Home Bibles ಯೆಹೆಜ್ಕೇಲ 18:19 · ಕನ್ನಡ ಬೈಬಲ್
ಯೆಹೆಜ್ಕೇಲ 18:19 · ಕನ್ನಡ ಬೈಬಲ್

ಆದಾಗ್ಯೂ ಇನ್ನೂ ನೀವು--ಮಗನು ತಂದೆಯ ಅಕ್ರಮವನ್ನು ಹೊರುವದಿಲ್ಲವೇ ಎಂದು ಹೇಳುವಿರಿ; ನಿಶ್ಚಯವಾಗಿ ಮಗನು ನ್ಯಾಯವನ್ನೂ ನೀತಿಯನ್ನೂ ಮಾಡಿ ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನಡೆದರೆ ಅವನು ನಿಶ್ಚಯವಾಗಿ ಬದುಕುವನು.

Cross references

ನಿರ್ಗಮಕಾಂಡ 20:5

ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.

ದ್ವಿತೀಯೋಪದೇಶಕಾಂಡ 5:9

ಅವುಗಳಿಗೆ ಅಡ್ಡಬೀಳಲೂಬಾರದು, ಸೇವಿಸಲೂಬಾರದು. ಯಾಕಂದರೆ ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆಮಾಡುವವರಲ್ಲಿ ಪಿತೃಗಳ ಅಕ್ರಮವನ್ನು ಮಕ್ಕಳ ಮೇಲೆ ಮೂರನೆಯ ನಾಲ್ಕನೆಯ ತಲಾಂತರದ ವರೆಗೆ ನ್ಯಾಯತೀರಿಸುತ್ತೇನೆ.

2 ಅರಸುಗಳು 23:26

ಆದರೆ ಮನಸ್ಸೆಯು ಕರ್ತನಿಗೆ ಕೋಪ ವನ್ನು ಎಬ್ಬಿಸಲು ಮಾಡಿದ ಎಲ್ಲಾ ಕ್ರಿಯೆಗಳಿಗೋಸ್ಕರ ಯೆಹೂದಕ್ಕೆ ವಿರೋಧವಾಗಿ ತನ್ನನ್ನು ಉದ್ರೇಕಿಸಿದ ಕೋಪವನ್ನೂ ತನ್ನ ಮಹಾಕೋಪದ ಉರಿಯನ್ನೂ ಕರ್ತನು ಬಿಟ್ಟುಬಿಡಲಿಲ್ಲ.

2 ಅರಸುಗಳು 24:3

ನಿಶ್ಚಯವಾಗಿ ಕರ್ತನ ಅಪ್ಪಣೆಯಿಂದ ಇದು ಯೆಹೂದದ ಮೇಲೆ ಆಯಿತು. ಅದೇನಂದರೆ, ಮನಸ್ಸೆಯು ತನ್ನ ಎಲ್ಲಾ ಕೃತ್ಯಗಳಿಂದ ಮಾಡಿದ ಪಾಪಗಳ ನಿಮಿತ್ತ ಅವರನ್ನು ಆತನು ತನ್ನ ಸಮ್ಮುಖದಿಂದ ತೆಗೆದು ಹಾಕುವದಕ್ಕೋಸ್ಕರವೇ.

ಯೆರೆಮಿಯ 15:4

ಅವರು ಬಹು ಕ್ರೂರವಾದ ಮರಣಗಳಿಂದ ಸಾಯುವರು; ಅವರಿಗೋಸ್ಕರ ಗೋಳಾಟ ಆಗುವದಿಲ್ಲ; ಅವರು ಹೂಣಿಡಲ್ಪಡುವದಿಲ್ಲ; ಭೂಮಿಯ ಮೇಲೆ ಅವರು ಗೊಬ್ಬರವಾಗುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರ ವಾಗುವವು.

ವಿಲಾಪಗಳು 5:7

ನಮ್ಮ ತಂದೆಗಳು ಪಾಪ ಮಾಡಿ ಇಲ್ಲದೆ ಹೋದರು; ನಾವು ಅವರ ಅಕ್ರಮಗಳನ್ನು ಹೊರುತ್ತೇವೆ.

