Home Bibles ಯೆಹೆಜ್ಕೇಲ 21:24 · ಕನ್ನಡ ಬೈಬಲ್
ಯೆಹೆಜ್ಕೇಲ 21:24 · ಕನ್ನಡ ಬೈಬಲ್

ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದ್ರೋಹಗಳು ಪ್ರಕಟವಾಗಿ ನಿಮ್ಮ ಕೆಲಸಗಳಲ್ಲೆಲ್ಲಾ ನಿಮ್ಮ ಪಾಪಗಳು ಕಾಣುವ ಹಾಗೆ ನೀವು ನಿಮ್ಮ ಅಕ್ರಮಗಳನ್ನು ಜ್ಞಾಪಕಕ್ಕೆ ತಂದದ್ದರಿಂದ ನೀವು ಕೈಯಲ್ಲಿ ಹಿಡಿಯಲ್ಪಡುವಿರಿ.

Cross references

ಯೆಶಾಯ 3:9

ಅವರ ಮುಖಭಾವವೇ ಅವರಿಗೆ ವಿರುದ್ಧವಾಗಿ ಸಾಕ್ಷಿಯಾಗಿದೆ. ತಮ್ಮ ಪಾಪ ಗಳನ್ನು ಸೊದೋಮಿನವರಂತೆ ಮರೆಮಾಜದೆ ಪ್ರಕಟ ಮಾಡುತ್ತಾರೆ. ಅವರ ಆತ್ಮಕ್ಕೆ ಅಯ್ಯೋ! ತಮಗೆ ತಾವೇ ಕೇಡನ್ನು ಪ್ರತೀಕಾರವಾಗಿ ಮಾಡಿಕೊಂಡಿದ್ದಾರೆ.

ಯೆಶಾಯ 22:17

ಇಗೋ, ಕರ್ತನು ನಿನ್ನನ್ನು ಬಲವಾದ ಬಂಧನದೊಂದಿಗೆ ಹಿಡಿದೇ ಹಿಡಿಯು ವನು.

ಯೆರೆಮಿಯ 2:34

ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡಪ್ರಾಣಿಗಳ ರಕ್ತವು ಸಿಕ್ಕಿದೆ; ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೇನೆ.

ಯೆರೆಮಿಯ 3:2

ನಿನ್ನ ಕಣ್ಣುಗಳನ್ನು ಉನ್ನತ ಸ್ಥಳಗಳ ಮೇಲೆತ್ತುಕೊಂಡು ಎಲ್ಲಿ ನಿನ್ನ ಸಂಗಡ ಮಲಗಲಿಲ್ಲವೋ ನೋಡು. ಅರಣ್ಯದಲ್ಲಿ ಅರಬಿಯನ ಹಾಗೆ ದಾರಿಗಳಲ್ಲಿ ಅವರಿಗೋಸ್ಕರ ಕೂತುಕೊಂಡಿದ್ದೀ; ಹೀಗೆ ನಿನ್ನ ಸೂಳೆತನಗಳಿಂದಲೂ ನಿನ್ನ ಕೆಟ್ಟತನಗಳಿಂದಲೂ ದೇಶವನ್ನು ಅಪವಿತ್ರ ಮಾಡಿದ್ದೀ.

ಯೆರೆಮಿಯ 5:27

ನೀನು ಅವರ ಮಾರ್ಗವನ್ನು ತಿಳಿದು ಶೋಧಿಸುವ ಹಾಗೆ ನಿನ್ನನ್ನು ನನ್ನ ಜನರಲ್ಲಿ ಬುರುಜನ್ನಾಗಿಯೂ ಕೋಟೆಯನ್ನಾಗಿಯೂ ಇಟ್ಟಿದ್ದೇನೆ.

ಯೆರೆಮಿಯ 6:15

ನಿಮ್ಮ ಸಹೋದರರೆಲ್ಲರನ್ನೂ ಎಫ್ರಾಯಾಮಿನ ಎಲ್ಲಾ ಸಂತಾನವನ್ನೂ ಹೊರಗೆ ಹಾಕಿದ ಹಾಗೆ ನಿಮ್ಮನ್ನು ನನ್ನ ಸಮ್ಮುಖದಿಂದ ಹೊರಗೆ ಹಾಕುವೆನು.

ಯೆರೆಮಿಯ 8:12

ಇದನ್ನು ಗ್ರಹಿಸುವ ಜ್ಞಾನಿ ಯಾದ ಮನುಷ್ಯನು ಯಾರು? ಇದನ್ನು ತಿಳಿಸುವ ಹಾಗೆ ಕರ್ತನ ಬಾಯಿ ಯಾರ ಸಂಗಡ ಮಾತನಾಡಿತ್ತು? ದೇಶವು ಯಾವದಕ್ಕಾಗಿ ನಾಶವಾಗಿ ಹಾದು ಹೋಗುವ ವನಿಲ್ಲದೆ ಅರಣ್ಯದ ಹಾಗೆ ಹಾಳಾಯಿತು?

