Home Bibles ಯೆಹೆಜ್ಕೇಲ 20:38 · ಕನ್ನಡ ಬೈಬಲ್
ಯೆಹೆಜ್ಕೇಲ 20:38 · ಕನ್ನಡ ಬೈಬಲ್

ಇದ ಲ್ಲದೆ ತಿರುಗಿಬಿದ್ದವರನ್ನೂ ನನಗೆ ವಿರೋಧವಾಗಿ ಅಪರಾಧಮಾಡಿದವರನ್ನೂ ನಿಮ್ಮೊಳಗಿಂದ ಶುದ್ಧಿ ಮಾಡುತ್ತೇನೆ. ಅವರು ತಂಗುವ ದೇಶದೊಳಗಿಂದ ಅವರನ್ನು ಹೊರಗೆ ತರುತ್ತೇನೆ. ಅವರು ಇಸ್ರಾಯೇಲ್‌ ದೇಶದೊಳಗೆ ಹೋಗದ ಹಾಗೆ ಮಾಡಿ ನಾನೇ ಕರ್ತ ನೆಂಬದನ್ನು ಅವರಿಗೆ ತಿಳಿಸುತ್ತೇನೆ.

Cross references

ಅಂಕೆಗಳ ಪುಸ್ತಕ 14:28

ಆದದರಿಂದ ನೀನು ಅವರಿಗೆ--ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು ಎಂದು ಕರ್ತನು ಹೇಳುತ್ತಾನೆ.

ಕೀರ್ತನೆಗಳು 9:16

ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್‌. ಸೆಲಾ.

ಕೀರ್ತನೆಗಳು 95:11

ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.

ಯೆಹೆಜ್ಕೇಲ 6:7

ಹತವಾದವರು ನಿಮ್ಮ ಮಧ್ಯದಲ್ಲಿ ಬೀಳು ವರು, ಆಗ ನೀವು ನಾನೇ ಕರ್ತನೆಂದು ತಿಳಿಯುವಿರಿ.

ಯೆಹೆಜ್ಕೇಲ 11:21

ಆದರೆ ಯಾರ ಹೃದಯವು ಅವರ ಹೇಸಿಗೆಗಳ ಮತ್ತು ಅವರ ಅಸಹ್ಯಗಳ ಹೃದಯದ ಬಳಿಗೆ ಹೋಗುತ್ತದೋ, ನಾನು ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸುತ್ತೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.

ಯೆಹೆಜ್ಕೇಲ 13:9

ವ್ಯರ್ಥವಾದದ್ದನ್ನು ದರ್ಶಿಸಿ, ಸುಳ್ಳು ಭವಿಷ್ಯಗಳನ್ನು ಹೇಳುವ ಪ್ರವಾದಿಗಳ ಮೇಲೆ ನನ್ನ ಕೈ ಮಾಡುವೆನು. ಅವರು ನನ್ನ ಜನರ ಸಭೆಯಲ್ಲಿ ಇರುವದೂ ಇಲ್ಲ, ಇಸ್ರಾಯೇಲನ ಮನೆತನದವರ ಪಟ್ಟಿಯಲ್ಲಿ ಬರೆಯಲ್ಪಡುವದೂ ಇಲ್ಲ; ಇಸ್ರಾಯೇಲಿನ ದೇಶದಲ್ಲಿ ಪ್ರವೇಶಿಸುವದೂ ಇಲ್ಲ; ನಾನೇ ದೇವರಾದ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.

ಯೆಹೆಜ್ಕೇಲ 15:7

ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಹೊರಗೆ ಬಂದು ಬೆಂಕಿಯೊಳಗಿಂದ ತಪ್ಪಿಸಿ ಕೊಂಡರೂ ಮತ್ತೊಂದು ಬೆಂಕಿಯು ಅವರನ್ನು ನುಂಗಿ ಬಿಡುವದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ.ಅವರು ಅತಿಕ್ರಮಿಸಿದ್ದರಿಂದ ನಾನು ಆ ದೇಶವನ್ನು ಹಾಳು ಮಾಡುವೆನೆಂದು ದೇವರಾದ ಕರ್ತನು ಹೇಳುತ್ತಾನೆ.

