Home Bibles ಯೆಹೆಜ್ಕೇಲ 21:30 · ಕನ್ನಡ ಬೈಬಲ್
ಯೆಹೆಜ್ಕೇಲ 21:30 · ಕನ್ನಡ ಬೈಬಲ್

ಅದನ್ನು ನಾನು ಮತ್ತೆ ಒರೆಗೆ ಸೇರಿಸುವೆನೋ? ನೀನು ನಿರ್ಮಿಸಲ್ಪಟ್ಟ ಸ್ಥಳದಲ್ಲಿಯೇ ನೀನು ಹುಟ್ಟಿದ ಸ್ಥಳದಲ್ಲಿಯೇ ನಿನಗೆ ನ್ಯಾಯತೀರಿಸುವೆನು.

Cross references

ಆದಿಕಾಂಡ 15:14

ಅವರು ಸೇವಿಸುವ ಜನಾಂಗಕ್ಕೆ ನಾನೇ ನ್ಯಾಯ ತೀರಿಸುವೆನು; ತರುವಾಯ ಮಹಾ ಸಂಪತ್ತಿನೊಂದಿಗೆ ಅವರು ಹೊರಗೆ ಬರುವರು.

ಯೆರೆಮಿಯ 47:6

ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ತಪ್ಪಿಸಿಕೊಳ್ಳಿರಿ; ಅರಣ್ಯದಲ್ಲಿರುವ ಒಣಗಿಡದ ಹಾಗಿರ್ರಿ.

ಯೆಹೆಜ್ಕೇಲ 12:10

ಅವರಿಗೆ ನೀನು ಹೀಗೆ ಹೇಳಬೇಕು ಎಂದು ದೇವರಾದ ಕರ್ತನು ಹೇಳುತ್ತಾನೆ--ಈ ಭಾರವು ಯೆರೂಸಲೇಮಿನಲ್ಲಿರುವ ಪ್ರಭುವನ್ನೂ ಅದರ ಮಧ್ಯದಲ್ಲಿರುವ ಸಮಸ್ತ ಇಸ್ರಾ ಯೇಲಿನ ಮನೆತನದವರನ್ನೂ ಕುರಿತದ್ದಾಗಿದೆ.

ಯೆಹೆಜ್ಕೇಲ 16:3

ದೇವರಾದ ಕರ್ತನು ಯೆರೂಸಲೇಮಿನವರಿಗೆ ಹೀಗೆ ಹೇಳುತ್ತಾನೆ--ನಿನ್ನ ಹುಟ್ಟುವಿಕೆಯೂ ನಿನ್ನ ಹುಟ್ಟಿದ ಸ್ಥಳವೂ ಕಾನಾನ್‌ ದೇಶದಿಂದಾದದ್ದೇ; ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು

ಯೆಹೆಜ್ಕೇಲ 16:38

ದಾಂಪತ್ಯವನ್ನು ಮುರಿದು ರಕ್ತ ಸುರಿಸುವಂಥ ಹೆಂಗಸರಿಗೆ ವಿಧಿಸುವಂಥ ತಕ್ಕ ದಂಡನೆಗಳನ್ನು ನಿನಗೂ ವಿಧಿಸಿ, ಕೋಪೋದ್ರೇಕದಿಂದಲೂ ರೋಷಾವೇಶ ದಿಂದಲೂ ನಿನಗೆ ರಕ್ತವನ್ನು ಸುರಿಸುವೆನು.

ಯೆಹೆಜ್ಕೇಲ 21:4

ನಾನು ನೀತಿವಂತನನ್ನೂ ದುಷ್ಟನನ್ನೂ ಕಡಿದು ಬಿಡುವದರಿಂದ ನನ್ನ ಕತ್ತಿಯು ದಕ್ಷಿಣದಿಂದ ಮೊದಲುಗೊಂಡು ಉತ್ತ ರದ ಮನುಷ್ಯರೆಲ್ಲರಿಗೆ ವಿರೋಧವಾಗಿ ಅದರ ಒರೆ ಯನ್ನು ಬಿಟ್ಟು ಹೋಗುವದು.

ಯೆಹೆಜ್ಕೇಲ 28:13

ದೇವರ ತೋಟ ವಾದ ಏದೆನಿನಲ್ಲಿ ನೀನಿದ್ದಿ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇ ಧಿಕ, ಕೆಂಪು, ಸ್ಪಟಿಕ, ಚಿನ್ನ ಈ ಅಮೂಲ್ಯವಾದವು ಗಳಿಂದ ಭೂಷಿತವಾಗಿದ್ದಿ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.

ಯೆಹೆಜ್ಕೇಲ 28:15

ನಿನ್ನ ಸೃಷ್ಟಿಯ ದಿನದಿಂದ ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ ನಿನ್ನ ನಡತೆಯು ನಿರ್ದೋಷವಾಗಿ ಕಾಣುತ್ತಿತ್ತು.

Interlinear

Choose Theme