ಯೆರೆಮಿಯ 9:2

ಕರ್ತನು ಹೀಗೆ ಹೇಳುತ್ತಾನೆ, ಅನ್ಯರ ಆಚ ರಣೆಯನ್ನು ಕಲಿತುಕೊಳ್ಳಬೇಡಿರಿ, ಆಕಾಶದ ಗುರುತುಗಳಿಗೆ ದಿಗ್ಭ್ರಮೆಗೊಳ್ಳಬೇಡಿರಿ. ಅನ್ಯರು ಅವುಗಳಿಗೆ ದಿಗ್ಭ್ರಮೆಗೊಳ್ಳುತ್ತಾರೆ,

ಯೆರೆಮಿಯ 15:2

ಈ ಸ್ಥಳದಲ್ಲಿ ನೀನು ಹೆಂಡತಿಯನ್ನು ತಕ್ಕೊಳ್ಳಬೇಡ; ನಿನಗೆ ಕುಮಾರರಾಗಲಿ ಕುಮಾರ್ತೆಯರಾಗಲಿ ಈ ಸ್ಥಳದಲ್ಲಿ ಇರಬಾರದು;

ಯೆಹೆಜ್ಕೇಲ 16:16

ನಿನ್ನ ವಸ್ತ್ರಗಳನ್ನು ತೆಗೆದುಕೊಂಡು ಚಿತ್ರ ವಿಚಿತ್ರ ಮಾಡಿ ಅಲಂಕರಿಸಿಕೊಂಡು ಪೂಜಾಸ್ಥಳದಲ್ಲಿ ವ್ಯಭಿಚಾರ ಮಾಡಿದೆ, ಇದು ನಡೆಯತಕ್ಕದ್ದಲ್ಲ ಮತ್ತು ನಡೆಯಬಾರದಂಥ ಕೆಲಸವಾಗಿದೆ.

ಯೆಹೆಜ್ಕೇಲ 22:3

ನೀನು ಹೇಳಬೇಕಾದದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪಟ್ಟಣವು ಅದರ ಮಧ್ಯದಲ್ಲಿ ಅದರ ಕಾಲ ಬರುವ ಹಾಗೆ ರಕ್ತವನ್ನು ಚೆಲ್ಲುತ್ತದೆ. ತನ್ನನ್ನು ಅಶುದ್ಧ ಮಾಡುವ ಹಾಗೆ ತನ್ನಲ್ಲಿ ವಿಗ್ರಹಗಳನ್ನು ಮಾಡಿಕೊಂಡಿದೆ.

ಯೆಹೆಜ್ಕೇಲ 22:24

ಮನುಷ್ಯಪುತ್ರನೇ, ಅದಕ್ಕೆ ಹೀಗೆ ಹೇಳು ಅಶುದ್ಧರಾಗದಂಥ ರೌದ್ರದ ದಿವಸ ಗಳಲ್ಲಿ ಮಳೆ ಸುರಿಯುವಂತಹ ದೇಶವು ನೀನೇ,

ಯೆಹೆಜ್ಕೇಲ 23:5

ಒಹೊಲಳು ನನ್ನ ವಶವಾಗಿರುವಾಗ ಅವಳು ತನ್ನ ಪ್ರಿಯರನ್ನು, ತನ್ನ ನೆರೆಯವರಾದ ಅಶ್ಶೂರ್ಯ ದವರನ್ನು,

ಯೆಹೆಜ್ಕೇಲ 23:23

ಬಾಬೆಲಿನವರು, ಎಲ್ಲಾ ಕಸ್ದೀಯರು, ಪೆಕೋದಿನವರು, ಷೋಯದವರು ಕೋಯದವರು, ಮತ್ತು ಎಲ್ಲಾ ಅಶ್ಶೂರ್ಯರ ಜೊತೆಗೆ ಅವರೆಲ್ಲಾ ಅಪೇಕ್ಷಿಸುವಂತಹ ಯೌವನಸ್ಥರೂ ಸೈನ್ಯಾಧಿಪತಿಗಳೂ ಅಧಿಕಾರಸ್ಥರೂ ಯುದ್ಧಶಾಲಿಗಳೂ ಖ್ಯಾತಿಹೊಂದಿ ದವರೂ ಎಲ್ಲರೂ ಕುದುರೆಗಳ ಮೇಲೆ ಸವಾರಿಮಾಡಿ ದವರೇ.

ಯೆಹೆಜ್ಕೇಲ 24:7

ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ; ದೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ;

ಹೊಶೇಯ 4:2

ಆಣೆಯಿಡುವದೂ ಸುಳ್ಳು ಹೇಳು ವದೂ ಕೊಲ್ಲುವದೂ ಕದಿಯುವದೂ ವ್ಯಭಿಚಾರ ಮಾಡುವದೂ ಹೆಚ್ಚಾಗಿಬಿಟ್ಟಿವೆ; ರಕ್ತಕ್ಕೆ ರಕ್ತ ಸೇರುತ್ತದೆ;

ಆಮೋಸ 9:1

ಕರ್ತನು ಯಜ್ಞವೇದಿಯ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನು ಹೇಳಿದ್ದೇ ನಂದರೆ--ಹೊಸ್ತಿಲುಗಳು ಕದಲುವಂತೆ ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದು ಬಿಡು; ಅವರಲ್ಲಿ ಉಳಿದವರನ್ನು ನಾನು ಕೊಲ್ಲುವೆನು; ಅವರಲ್ಲಿ ಓಡಿ ಹೋಗುವವನು ಓಡಿಹೋಗಲಾಗು ವದಿಲ್ಲ; ಅವರಲ್ಲಿ ತಪ್ಪಿಸಿಕೊಳ್ಳುವವನು ತಪ್ಪಿಸಿಕೊಳ್ಳ ಲಾಗುವದಿಲ್ಲ.

ಮೀಕ 3:10

ಚೀಯೋನನ್ನು ರಕ್ತದಿಂದಲೂ ಯೆರೂಸಲೇಮನ್ನು ಅಕ್ರಮದಿಂದಲೂ ಕಟ್ಟುವವರೇ, ಈಗ ಇದನ್ನು ಕೇಳಿರಿ.

Interlinear

Choose Theme