Home Bibles ಯೆಹೆಜ್ಕೇಲ 18:28 · ಕನ್ನಡ ಬೈಬಲ್
ಯೆಹೆಜ್ಕೇಲ 18:28 · ಕನ್ನಡ ಬೈಬಲ್

ತಾನು ಆಲೋಚಿಸಿ ತಾನು ಮಾಡುವ ಎಲ್ಲಾ ದುಷ್ಕೃತ್ಯಗಳನ್ನು ಬಿಟ್ಟು ತಿರುಗಿ ಕೊಳ್ಳುವದರಿಂದ ಸಾಯದೆ ನಿಶ್ಚಯವಾಗಿ ಬದುಕು ವನು.

Cross references

ದ್ವಿತೀಯೋಪದೇಶಕಾಂಡ 32:29

ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು!

1 ಸಮುವೇಲ 7:3

ಆಗ ಸಮುವೇಲನು ಇಸ್ರಾಯೇಲ್‌ ಮನೆಯವರಿಗೆಲ್ಲಾ ಮಾತನಾಡಿ--ನೀವು ನಿಮ್ಮ ಪೂರ್ಣಹೃದಯದಿಂದ ಕರ್ತನ ಕಡೆಗೆ ತಿರುಗಿ ನಿಮ್ಮಲ್ಲಿರುವ ಅನ್ಯದೇವರುಗಳನ್ನೂ ಅಷ್ಟೋ ರೆತ್‌ನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ ನಿಮ್ಮ ಹೃದಯವನ್ನು ಕರ್ತನಿಗೆ ಸಿದ್ಧಮಾಡಿ ಆತನೊಬ್ಬನನ್ನೇ ಸೇವಿಸಿದರೆ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಗಳೊ ಳಗಿಂದ ತಪ್ಪಿಸುವನು.

ಕೀರ್ತನೆಗಳು 119:1

ಮಾರ್ಗದಲ್ಲಿ ಅಶುದ್ಧರಾಗದವರೂ ಕರ್ತನ ನ್ಯಾಯಪ್ರಮಾಣದಲ್ಲಿ ನಡೆದುಕೊಳ್ಳುವವರೂ ಧನ್ಯರು.

ಕೀರ್ತನೆಗಳು 119:6

ಆಗ ನಿನ್ನ ಆಜ್ಞೆಗಳನ್ನೆಲ್ಲಾ ದೃಷ್ಟಿಸುವಾಗ ನಾಚಿಕೆ ಪಡೆನು.

ಕೀರ್ತನೆಗಳು 119:59

ನನ್ನ ಮಾರ್ಗಗಳನ್ನು ಯೋಚಿಸಿಕೊಂಡು ನಿನ್ನ ಸಾಕ್ಷಿಗಳ ಕಡೆಗೆ ನನ್ನ ಪಾದ ಗಳನ್ನು ತಿರುಗಿಸಿದ್ದೇನೆ.

ಯೆರೆಮಿಯ 31:18

ನೀನು ಸಾವಿರಾರು ತಲೆಗಳ ವರೆಗೆ ಪ್ರೀತಿ, ದಯೆ ತೋರಿಸಿ ತಂದೆಗಳ ಅಕ್ರಮವನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸಲ್ಲಿಸುವವನಾಗಿದ್ದೀ; ಮಹತ್ವ ವುಳ್ಳವನೂ ಪರಾಕ್ರಮವುಳ್ಳ ದೇವರೂ ಸೈನ್ಯಗಳ ಕರ್ತನೂ ಎಂಬದು ಆತನ ಹೆಸರು.

