Home Bibles ಯೆಹೆಜ್ಕೇಲ 18:22 · ಕನ್ನಡ ಬೈಬಲ್
ಯೆಹೆಜ್ಕೇಲ 18:22 · ಕನ್ನಡ ಬೈಬಲ್

ಅವನು ಮಾಡಿದ ಅಪರಾಧಗಳೆಲ್ಲಾ ಅವನಿಗೆ ವಿರುದ್ದವಾಗಿ ಜ್ಞಾಪಕಮಾಡಲ್ಪಡುವದಿಲ್ಲ; ಅವನು ಮಾಡಿದ ನೀತಿಯಿಂದಲೇ ಅವನು ಬದುಕುವನು.

Cross references

1 ಅರಸುಗಳು 17:18

ಆಗ ಅವಳು ಎಲೀಯ ನಿಗೆ--ಓ ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವ ದಕ್ಕೂ ನನ್ನ ಮಗನು ಸಾಯುವದಕ್ಕೂ ನನ್ನ ಬಳಿಗೆ ಬಂದಿಯೋ ಅಂದಳು.

2 ದಿನವೃತ್ತಾಂತ 6:23

ಈ ಆಲಯದಲ್ಲಿ ನಿನ್ನ ಬಲಿಪೀಠದ ಮುಂದೆ ಈ ಆಣೆ ಬಂದರೆ ನೀನೇ ದುಷ್ಟನ ಮಾರ್ಗವನ್ನು ಅವನ ತಲೆಯ ಮೇಲೆ ಬರ ಮಾಡಿ ಅವನಿಗೆ ಬದಲು ಕೊಡುವ ಹಾಗೆಯೂ ನೀತಿವಂತನನ್ನು ನೀತಿವಂತನಾಗಿ ಮಾಡಿ ಅವನ ನೀತಿಯ ಪ್ರಕಾರ ಅವನಿಗೆ ಕೊಡುವ ಹಾಗೆಯೂ ನೀನು ಆಕಾಶದಿಂದ ಕೇಳಿ ನಡಿಸಿ ನಿನ್ನ ಸೇವಕರ ನ್ಯಾಯವನ್ನು ತೀರಿಸು.

ಕೀರ್ತನೆಗಳು 18:20

ಕರ್ತನು ನನ್ನ ನೀತಿಯ ಪ್ರಕಾರ ನನಗೆ ಪ್ರತಿಫಲ ಕೊಟ್ಟನು. ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಬದಲು ಕೊಟ್ಟನು.

ಕೀರ್ತನೆಗಳು 19:11

ನಿನ್ನ ಸೇವಕನು ಅವುಗಳಿಂದ ಎಚ್ಚರಿಸಲ್ಪಡು ತ್ತಾನೆ; ಅವುಗಳನ್ನು ಕೈಕೊಳ್ಳುವದರಲ್ಲಿ ದೊಡ್ಡ ಪ್ರತಿ ಫಲ ಉಂಟು.

ಕೀರ್ತನೆಗಳು 25:7

ಓ ಕರ್ತನೇ, ನನ್ನ ಯೌವನದ ಪಾಪಗಳನ್ನೂ ದ್ರೋಹಗಳನ್ನೂ ಜ್ಞಾಪಕ ಮಾಡಿಕೊಳ್ಳದೆ ನಿನ್ನ ಕರುಣೆಯ ಪ್ರಕಾರ ನಿನ್ನ ಒಳ್ಳೇ ತನದ ನಿಮಿತ್ತ ನೀನು ನನ್ನನ್ನು ಜ್ಞಾಪಕ ಮಾಡಿಕೋ.

ಕೀರ್ತನೆಗಳು 32:1

ಯಾವನ ದ್ರೋಹವು ಕ್ಷಮಿಸಲ್ಪಟ್ಟದೆಯೋ, ಯಾವನ ಪಾಪವು ಮುಚ್ಚಲ್ಪಟ್ಟಿದೆಯೋ, ಅವನೇ ಧನ್ಯನು.

ಕೀರ್ತನೆಗಳು 51:1

ಓ ದೇವರೇ, ನನ್ನ ಮೇಲೆ ಕರುಣೆಯಿಡು; ನಿನ್ನ ಪ್ರೀತಿಕರುಣೆಯ ಪ್ರಕಾರ ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ದ್ರೋಹ ಗಳನ್ನು ಅಳಿಸಿಬಿಡು.

