ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ ಅವ ರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಬಳಿಗೆ ವಿಚಾರಣೆಗಾಗಿ ಬಂದಿರೋ? ನನ್ನ ಜೀವದಾಣೆ, ನಾನು ನಿಮ್ಮಿಂದ ವಿಚಾರಿಸಲ್ಪಡುವದಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.
Cross references
ಸೌಲನು ಕರ್ತನನ್ನು ಕೇಳಿಕೊಂಡಾಗ ಕರ್ತನು ಅವನಿಗೆ ಸ್ವಪ್ನಗ ಳಿಂದಲಾದರೂ ಊರೀಮಿನಿಂದಲಾದರೂ ಪ್ರವಾದಿ ಗಳಿಂದಲಾದರೂ ಪ್ರತ್ಯುತ್ತರಕೊಡಲಿಲ್ಲ.
ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.
ದುಷ್ಟರ ಯಜ್ಞವು ಅಸಹ್ಯ; ಹೀಗಾದರೆ ದುರ್ಬುದ್ಧಿ ಯಿಂದ ಅದನ್ನು ಅರ್ಪಿಸಿದರೆ ಇನ್ನೂ ಎಷ್ಟೋ ಅಸಹ್ಯ ಕರವಾಗಿದೆ.
ನ್ಯಾಯಪ್ರಮಾಣವನ್ನು ಕೇಳದೆ ತನ್ನ ಕಿವಿಯನ್ನು ತಿರುಗಿಸಿಕೊಳ್ಳುವವನ ಪ್ರಾರ್ಥನೆಯು ಅಸಹ್ಯ.
ನೀವು ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳ ಬೇಕೆಂದು ಬರುತ್ತೀರಲ್ಲಾ; ನನ್ನ ಪ್ರಾಕಾರಗಳನ್ನು ತುಳಿ ಯಲು ಯಾರು ನಿಮ್ಮನ್ನು ಕೇಳಿಕೊಂಡರು?
ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.
ಆದಾಗ್ಯೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕು ತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ನ್ಯಾಯವನ್ನು ಬಿಡದೆ ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸವಿಾಪಿಸುವದರಲ್ಲಿ ಸಂತೋಷಿಸುತ್ತಾರೆ.
ಆಮೇಲೆ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದು ನನ್ನ ಮುಂದೆ ಕುಳಿತುಕೊಂಡರು.
ಮನುಷ್ಯಪುತ್ರನೇ, ಈ ಮನು ಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ ತಮ್ಮ ಅಕ್ರಮವಾದ ಎಡೆತಡೆಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವರೆಲ್ಲ ರನ್ನೂ ನಾನು ವಿಚಾರಿಸಬೇಕೇ?
ನನಗೆ ತನ್ನನ್ನು ಅನ್ಯನನ್ನಾಗಿ ಮಾಡಿಕೊಂಡು ತನ್ನ ಹೃದಯದಲ್ಲಿ ವಿಗ್ರಹಗಳನ್ನು ಸ್ಥಾಪಿಸಿ ಅಕ್ರಮದ ಎಡೆತಡೆಯನ್ನು ತನ್ನ ಮುಖದ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ನನ್ನ ವಿಷಯವಾಗಿ ವಿಚಾರಿಸಲು ಬರುವ ಪ್ರತಿಯೊಬ್ಬ ಇಸ್ರಾಯೇಲಿನ ಮನೆತನದವರಲ್ಲಿಯೂ ಇಸ್ರಾಯೇಲಿನಲ್ಲಿ ತಂಗುವ ಅನ್ಯರಲ್ಲಿಯೂ ಪ್ರತಿಯೊ ಬ್ಬನಿಗೂ ಕರ್ತನಾದ ನಾನೇ ಉತ್ತರ ಕೊಡುತ್ತೇನೆ.
ನಿಮ್ಮ ದಾನ ಗಳನ್ನು ತರುವಾಗಲೂ ನಿಮ್ಮ ಕುಮಾರರನ್ನು ಬೆಂಕಿ ಯಿಂದ ದಾಟಿಸುವಾಗಲೂ ನೀವು ಇಂದಿನ ವರೆಗೂ ನಿಮ್ಮ ಎಲ್ಲಾ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಪಡಿಸಿ ಕೊಳ್ಳುತ್ತೀರಿ; ಹೀಗಾದರೆ ನಾನು ನಿಮ್ಮಿಂದ ವಿಚಾರಿಸ ಲ್ಪಟ್ಟೆನೊ? ನನ್ನ ಜೀವದಾಣೆ ನಾನು ನಿಮ್ಮಿಂದ ವಿಚಾರಿಸ ಲ್ಪಡುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ;
ಆಗ ದರ್ಶಿಗಳು ನಾಚಿಕೆಪಡುವರು, ಶಕುನಗಾರರು ವಿಸ್ಮಯಗೊಳ್ಳುವರು; ಹೌದು, ದೇವರಿಂದ ಉತ್ತರ ವಿಲ್ಲದ ಕಾರಣ ಎಲ್ಲರೂ ತಮ್ಮ ತುಟಿಗಳನ್ನು ಮುಚ್ಚಿ ಕೊಳ್ಳುವರು.
ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?
ಆದೇ ನಂದರೆ-- ಈ ಜನರು ತಮ್ಮ ಬಾಯಿಂದ ನನ್ನನ್ನು ಸಮಾಪಿಸಿ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.
ಆಗ ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಹೊರಟು ಬಂದ ಜನಸಮೂಹಕ್ಕೆ--ಓ ಸರ್ಪಗಳ ಸಂತತಿಯವರೇ, ಬರುವದಕ್ಕಿರುವ ಕೋಪದಿಂದ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಎಚ್ಚರಿಸಿದವರಾರು?
ದೇವರು ಆತ್ಮನಾಗಿದ್ದಾನೆ; ಆತನನ್ನು ಆರಾಧಿಸುವ ವರು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸತಕ್ಕದ್ದು ಅಂದನು.