Home Bibles ಯೆಹೆಜ್ಕೇಲ 18:4 · ಕನ್ನಡ ಬೈಬಲ್
ಯೆಹೆಜ್ಕೇಲ 18:4 · ಕನ್ನಡ ಬೈಬಲ್

ಇಗೋ, ಎಲ್ಲಾ ಪ್ರಾಣಗಳು ನನ್ನವೇ; ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ; ಪಾಪ ಮಾಡುವವನೇ ತಾನಾ ಗಿಯೇ ಸಾಯುವನು.

Cross references

ಅಂಕೆಗಳ ಪುಸ್ತಕ 16:22

ಆಗ ಅವರು ಬೋರಲು ಬಿದ್ದು--ಓ ದೇವರೇ, ಎಲ್ಲಾ ಶರೀರಾತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀನು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳು ತ್ತೀಯೋ ಅಂದರು.

ಅಂಕೆಗಳ ಪುಸ್ತಕ 27:16

ಅವನು ಅವರ ಮುಂದಾಗಿ ಹೋಗಲಿ; ಅವರ ಮುಂದಾಗಿ ಬರಲಿ; ಅವರನ್ನು ಕರಕೊಂಡು ಹೋಗಲಿ; ಅವರನ್ನು ಕರಕೊಂಡು ಬರಲಿ;

ದ್ವಿತೀಯೋಪದೇಶಕಾಂಡ 24:16

ತಂದೆಗಳು ಮಕ್ಕಳ ನಿಮಿತ್ತವೂ ಮಕ್ಕಳು ತಂದೆಗಳ ನಿಮಿತ್ತವೂ ಕೊಲ್ಲಲ್ಪಡಬಾರದು; ಒಬ್ಬೊಬ್ಬನು ತನ್ನ ಪಾಪದ ನಿಮಿತ್ತ ಕೊಲ್ಲಲ್ಪಡಬೇಕು.

ಯೋಬ 8:4

ನಿನ್ನ ಮಕ್ಕಳು ಆತನಿಗೆ ವಿರೋಧವಾಗಿ ಪಾಪಮಾಡಿದ್ದರೆ, ಅವರ ದ್ರೋಹದ ದೆಸೆಯಿಂದ ಅವರನ್ನು ತಳ್ಳಿಬಿಡುವನು.

ಯೆಶಾಯ 42:5

ಆಕಾಶವನ್ನು ನಿರ್ಮಿಸಿ ಹಾಸಿದವನು ಭೂಮಿಯನ್ನು ಅದರಿಂದ ಉತ್ಪತ್ತಿ ಯನ್ನೂ ವಿಸ್ತರಿಸಿ, ಅದರ ಮೇಲಿರುವ ಜನರಿಗೆ ಶ್ವಾಸವನ್ನೂ ಸಂಚರಿಸುವವರಿಗೆ ಆತ್ಮವನ್ನು ಕೊಡು ತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ--

ಯೆಶಾಯ 57:16

ನಾನು ಎಂದೆಂದಿಗೂ ವ್ಯಾಜ್ಯ ವಾಡುವದಿಲ್ಲ, ಇಲ್ಲವೆ ಯಾವಾಗಲೂ ಕೋಪಿಸಿ ಕೊಳ್ಳೆನು. ಯಾಕಂದರೆ ಆತ್ಮವೂ ನಾನು ಉಂಟು ಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.

ಯೆಹೆಜ್ಕೇಲ 3:18

ನಾನು ದುಷ್ಟನಿಗೆ--ನೀನು ನಿಶ್ಚಯವಾಗಿ ಸಾಯುವಿ ಯೆಂದು ಹೇಳುವಾಗ ನೀನು ಅವನನ್ನು ಎಚ್ಚರಿಸದೆ ಅವನನ್ನು ಬದುಕಿಸುವ ಹಾಗೆ ದುಷ್ಟನನ್ನು ಅವನ ದುಷ್ಟಮಾರ್ಗದ ವಿಷಯದಲ್ಲಿ ಎಚ್ಚರಿಸಿ ಮಾತನಾಡದೆ ಹೋದರೆ ಆ ದುಷ್ಟನು ತನ್ನ ಅಕ್ರಮದಲ್ಲೇ ಸಾಯು ವನು. ಆದರೆ ಅವನ ರಕ್ತವನ್ನು ನಿನ್ನ ಕೈಯಿಂದ ದುಷ್ಟತ್ವ ಕ್ಕಾಗಿ ನಾನು ವಿಚಾರಿಸುವೆನು.

ಯೆಹೆಜ್ಕೇಲ 18:20

ಪಾಪ ಮಾಡುವ ಪ್ರಾಣವು ತಾನಾಗಿ ಸಾಯುವದು; ಮಗನು ತಂದೆಯ ಅಕ್ರಮವನ್ನು ಹೊರುವದಿಲ್ಲ. ತಂದೆಯು ಮಗನ ಅಕ್ರಮವನ್ನು ಹೊರುವದಿಲ್ಲ. ನೀತಿವಂತನ ನೀತಿಯು ಅವನ ಮೇಲೆಯೇ ಇರುವದು. ದುಷ್ಟನ ದುಷ್ಟತ್ವವು ಅವನ ಮೇಲೆಯೇ ಇರುವದು.

ಯೆಹೆಜ್ಕೇಲ 33:8

ನಾನು ದುಷ್ಟನಿಗೆ--ಓ ದುಷ್ಟ ಮನುಷ್ಯನೇ, ನೀನು ನಿಶ್ಚಯವಾಗಿ ಸಾಯುವಿ ಎಂದು ಹೇಳುವಾಗ ಒಂದು ವೇಳೆ ನೀನು ಅವನೊಂದಿಗೆ ಮಾತನಾಡದೆ ದುಷ್ಟನನ್ನು ಅವನ ಮಾರ್ಗದಿಂದ ಎಚ್ಚರಿಸದಿದ್ದರೆ ಆ ದುಷ್ಟ ಮನುಷ್ಯನು ಅವನ ಅಕ್ರಮಗಳಲ್ಲಿಯೇ ಸಾಯುವನು; ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು.

ಜೆಕರ್ಯ 12:1

ಇಸ್ರಾಯೇಲಿನ ವಿಷಯವಾದ ಕರ್ತನ ವಾಕ್ಯದ ಭಾರವು ಆಕಾಶವನ್ನು ಹರಡಿಸು ವಾತನೂ ಭೂಮಿಯ ಅಸ್ತಿವಾರವನ್ನು ಹಾಕುವಾತನೂ ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತನೂ ಆದ ಕರ್ತನು ಹೇಳುವದೇನಂದರೆ--

ರೋಮಾಪುರದವರಿಗೆ 6:23

ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.

ಗಲಾತ್ಯದವರಿಗೆ 3:10

ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.

ಗಲಾತ್ಯದವರಿಗೆ 3:22

ಹಾಗಾದರೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡು ವದರಿಂದ ಉಂಟಾಗುವ ಆ ವಾಗ್ದಾನವು ನಂಬುವ ವರಿಗೇ ಕೊಡಲ್ಪಡುವಂತೆ ಎಲ್ಲರೂ ಪಾಪಕ್ಕೊಳ ಗಾಗಿದ್ದಾರೆಂದು ಬರಹವು ತೀರ್ಮಾನಿಸಿತು.

ಹೆಬ್ರಿಯರಿಗೆ 12:9

ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿ ಸಿದೆವಷ್ಟೆ; ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ?

Interlinear

Choose Theme