Home Bibles ಯೆಹೆಜ್ಕೇಲ 20:9 · ಕನ್ನಡ ಬೈಬಲ್
ಯೆಹೆಜ್ಕೇಲ 20:9 · ಕನ್ನಡ ಬೈಬಲ್

ಆದರೆ ಅವರು ಯಾರ ಮಧ್ಯದಲ್ಲಿದ್ದರೋ ನಾನು ಯಾರ ಮುಂದೆ ಅವರನ್ನು ಐಗುಪ್ತದೇಶದಿಂದ ಹೊರಗೆ ತಂದು ನನ್ನನ್ನು ತಿಳಿಯ ಪಡಿಸಿದೆನೋ? ಆ ಅನ್ಯ ಜನಾಂಗಗಳ ಕಣ್ಣುಗಳ ಮುಂದೆ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಈ ಕೆಲಸ ಮಾಡಿದೆನು;

Cross references

ನಿರ್ಗಮಕಾಂಡ 32:12

ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಕೊಲ್ಲುವದಕ್ಕೂ ಭೂಮಿಯ ಮೇಲಿನಿಂದ ಅವರನ್ನು ದಹಿಸಿಬಿಡುವದಕ್ಕೂ ಆತನು ಅವರನ್ನು ಹೊರಗೆ ಬರಮಾಡಿದ್ದಾನೆ ಎಂದು ಐಗುಪ್ತ್ಯರು ಯಾಕೆ ಹೇಳಬೇಕು? ನಿನ್ನ ಕೋಪದುರಿ ಯನ್ನು ಬಿಟ್ಟು ತಿರುಗಿಕೋ, ನಿನ್ನ ಜನರಿಗೆ ವಿರೋಧ ವಾದ ಈ ಕೇಡಿನ ವಿಷಯದಲ್ಲಿ ನಿನ್ನ ಮನಸ್ಸನ್ನು ಬದಲಾಯಿಸು.

ಅಂಕೆಗಳ ಪುಸ್ತಕ 14:13

ಆಗ ಮೋಶೆ ಕರ್ತನಿಗೆ--ಹಾಗಾದರೆ ಐಗುಪ್ತ್ಯರು ಅದನ್ನು ಕೇಳುವರು; ನೀನು ಈ ಜನರನ್ನು ನಿನ್ನ ಬಲದೊಂದಿಗೆ ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಿಯಲ್ಲಾ!

ದ್ವಿತೀಯೋಪದೇಶಕಾಂಡ 9:28

ನಮ್ಮನ್ನು ಎಲ್ಲಿಂದ ಹೊರಗೆ ಬರಮಾಡಿದಿಯೋ ಆ ದೇಶವು--ಕರ್ತನು ಅವರಿಗೆ ಹೇಳಿದ ದೇಶದಲ್ಲಿ ಅವರನ್ನು ಬರಮಾಡ ಲಾರದೆ ಇದ್ದದ್ದರಿಂದಲೂ ಅವರನ್ನು ಹಗೆಮಾಡಿದ್ದ ರಿಂದಲೂ ಅರಣ್ಯದಲ್ಲಿ ಅವರನ್ನು ಕೊಂದುಹಾಕುವ ಹಾಗೆ ಅವರನ್ನು ಹೊರಗೆ ಬರಮಾಡಿದನೆಂದು ಹೇಳಬಾರದು.ಆದಾಗ್ಯೂ ನೀನು ನಿನ್ನ ದೊಡ್ಡ ಶಕ್ತಿಯಿಂದಲೂ ಚಾಚಿದ ನಿನ್ನ ಕೈಯಿಂದಲೂ ಹೊರಗೆ ಬರಮಾಡಿದ ನಿನ್ನ ಜನವೂ ಸ್ವಾಸ್ತ್ಯವೂ ಇವರೇ ಎಂದು ಹೇಳಿದೆನು.

ದ್ವಿತೀಯೋಪದೇಶಕಾಂಡ 32:26

ನಾನು--ಅವರನ್ನು ಚದುರಿಸಿಬಿಡುವೆನೆಂದು ಹೇಳಿಕೊಂಡೆನು; ಅವರ ಜ್ಞಾಪಕವನ್ನು ಮನುಷ್ಯರಲ್ಲಿ ಇರದ ಹಾಗೆ ಮಾಡುವೆನು.

ಯೆಹೋಶುವ 2:10

ನೀವು ಐಗುಪ್ತದಿಂದ ಹೊರಡುವಾಗ ಕರ್ತನು ನಿಮಗೋಸ್ಕರ ಕೆಂಪು ಸಮುದ್ರದ ನೀರನ್ನು ಬತ್ತಿಹೋಗ ಮಾಡಿದ್ದನ್ನೂ ಯೊರ್ದನಿಗೆ ಆಚೆಯಲ್ಲಿದ್ದ ಅಮೋರಿ ಯರ ಇಬ್ಬರು ಅರಸುಗಳಾದ ಸೀಹೋನನನ್ನು ಓಗನನ್ನು ನೀವು ಸಂಪೂರ್ಣ ನಿರ್ಮೂಲ ಮಾಡಿದ್ದನ್ನೂ ನಾವು ಕೇಳಿದ್ದೇವೆ.

