ತನ್ನ ಮರಿಗಳಲ್ಲಿ ಒಂದನ್ನು ಬೆಳೆಸಿದಳು; ಇದು ಪ್ರಾಯದ ಸಿಂಹವಾಯಿತು, ಇದು ಕೊಳ್ಳೆ ಹೊಡೆಯು ವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು.
Cross references
ಯೆಹೋವಾಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ಮೂರು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿ ಲಿಬ್ನ ಪಟ್ಟಣದ ಯೆರೆವಿಾಯನ ಮಗಳಾಗಿದ್ದು ಹಮೂಟಲ್ ಎಂಬವಳಾಗಿದ್ದಳು.
ಫರೋಹನೆಕೋ ಯೋಷೀಯನ ಮಗ ನಾದ ಎಲ್ಯಾಕೀಮನನ್ನು ಅವನ ತಂದೆಯಾದ ಯೋಷೀ ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಯೆಹೋಯಾಕೀಮನೆಂಬ ಬದಲು ಹೆಸರನ್ನಿಟ್ಟು ಯೆಹೋವಾಹಾಜನನ್ನು ತೆಗೆದುಕೊಂಡು ಹೋದನು; ಅವನು ಐಗುಪ್ತದಲ್ಲಿ ಸತ್ತನು.
ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು, ತಕ್ಕೊಂಡು ಯೆರೂಸಲೇಮಿನಲ್ಲಿ ಅವನ ತಂದೆಗೆ ಬದ ಲಾಗಿ ಅವನನ್ನು ಅರಸನಾಗಿ ಮಾಡಿದರು.
ಅದು ಸಿಂಹಗಳ ಮಧ್ಯೆ ತಿರುಗಾಡಿ ಪ್ರಾಯದ ಸಿಂಹವಾಗಿ ಕೊಳ್ಳೆ ಹೊಡೆ ಯುವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು.
ಕೊಳ್ಳೆಯನ್ನು ಸುಲಿದುಕೊಳ್ಳುವ ಘರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ. ಸಂಪತ್ತನ್ನೂ ಅಮೂಲ್ಯವಾದ ವಸ್ತುವನ್ನೂ ದೋಚಿ ಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ.
ಮನುಷ್ಯ ಪುತ್ರನೇ, ಐಗುಪ್ತ ಅರಸನಾದ ಫರೋಹನ ವಿಷಯ ವಾಗಿ ಗೋಳಾಟವನ್ನೆತ್ತಿ ಅವನಿಗೆ ನೀನು ಹೇಳಬೇಕಾ ದದ್ದೇನಂದರೆ--ನೀನು ಜನಾಂಗಗಳಲ್ಲಿ ಪ್ರಾಯದ ಸಿಂಹಕ್ಕೆ ಸಮನಾಗಿರುವೆ; ಸಮುದ್ರಗಳಲ್ಲಿರುವ ತಿಮಿಂಗಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇಧಿಸಿಕೊಂಡು ಬಂದ ನೀರನ್ನು ನಿನ್ನ ಕಾಲುಗಳಿಂದ ಕಲಕಿ ಹೊಳೆಗಳನ್ನು ತುಳಿದು ಬದಿಗೆ ಮಾಡಿದೆ.
ಕುರುಬರು ಗೋಳಿಡುವ ಶಬ್ದವುಂಟು; ಅವರ ಗೌರವವು ಕೆಡಿಸಲ್ಪಟ್ಟಿದೆ, ಪ್ರಾಯದ ಸಿಂಹಗಳ ಘರ್ಜಿಸುವ ಶಬ್ದವುಂಟು; ಯೊರ್ದನಿನ ಗರ್ವ ಕೆಡಿಸಲ್ಪಟ್ಟಿದೆ.