ದೇವರಾದ ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಸುರಿಸಿದ ರೋಷ ದಿಂದಲೂ ನಾನು ನಿಮ್ಮ ಮೇಲೆ ಅಧಿಕಾರ ನಡಿಸು ತ್ತೇನೆ.
Cross references
ಆದದರಿಂದ ಇಸ್ರಾ ಯೇಲ್ ಮಕ್ಕಳಿಗೆ--ನಾನೇ ಕರ್ತನು, ನಾನು ನಿಮ್ಮನ್ನು ಐಗುಪ್ತದ ಬಿಟ್ಟೀಕೆಲಸಗಳಿಂದ ಹೊರಗೆ ಬರಮಾಡಿ ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ ನಾನು ಚಾಚಿದ ಬಾಹುವಿನಿಂದಲೂ ದೊಡ್ಡ ನ್ಯಾಯತೀರ್ಪುಗ ಳಿಂದಲೂ
ಅವರು ನಿನ್ನ ಮಹಾ ಹೆಸರನ್ನೂ ಬಲವಾದ ಕೈಯನ್ನೂ ಚಾಚಿದ ತೋಳನ್ನೂ ಕುರಿತು ಕೇಳುವರು.
ನೀವು ಈ ವಾಕ್ಯಗಳನ್ನು ಕೇಳದೆಹೋದರೆ, ಈ ಮನೆ ಹಾಳಾಗುವದೆಂದು ನನ್ನ ಮೇಲೆ ಆಣೆ ಇಡುತ್ತೇನೆ ಎಂದು ಕರ್ತನು ಅನ್ನುತ್ತಾನೆ.
ಆತನು ಶತ್ರುವಿನ ಹಾಗೆ ತನ್ನ ಬಿಲ್ಲನ್ನು ಬೊಗ್ಗಿಸಿದ್ದಾನೆ, ವೈರಿಯ ಹಾಗೆ ತನ್ನ ಬಲಗೈ ಎತ್ತಿ ನಿಂತುಕೊಂಡು ಕಣ್ಣಿಗೆ ರಮ್ಯವಾಗಿ ಕಾಣುವ ಎಲ್ಲವುಗಳನ್ನು ಕೊಂದುಹಾಕಿದ್ದಾನೆ. ಆತನು ತನ್ನ ರೋಷವೆಂಬ ಅಗ್ನಿಯನ್ನು ಚೀಯೋನ್ ಮಗಳ ಗುಡಾರದಲ್ಲಿ ಸುರಿದಿದ್ದಾನೆ.
ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.
ಹೌದು, ಎಲ್ಲಾ ಇಸ್ರಾಯೇಲ್ಯರು ನಿನ್ನ ನ್ಯಾಯ ಪ್ರಮಾಣವನ್ನು ವಿಾರಿ ನಿನ್ನ ಸ್ವರಕ್ಕೆ ಕಿವಿಗೊಡದೆ ತೊಲಗಿದ್ದದರಿಂದ ಶಾಪವು ದೇವರ ಸೇವಕನಾದ ಮೋಶೆಯು ನ್ಯಾಯ ಪ್ರಮಾಣದಲ್ಲಿ ಬರೆದ ಆಣೆಯು, ಆತನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ ನಮ್ಮ ಮೇಲೆ ಹೊಯ್ಯಲ್ಪಟ್ಟಿದೆ.