ಯೆಹೆಜ್ಕೇಲ 12:3

ಮನುಷ್ಯ ಪುತ್ರನೇ, ನೀನು ತೆಗೆದುಹಾಕು ವದಕ್ಕೆ ಸಾಮಾನುಗಳನ್ನು ಸಿದ್ಧಮಾಡಿ ಹಗಲಿನಲ್ಲಿ ಅವರ ದೃಷ್ಟಿಯಿಂದ ತೊಲಗಿ ಹೋಗು; ಹೌದು, ಅವರ ಕಣ್ಣುಗಳ ಮುಂದೆಯೇ ನಿನ್ನ ಸ್ಥಳವನ್ನು ಬಿಟ್ಟು ಬೇರೊಂದು ಸ್ಥಳಕ್ಕೆ ಹೋಗು; ಅವರು ತಿರುಗಿ ಬೀಳುವ ಮನೆತನದವರಾದಾಗ್ಯೂ ಒಂದು ವೇಳೆ ಮನಸ್ಸು ಮಾಡಿಯಾರು.

ಯೆಹೆಜ್ಕೇಲ 18:14

ಆಗ ಇಗೋ, ಅವನು ಮಗನನ್ನು ಪಡೆದ ಮೇಲೆ ತನ್ನ ತಂದೆ ಮಾಡಿದ ಪಾಪಗಳನ್ನೆಲ್ಲಾ ನೋಡಿ ಆಲೊಚಿಸಿ, ಅವುಗಳಂತೆ ಮಾಡದೆ;

ಯೆಹೆಜ್ಕೇಲ 18:21

ಆದರೆ ದುಷ್ಟನು ತಾನು ಮಾಡಿದ ಪಾಪಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನ್ಯಾಯವನ್ನೂ ನೀತಿಯನ್ನೂ ನಡೆಸಿದರೆ ಅವನು ಸಾಯದೆ ನಿಶ್ಚಯವಾಗಿ ಬದುಕುವನು.

ಯೆಹೆಜ್ಕೇಲ 18:31

ನೀವು ಮಾಡುವ ದುಷ್ಟತ್ವಗಳನ್ನೆಲ್ಲಾ ನಿಮ್ಮಿಂದ ಬಿಟ್ಟುಬಿಡಿರಿ; ಹೊಸ ಹೃದಯವನ್ನೂ ಹೊಸ ಆತ್ಮವನ್ನೂ ನೀವು ಪಡಕೊಳ್ಳಿರಿ; ಯಾಕಂದರೆ ಓ ಇಸ್ರಾಯೇಲಿನ ಮನೆತನದವರೇ, ನೀವು ಸಾಯುವದೇಕೆ?ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.

ಯೆಹೆಜ್ಕೇಲ 33:12

ಮನುಷ್ಯ ಪುತ್ರನೇ. ನೀನು ನಿನ್ನ ಜನರ ಮಕ್ಕಳಿಗೆ ಹೇಳು--ನೀತಿವಂತನ ನೀತಿಯು ಅವನ ಅಪರಾಧದ ದಿನದಲ್ಲಿ ಅವನನ್ನು ತಪ್ಪಿಸುವದಿಲ್ಲ; ಹಾಗೆಯೇ ದುಷ್ಟನ ದುಷ್ಟತ್ವವು ಅವನು ತನ್ನ ದುಷ್ಟತ್ವವನ್ನು ಬಿಟ್ಟು ತಿರುಗುವ ದಿನದಲ್ಲಿ ಅದರಿಂದ ಬೀಳುವದಿಲ್ಲ; ನೀತಿವಂತನು ಪಾಪಮಾಡುವ ದಿನದಲ್ಲಿ ನೀತಿಯಿಂದ ಬದುಕ ಲಾರನು.

ಲೂಕ 15:17

ಅವನಿಗೆ ಬುದ್ದಿ ಬಂದಾಗ ಅವನು--ನನ್ನ ತಂದೆಯ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿ ಉಳಿಯುವಷ್ಟು ಆಹಾರವಿದೆಯಲ್ಲಾ! ನಾನಾದರೋ ಹಸಿವೆಯಿಂದ ಸಾಯುತ್ತಿದ್ದೇನೆ.

ಕೊಲೊಸ್ಸೆಯವರಿಗೆ 3:5

ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ.

ತೀತ 2:14

ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.

ಯಾಕೋಬ 2:10

ಯಾಕಂದರೆ ಯಾವನಾದರೂ ನ್ಯಾಯಪ್ರಮಾಣವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ.

Interlinear

Choose Theme