ಕೀರ್ತನೆಗಳು 103:12

ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾನೆ.

ಯೆಶಾಯ 43:25

ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.

ಯೆರೆಮಿಯ 31:34

ಆದರೆ ನನ್ನ ಹೆಸರಿನಿಂದ ಕರೆಯ ಲ್ಪಟ್ಟಿರುವ ಮನೆಯಲ್ಲಿ ಅದನ್ನು ಅಪವಿತ್ರ ಮಾಡುವ ಹಾಗೆ ತಮ್ಮ ಅಸಹ್ಯಗಳನ್ನು ಇಟ್ಟಿದ್ದಾರೆ.

ಯೆರೆಮಿಯ 50:20

ನೀನು ನನ್ನ ಸುತ್ತಿಗೆಯೇ, ನನ್ನ ಯುದ್ಧದ ಆಯುಧಗಳೇ, ನಿನ್ನಿಂದ ಜನಾಂಗಗಳನ್ನು ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಾಜ್ಯಗಳನ್ನು ನಾಶಮಾಡುತ್ತೇನೆ;

ಯೆಹೆಜ್ಕೇಲ 18:24

ಆದರೆ ನೀತಿ ವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡಿ ದುಷ್ಟನು ಮಾಡುವ ಎಲ್ಲಾ ಅಸಹ್ಯವಾದವುಗಳ ಹಾಗೆ ಮಾಡಿದರೆ ಅವನು ಬದುಕುವನೇ? ಅವನು ಮಾಡಿ ರುವ ಎಲ್ಲಾ ನೀತಿಯು ಜ್ಞಾಪಕಮಾಡಲ್ಪಡುವದಿಲ್ಲ; ಅವನು ಮಾಡಿರುವ ಅಪರಾಧದಿಂದಲೂ ಪಾಪ ದಿಂದಲೂ ಅವುಗಳಲ್ಲಿ ಸಾಯುವನು.

ಯೆಹೆಜ್ಕೇಲ 33:16

ಅವನು ಮಾಡಿರುವ ಪಾಪ ಗಳಲ್ಲಿ ಒಂದಾದರೂ ಅವನಿಗೆ ವಿರೋಧವಾಗಿ ಜ್ಞಾಪ ಕಕ್ಕೆ ಬರುವದಿಲ್ಲ; ಅವನು ನ್ಯಾಯವನ್ನೂ ನೀತಿ ಯನ್ನೂ ಮಾಡಿದ್ದರಿಂದ ನಿಶ್ಚಯವಾಗಿ ಬದುಕುವನು.

ಮೀಕ 7:19

ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ಅವರ ಪಾಪಗಳ ನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವಿ.ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.

ರೋಮಾಪುರದವರಿಗೆ 2:6

ದೇವರು ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿ ಗನುಸಾರವಾಗಿ ಪ್ರತಿಫಲ ಕೊಡುವನು.

ರೋಮಾಪುರದವರಿಗೆ 8:1

ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.

ಗಲಾತ್ಯದವರಿಗೆ 6:7

ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.

ಹೆಬ್ರಿಯರಿಗೆ 8:12

ನಾನು ಅವರ ಅನೀತಿಯ ವಿಷಯವಾಗಿ ಕರುಣೆಯುಳ್ಳವನಾಗಿದ್ದು ಅವರ ಪಾಪಗಳನ್ನೂ ಅಪರಾಧಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ನುಡಿಯು ತ್ತಾನೆ.ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ.

ಹೆಬ್ರಿಯರಿಗೆ 10:3

ಆದರೆ ಪ್ರತಿ ವರುಷವು ಆ ಯಜ್ಞಗಳಲ್ಲಿ ತಿರಿಗಿ ಪಾಪಗಳ ಜ್ಞಾಪಕವಾಗುವದುಂಟು.

ಯಾಕೋಬ 2:21

ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ?

2 ಪೇತ್ರ 1:5

ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ

1 ಯೋಹಾನ 3:7

ಚಿಕ್ಕ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಆತನು ಹೇಗೆ ನೀತಿವಂತ ನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.

Interlinear

Choose Theme