಗಳನ್ನು ಅದರ ಸುತ್ತಲೂ ಹರಿಸಿ ತನ್ನ ಕಾಲುವೆಗಳನ್ನು ಬಯಲಿನ ಮರಗಳಿಗೆಲ್ಲಾ ಕಳುಹಿಸಿ, ಅದನ್ನು ಎತ್ತರವಾಗಿ ಬೆಳೆಯುವಂತೆ ಮಾಡಿತು.

Interlinear

Choose Theme