ಯೆಹೆಜ್ಕೇಲ 23:49

ನಿಮ್ಮ ದುಷ್ಕರ್ಮದ ಫಲವನ್ನು ನಿಮ್ಮ ಮೇಲೆಯೇ ಮುಯ್ಯಿ ತೀರಿಸುವೆನು. ನೀವು ನಿಮ್ಮ ವಿಗ್ರಹಗಳ ಪಾಪಗಳನ್ನು ಹೊರುವಿರಿ; ಆಗ ದೇವರಾದ ಕರ್ತನು ನಾನೇ ಎಂದು ತಿಳಿದುಕೊಳ್ಳುವಿರಿ.

ಯೆಹೆಜ್ಕೇಲ 34:17

ನಿಮಗೆ ಓ ನನ್ನ ಮಂದೆಯೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ದನಗಳ ಪಶುಗಳ ನಡುವೆ ಮತ್ತು ಟಗರುಗಳ ಹೋತಗಳ ನಡುವೆ ನಾನು ನ್ಯಾಯತೀರಿಸುವೆನು.

ಯೆಹೆಜ್ಕೇಲ 34:20

ಆದದರಿಂದ ದೇವರಾದ ಕರ್ತನು ನಿಮಗೆ ಹೀಗೆ ಹೇಳುತ್ತಾನೆ-- ಇಗೋ, ನಾನು, ನಾನೇ ಕೊಬ್ಬಿದ ದನಕ್ಕೂ ಮತ್ತು ಬಡಕಲಾದ ದನಕ್ಕೂ ನಡುವೆ ನ್ಯಾಯತೀರಿಸುತ್ತೇನೆ.

ಯೆಹೆಜ್ಕೇಲ 34:22

ಆದದರಿಂದ ನಾನು ನನ್ನ ಮಂದೆಯನ್ನು ಕಾಪಾಡುತ್ತೇನೆ; ಅವು ಎಂದೆಂದೂ ಕೊಳ್ಳೆಯಾಗು ವದಿಲ್ಲ; ನಾನು ದನಗಳ ಮತ್ತು ಪಶುಗಳ ಮಧ್ಯೆ ನ್ಯಾಯತೀರಿಸುವೆನು.

ಆಮೋಸ 9:9

ಇಗೋ, ಮೊರದಲ್ಲಿ ಧಾನ್ಯವನ್ನು ಕೇರುವಂತೆ ನಾನು ಆಜ್ಞಾಪಿಸಿ ಇಸ್ರಾಯೇಲಿನ ಮನೆತನದವ ರನ್ನು ಎಲ್ಲಾ ಜನಾಂಗಗಳಲ್ಲಿ ಕೇರುವೆನು; ಆದಾಗ್ಯೂ ಒಂದು ಕಾಳಾದರೂ ನೆಲಕ್ಕೆ ಬೀಳುವದಿಲ್ಲ.

ಆಮೋಸ 9:10

ಕೇಡು ನಮ್ಮನ್ನು ಹಿಂದಟ್ಟದು, ನಮ್ಮನ್ನು ತಡೆಯುವದಿಲ್ಲ ಎನ್ನುವ ನನ್ನ ಜನರಲ್ಲಿರುವ ಪಾಪಿಷ್ಠರು ಕತ್ತಿಯಿಂದ ಸಾಯುವರು.

ಜೆಕರ್ಯ 13:8

ಕರ್ತನು--ಇದಲ್ಲದೆ ಸಮಸ್ತ ದೇಶದಲ್ಲಿ ಆಗುವದೇನಂದರೆ-- ಅದರಲ್ಲಿ ಎರಡು ಪಾಲು ಕಡಿಯಲ್ಪಟ್ಟು ಸಾಯುವದು; ಆದರೆ ಮೂರನೇ ಪಾಲು ಅದರಲ್ಲಿ ಬಿಡಲ್ಪಡುವದು.ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.