ಯೆಹೋಶುವ 7:9

ಯಾಕಂದರೆ ಕಾನಾನ್ಯರೂ ದೇಶ ವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿ ಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದು ಬಿಡುವರು; ಆಗ ನಿನ್ನ ಮಹತ್ತಾದ ಹೆಸರಿಗೆ ಏನು ಮಾಡುವಿ ಅಂದನು.

ಯೆಹೋಶುವ 9:9

ಅವರು ಅವನಿಗೆ--ನಿಮ್ಮ ದೇವರಾದ ಕರ್ತನ ಹೆಸರಿಗೋಸ್ಕರ ನಿನ್ನ ಸೇವಕರಾದ ನಾವು ದೂರದೇಶದಿಂದ ಬಂದೆವು. ಯಾಕಂದರೆ ಆತನ ಕೀರ್ತಿಯನ್ನೂ ಆತನು ಐಗುಪ್ತದಲ್ಲಿ ಮಾಡಿದ ಎಲ್ಲವನ್ನೂ

1 ಸಮುವೇಲ 4:8

ನಮಗೆ ಅಯ್ಯೋ! ಆ ಪರಾಕ್ರಮಿಯಾದ ದೇವರುಗಳ ಕೈಯಿಂದ ನಮ್ಮನ್ನು ತಪ್ಪಿಸುವವನಾರು ಐಗುಪ್ತ್ಯರನ್ನು ಅರಣ್ಯದಲ್ಲಿ ಸಕಲ ಬಾಧೆಗಳಿಂದ ಹೊಡೆದ ದೇವರುಗಳು ಇವರೇ.

1 ಸಮುವೇಲ 12:22

ನಿಮ್ಮನ್ನು ತನ್ನ ಜನರಾಗಿ ಮಾಡಿಕೊಳ್ಳಲು ಇಚ್ಛೈಸಿದ್ದಾನಲ್ಲಾ! ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ ಕರ್ತನಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ.

ಯೆಹೆಜ್ಕೇಲ 20:14

ಆದರೆ ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಬರಮಾಡಿದೆನೋ ಆ ಅನ್ಯಜನಾಂಗಗಳ ದೃಷ್ಟಿಯಲ್ಲಿ ಅಪವಿತ್ರವಾಗದ ಹಾಗೆ ನನ್ನ ಹೆಸರಿಗಾಗಿಯೇ ಕೆಲಸ ಮಾಡಿದೆನು.

ಯೆಹೆಜ್ಕೇಲ 20:22

ಆದಾಗ್ಯೂ ನಾನು ನನ್ನ ಕೈಯನ್ನು ಹಿಂತೆಗೆದು ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಹೊರಗೆ ಬರಮಾಡಿದೆನೋ ಆ ಅನ್ಯಜನಾಂಗ ಗಳ ದೃಷ್ಟಿಯಲ್ಲಿ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಕೆಲಸ ಮಾಡಿದೆನು.

ಯೆಹೆಜ್ಕೇಲ 36:21

ಆದರೆ ಇಸ್ರಾಯೇಲಿನ ಮನೆತನದವರು ತಾವು ಹೋದ ಅನ್ಯಜನಾಂಗಗಳಲ್ಲಿ ಅಪವಿತ್ರಮಾಡಿದ ನನ್ನ ಪರಿಶುದ್ಧವಾದ ಹೆಸರನ್ನು ನಾನು ಕನಿಕರಿಸಿದೆನು.

ಯೆಹೆಜ್ಕೇಲ 36:22

ಆದದರಿಂದ ನೀನು ಇಸ್ರಾ ಯೇಲನ ಮನೆತನದವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು--ಓ ಇಸ್ರಾಯೇಲಿನ ಮನೆತನದವರೇ, ನಾನು ಇದನ್ನು ನಿಮಗಾಗಿ ಮಾಡು ತ್ತಿಲ್ಲ, ಆದರೆ ನೀವು ಹೋಗುವಾಗ ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಪರಿಶುದ್ಧನಾಮಕ್ಕಾಗಿ ಮಾಡುತ್ತೇನೆ.

ಯೆಹೆಜ್ಕೇಲ 39:7

ಹೀಗೆ ನನ್ನ ಜನರಾದ ಇಸ್ರಾಯೇಲಿನ ಮಧ್ಯದಲ್ಲಿ ನಾನು ನನ್ನ ಪರಿಶುದ್ಧವಾದ ಹೆಸರನ್ನು ವ್ಯಕ್ತಪಡಿಸುತ್ತೇನೆ; ಅವರು ಇನ್ನೆಂದಿಗೂ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರವಾಗದ ಹಾಗೆ ನಾನು ಮಾಡುತ್ತೇನೆ. ಅನ್ಯಜನರು ಇಸ್ರಾಯೇಲ್ಯರಲ್ಲಿ ಒಬ್ಬ ಪರಿಶುದ್ಧನಾದ ಕರ್ತನು ನಾನೇ ಎಂದು ತಿಳಿಯುವರು.

Interlinear

Choose Theme