ಹೌದು, ನನ್ನ ರೋಷದ ಬೆಂಕಿಯಿಂದ ನಾನು ನಿಮ್ಮ ಮೇಲೆ ಊದುವೆನು. ನೀವು ಅದರೊಳಗೆ ಕರಗಿ ಹೋಗುವಿರಿ.
Cross references
ನಿನ್ನ ದೇವರಾದ ಕರ್ತನು ದಹಿಸುವ ಅಗ್ನಿಯೂ ರೋಷವುಳ್ಳ ದೇವರೂ ಆಗಿದ್ದಾನೆ.
ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು.
ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
ಕರ್ತನ ಮನೆಯನ್ನೂ ಅರಮನೆಯನ್ನೂ ಯೆರೂಸಲೇಮಿನಲ್ಲಿರುವ ಎಲ್ಲಾ ಮನೆಗಳನ್ನೂ ಪ್ರತಿ ದೊಡ್ಡ ಮನುಷ್ಯನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು.
ನೀನು ಕೋಪಿಸುವ ಕಾಲದಲ್ಲಿ ಅವರನ್ನು ಬೆಂಕಿಯ ಒಲೆಯ ಹಾಗೆ ಮಾಡುವಿ; ಕರ್ತನು ತನ್ನ ಕೋಪದಿಂದ ಅವರನ್ನು ನುಂಗಿಬಿಡುವನು; ಬೆಂಕಿಯು ಅವರನ್ನು ದಹಿಸಿ ಬಿಡು ವದು.
ನಮ್ಮ ದೇವರು ಬರುತ್ತಾನೆ, ಮೌನವಾಗಿರನು; ಬೆಂಕಿಯು ಆತನ ಮುಂದೆ ದಹಿಸುವದು; ಅದು ಆತನ ಸುತ್ತಲು ದೊಡ್ಡ ಬಿರುಗಾಳಿಯಂತಿರುವದು.
ಹೊಗೆ ಹಾರಿಹೋಗುವ ಮೇರೆಗೆ ಅವರನ್ನು ಓಡಿಸಿಬಿಡು; ಮೇಣವು ಬೆಂಕಿಯ ಮುಂದೆ ಕರಗುವ ಹಾಗೆ ದುಷ್ಟರು ದೇವರ ಮುಂದೆ ನಾಶ ವಾಗಲಿ.
ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
ಪೂರ್ವದಿಂದ (ಪುರಾತನದಿಂದ) ತೋಫೆತ್ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.
ಬೆಂಕಿ ಕಟ್ಟಿಗೆಯನ್ನು ಹೊತ್ತಿಸುವಂತೆಯೂ ಬೆಂಕಿ ನೀರನ್ನು ಉಕ್ಕಿಸುವಂತೆಯೂ ನಿನ್ನ ಹೆಸರು ನಿನ್ನ ವೈರಿಗಳಿಗೆ ತಿಳಿಯುವಂತೆಯೂ ಮಾಡು!
ನಿನ್ನ ಹೆಸರನ್ನು ಕರೆಯುವವನೂ ನಿನ್ನನ್ನು ಹಿಡು ಕೊಳ್ಳುವದಕ್ಕೆ ತನ್ನನ್ನು ಪ್ರೇರಿಸಿಕೊಳ್ಳುವವನು ಒಬ್ಬನೂ ಇಲ್ಲ; ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ; ನಮ್ಮ ಅಕ್ರಮಗಳಿಗಾಗಿ ನಮ್ಮನ್ನು ದಹಿಸಿಬಿಟ್ಟಿದ್ದೀ.
ಓ ಜನಾಂಗಗಳ ಅರಸನೇ, ನಿನಗೆ ಭಯಪಡದವ ನಾರು? ಅದು ನಿನಗೆ ಸಲ್ಲತಕ್ಕದ್ದು; ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ ಅವುಗಳ ಎಲ್ಲಾ ರಾಜ್ಯಗ ಳಲ್ಲಿಯೂ ನಿನ್ನ ಹಾಗೆ ಯಾರೂ ಇಲ್ಲ.
ಅವರು ಅವನನ್ನು ಸೆರೆಯಾಗಿ ಒಯ್ದ ಸ್ಥಳದ ಲ್ಲಿಯೇ ಸಾಯುವನು; ಈ ದೇಶವನ್ನು ಇನ್ನು ನೋಡು ವದೇ ಇಲ್ಲ;
ಆದದ ರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ವನವೃಕ್ಷಗಳಲ್ಲಿ ದ್ರಾಕ್ಷೇಗಿಡಗಳನ್ನು ನಾನು ಹೇಗೆ ಬೆಂಕಿಗೆ ಸೌದೆಗಾಗಿ ಮಾಡಿರುವೆನೋ? ಹಾಗೆಯೇ ನಾನು ಯೆರೂಸಲೇಮಿನ ನಿವಾಸಿಗಳನ್ನೂ ಕೊಟ್ಟಿದ್ದೇನೆ.
ದಕ್ಷಿಣದ ಅರಣ್ಯಕ್ಕೆ ಹೇಳಬೇಕಾದ ದ್ದೇನಂದರೆ--ಕರ್ತನ ವಾಕ್ಯವನ್ನು ಕೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ; ಅದು ನಿನ್ನಲ್ಲಿರುವ ಎಲ್ಲಾ ಹಸೀ ಮರಗಳನ್ನು ಮತ್ತು ಎಲ್ಲಾ ಒಣಮರಗಳನ್ನು ತಿಂದುಬಿಡುವದು; ಉರಿಯುವ ಉರಿ ಆರಿಹೋಗು ವದಿಲ್ಲ; ದಕ್ಷಿಣ ಮೊದಲುಗೊಂಡು ಉತ್ತರದ ವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟು ಹೋಗುವವು.
ಅವರು ಬೆಳ್ಳಿ, ಹಿತ್ತಾಳೆ, ಕಬ್ಬಿಣ, ಸೀಸ ಮತ್ತು ತಗಡುಗಳನ್ನು ಹೇಗೆ ಒಲೆಯೊಳಗೆ ಕೂಡಿಸಿ ಅದಕ್ಕೆ ಬೆಂಕಿಯನ್ನೂದಿ ಕರಗಿಸುವರೋ ಹಾಗೆಯೇ ನಾನು ನಿಮ್ಮನ್ನು ನನ್ನ ಕೋಪದಲ್ಲಿಯೂ ನನ್ನ ರೋಷದಲ್ಲಿಯೂ ಕರಗಿಸಿಬಿಡುವೆನು.
ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.