ಮಲಾಕಿ 3:3

ಆತನು ಬೆಳ್ಳಿಯನ್ನು ಕರಗಿಸಿ ಶುದ್ಧಮಾಡುವವನ ಹಾಗೆ ಕುಳಿತು ಲೇವಿಯ ಕುಮಾರರನ್ನು ಶುದ್ಧಮಾಡಿ ಬಂಗಾರದ ಹಾಗೆಯೂ ಬೆಳ್ಳಿಯ ಹಾಗೆಯೂ ಅವ ರನ್ನು ಶುದ್ಧಮಾಡುವನು.

ಮಲಾಕಿ 4:1

ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಮತ್ತಾಯ 3:9

ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.

ಮತ್ತಾಯ 3:12

ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.

ಮತ್ತಾಯ 25:32

ಮತ್ತು ಆತನ ಮುಂದೆ ಎಲ್ಲಾ ಜನಾಂಗಗಳವರು ಕೂಡಿಸಲ್ಪ ಡುವರು; ಆಗ ಕುರುಬನು ತನ್ನ ಕುರಿಗಳನ್ನು ಆಡುಗ ಳಿಂದ ಪ್ರತ್ಯೇಕಿಸುವಂತೆಯೇ ಆತನು ಅವರನ್ನು ಪ್ರತ್ಯೇ ಕಿಸುವನು;

ರೋಮಾಪುರದವರಿಗೆ 9:27

ಯೆಶಾಯನು ಸಹ ಇಸ್ರಾಯೇಲ್ಯರ ವಿಷಯವಾಗಿ--ಇಸ್ರಾಯೇಲ್ಯರ ಮಕ್ಕಳ ಸಂಖ್ಯೆಯು ಸಮುದ್ರದ ಮರಳಿನೋಪಾದಿಯಲ್ಲಿದ್ದರೂ ಒಂದು ಅಂಶ ಮಾತ್ರ ರಕ್ಷಣೆ ಹೊಂದುವದು ಎಂದು ಕೂಗಿ ಹೇಳುತ್ತಾನೆ.

1 ಕೊರಿಂಥದವರಿಗೆ 10:5

ಆದರೆ ಅವ ರೊಳಗೆ ಅನೇಕರ ವಿಷಯದಲ್ಲಿ ದೇವರು ಸಂತೋಷಿ ಸಲಿಲ್ಲ; ಯಾಕಂದರೆ ಅವರು ಅಡವಿಯೊಳಗೆ ಸಂಹರಿ ಸಲ್ಪಟ್ಟರು.

ಹೆಬ್ರಿಯರಿಗೆ 4:3

ಲೋಕದ ಅಸ್ತಿ ವಾರದೊಡನೆ (ಆತನ) ಕೆಲಸಗಳು ಮುಗಿದಿದ್ದರೂ ಆತನು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ಕೋಪದಿಂದ ಪ್ರಮಾಣಮಾಡಿ ದೆನು ಎಂದು ಹೇಳಿದನು. ನಂಬಿರುವ ನಾವೇ ಆ ವಿಶ್ರಾಂತಿಯಲ್ಲಿ ಪ್ರವೇಶಿಸುತ್ತೇವೆ.

ಹೆಬ್ರಿಯರಿಗೆ 4:6

ಆದದರಿಂದ ಕೆಲವರು ಅದರಲ್ಲಿ ಪ್ರವೇಶಿ ಸಲೇಬೇಕೆಂಬದು ಇನ್ನೂ ಇರುವದರಿಂದ ಯಾರಿಗೆ ಮೊದಲು ಅದು ಸಾರಲ್ಪಟ್ಟಿತೋ ಅವರು ಅಪ ನಂಬಿಕೆಯ ನಿಮಿತ್ತ ಒಳಗೆ ಪ್ರವೇಶಿಸಲಿಲ್ಲ.

ಯೂದ 1:5

ನೀವು ಇದನ್ನು ಒಂದು ಸಾರಿ ತಿಳಿದವರಾಗಿದ್ದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವದಂದರೆ--ಕರ್ತನು (ತನ್ನ) ಪ್ರಜೆಯನ್ನು ಐಗುಪ್ತದೇಶದೊಳಗಿಂದ ರಕ್ಷಿಸಿ ದರೂ ತರುವಾಯ ಅವರೊಳಗೆ ನಂಬದೆ ಹೋದ ವರನ್ನು ಸಂಹಾರ ಮಾಡಿದನು.

Interlinear

Choose Theme