ಯೆಹೆಜ್ಕೇಲ 18:2

ತಂದೆಗಳು ಹುಳಿ ದ್ರಾಕ್ಷೆಗಳನ್ನು ತಿಂದರು ಮಕ್ಕಳ ಹಲ್ಲು ಉಳಿತು ಹೋಯಿತು ಎಂಬ ಗಾದೆಯನ್ನು ಇಸ್ರಾಯೇಲ್‌ ದೇಶದ ವಿಷಯವಾಗಿ ನೀವು ಉಪಯೋಗಿಸುವ ಇದರ ಅರ್ಥವೇನು?

ಯೆಹೆಜ್ಕೇಲ 18:9

ಸತ್ಯವನ್ನು ಮಾಡುವದ ಕ್ಕಾಗಿ ನನ್ನ ನಿಯಮಗಳಲ್ಲಿ ನಡೆದು, ನನ್ನ ನ್ಯಾಯಗಳನ್ನು ಕೈಕೊಂಡು ಸತ್ಯಪರನಾಗಿ ನಡೆದರೆ ಅವನು ನೀತಿ ವಂತನು ಮತ್ತು ನಿಶ್ಚಯವಾಗಿ ಬದುಕುವವನು ಎಂದು ದೇವರಾದ ಕರ್ತನು ಹೇಳಿದ್ದಾನೆ.

ಯೆಹೆಜ್ಕೇಲ 20:18

ಆದರೆ ನಾನು ಅರಣ್ಯದಲ್ಲಿ ಅವರ ಮಕ್ಕಳಿಗೆ ಹೇಳಿದ್ದೇನಂದರೆ--ನಿಮ್ಮ ತಂದೆಗಳ ನಿಯಮಗಳಲ್ಲಿ ನಡೆಯಬೇಡಿರಿ, ಅವರ ನ್ಯಾಯಗಳನ್ನು ಅನುಸರಿಸ ಬೇಡಿರಿ, ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರ ಮಾಡಿಕೊಳ್ಳಬೇಡಿರಿ;

ಯೆಹೆಜ್ಕೇಲ 20:24

ಅವರು ನನ್ನ ನ್ಯಾಯಗಳಲ್ಲಿ ನಡೆಯದೆ, ನನ್ನ ನಿಯಮಗಳನ್ನು ಅಲಕ್ಷಿಸಿ ನನ್ನ ಸಬ್ಬತ್ತುಗಳನ್ನು ಅಪವಿತ್ರಪಡಿಸಿದರು; ತಮ್ಮ ಪಿತೃಗಳ ವಿಗ್ರಹಗಳ ಕಡೆಗೆ ಕಣ್ಣಿಟ್ಟಿದ್ದರು.

ಯೆಹೆಜ್ಕೇಲ 20:30

ಆದದರಿಂದ ನೀನು ಇಸ್ರಾಯೇಲಿನ ಮನೆತನದವರಿಗೆ ಹೇಳಬೇಕಾ ದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ; ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಅಪವಿತ್ರ ಪಡಿಸಿಕೊಳ್ಳುತ್ತೀರೋ? ಅವರ ಅಸಹ್ಯವಾದವುಗಳ ಪ್ರಕಾರ ವ್ಯಭಿಚಾರಮಾಡುತ್ತೀರೋ?

ಯೆಹೆಜ್ಕೇಲ 33:10

ಓ ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರೊಂದಿಗೆ ಮಾತನಾಡಿ ಹೀಗೆ ಹೇಳು --ನಮ್ಮ ಅಪರಾಧಗಳೂ ಪಾಪಗಳೂ ನಮ್ಮ ಮೇಲಿದ್ದು ನಾವು ಅವುಗಳಲ್ಲಿ ಕ್ಷೀಣಿಸುತ್ತಾ ಹೋದರೆ ಹೇಗೆ ಬದುಕುವೆವು; ಎಂದು ಹೇಳುವಿರಲ್ಲಾ?

ಜೆಕರ್ಯ 1:3

ಆದದರಿಂದ ನೀನು ಅವರಿಗೆ ಹೇಳತಕ್ಕದ್ದೇ ನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕಡೆಗೆ ತಿರುಗಿ ಕೊಳ್ಳಿರಿ, ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

Interlinear

Choose Theme