Home Bibles ಯೆಹೆಜ್ಕೇಲ 18:2 · ಕನ್ನಡ ಬೈಬಲ್
ಯೆಹೆಜ್ಕೇಲ 18:2 · ಕನ್ನಡ ಬೈಬಲ್

ತಂದೆಗಳು ಹುಳಿ ದ್ರಾಕ್ಷೆಗಳನ್ನು ತಿಂದರು ಮಕ್ಕಳ ಹಲ್ಲು ಉಳಿತು ಹೋಯಿತು ಎಂಬ ಗಾದೆಯನ್ನು ಇಸ್ರಾಯೇಲ್‌ ದೇಶದ ವಿಷಯವಾಗಿ ನೀವು ಉಪಯೋಗಿಸುವ ಇದರ ಅರ್ಥವೇನು?

Cross references

ನಿರ್ಗಮಕಾಂಡ 20:5

ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.

ಯೆಶಾಯ 3:15

ನೀವು ನನ್ನ ಪ್ರಜೆಯನ್ನು ಹೊಡೆದು ಚೂರು ಗಳನ್ನಾಗಿ ಮಾಡಿ ಬಡವರ ಮುಖಗಳನ್ನು ಹಿಂಡು ವದರ ಅರ್ಥವೇನು ಎಂದು ಸೈನ್ಯಗಳ ದೇವರಾದ ಕರ್ತನು ಹೇಳುತ್ತಾನೆ.

ಯೆರೆಮಿಯ 15:4

ಅವರು ಬಹು ಕ್ರೂರವಾದ ಮರಣಗಳಿಂದ ಸಾಯುವರು; ಅವರಿಗೋಸ್ಕರ ಗೋಳಾಟ ಆಗುವದಿಲ್ಲ; ಅವರು ಹೂಣಿಡಲ್ಪಡುವದಿಲ್ಲ; ಭೂಮಿಯ ಮೇಲೆ ಅವರು ಗೊಬ್ಬರವಾಗುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರ ವಾಗುವವು.

ಯೆರೆಮಿಯ 31:29

ಈ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುವ ಕಸ್ದೀಯರು ಬಂದು ಈ ಪಟ್ಟಣಕ್ಕೆ ಬೆಂಕಿ ಹಚ್ಚಿ ಅದನ್ನೂ ಮತ್ತು ಯಾವ ಮನೆಗಳ ಮಾಳಿಗೆಗಳ ಮೇಲೆ ಬಾಳನಿಗೆ ಧೂಪವರ್ಪಿಸಿ ನನಗೆ ಕೋಪದ್ರೇಕ ಎಬ್ಬಿಸುವ ಹಾಗೆ ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯಿ ದಿದ್ದಾರೋ ಅವುಗಳನ್ನು ಸುಟ್ಟುಬಿಡುವರು.

ವಿಲಾಪಗಳು 5:7

ನಮ್ಮ ತಂದೆಗಳು ಪಾಪ ಮಾಡಿ ಇಲ್ಲದೆ ಹೋದರು; ನಾವು ಅವರ ಅಕ್ರಮಗಳನ್ನು ಹೊರುತ್ತೇವೆ.

ಯೆಹೆಜ್ಕೇಲ 6:2

ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಅಭಿಮುಖನಾಗಿ ನಿಂತು ಅವುಗಳಿಗೆ ವಿರೋಧವಾಗಿ ಪ್ರವಾದಿಸಿ

ಯೆಹೆಜ್ಕೇಲ 7:2

ಮನುಷ್ಯಪುತ್ರನೇ, ದೇವರಾದ ಕರ್ತನು ಇಸ್ರಾ ಯೇಲ್‌ ದೇಶಕ್ಕೆ ಹೀಗೆ ಹೇಳುತ್ತಾನೆ--ಅಂತ್ಯವು ಬಂದಿದೆ; ಈ ದೇಶದ ನಾಲ್ಕು ಮೂಲೆಗಳಲ್ಲೂ ಅಂತ್ಯವು ಬಂದಿದೆ.

ಯೆಹೆಜ್ಕೇಲ 17:12

ಇದರ ಅಭಿಪ್ರಾಯ ನಿಮಗೆ ತಿಳಿಯುವದಿಲ್ಲವೋ? ಅವರಿಗೆ ಎದುರು ಬೀಳುವ ಮನೆಯವರಿಗೆ ಹೀಗೆ ಹೇಳು--ಇಗೋ, ಬಾಬೆಲಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸ ನನ್ನೂ ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಬಾಬೆಲಿಗೆ ಒಯ್ದಿದ್ದಾನೆ.

ಯೆಹೆಜ್ಕೇಲ 25:3

ಅಮ್ಮೋನನ ಕುಮಾರರಿಗೆ ಹೇಳು, ದೇವರಾದ ಕರ್ತನ ವಾಕ್ಯವನ್ನು ಕೇಳಿರಿ; ದೇವರಾದ ಕರ್ತನು ಹೇಳುವದೇನಂದರೆ --ನೀನು ನನ್ನ ಪರಿಶುದ್ದಸ್ಥಳವನ್ನು ಅಪವಿತ್ರಪಡಿಸಿದಾ ಗಲೂ ಇಸ್ರಾಯೇಲಿನ ದೇಶವು ಹಾಳಾದಾಗಲೂ ಯೆಹೂದನ ಮನೆತನದವರು ಸೆರೆಯಲ್ಲಿದ್ದಾಗಲೂ ಅಹಾ, ಅಂದವಾದದರಿಂದ ನಿನ್ನನ್ನು ಹೆಚ್ಚಿಸಿಕೊಂಡದ್ದ ರಿಂದ

ಯೆಹೆಜ್ಕೇಲ 36:1

ಅಲ್ಲದೆ ಮನುಷ್ಯಪುತ್ರನೇ, ಇಸ್ರಾಯೇಲ್‌ ಪರ್ವತಗಳ ಕಡೆಗೆ ಪ್ರವಾದಿಸು ಮತ್ತು ಹೇಳು--ಇಸ್ರಾಯೇಲ್‌ ಪರ್ವತಗಳೇ, ನೀವು ಕರ್ತನ ವಾಕ್ಯವನ್ನು ಕೇಳಿರಿ;

ಯೆಹೆಜ್ಕೇಲ 37:11

ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್‌ ಮನೆತನಗಳೇ; ಇಗೋ, ನಮ್ಮ ಎಲುಬುಗಳು ಒಣಗಿಸಲ್ಪಟ್ಟಿವೆ ಮತ್ತು ನಮ್ಮ ನಿರೀಕ್ಷೆಯು ಕಳೆದುಹೋಗಿದೆ; ನಾವು ಶುದ್ಧವಾಗಿ ನಮ್ಮ ಭಾಗಗಳನ್ನು ಕತ್ತರಿಸಿಕೊಂಡಿದ್ದೇವೆ ಎಂದು ಅವರು ಹೇಳುವರು.

ಯೆಹೆಜ್ಕೇಲ 37:19

ಇಗೋ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಎಫ್ರಾಯಾಮಿನ ಕೈಯಲ್ಲಿರುವ ಯೋಸೇಫನ ಕೋಲನ್ನೂ ಅವನ ಜೊತೆಗಾರರಾದ ಇಸ್ರಾಯೇಲ್ಯರ ಗೋತ್ರಗಳನ್ನೂ ತೆಗೆದುಕೊಂಡು ಅವನ ಸಂಗಡ ಅಂದರೆ ಯೆಹೂದನ ಕೋಲಿನ ಸಂಗಡ ಸೇರಿಸಿ ಅವುಗಳನ್ನು ಒಂದೇ ಕೋಲನ್ನಾಗಿ ಮಾಡುವೆನು. ಅವರು ನನ್ನ ಕೈಯಲ್ಲಿ ಒಂದಾಗುವರು ಎಂಬದು;

ಯೆಹೆಜ್ಕೇಲ 37:25

ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು.

ಮತ್ತಾಯ 23:36

ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು.

ರೋಮಾಪುರದವರಿಗೆ 9:20

ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?

Interlinear

Choose Theme