Home Bibles ಯೆಹೆಜ್ಕೇಲ 23:39 · ಕನ್ನಡ ಬೈಬಲ್
ಯೆಹೆಜ್ಕೇಲ 23:39 · ಕನ್ನಡ ಬೈಬಲ್

ತಮ್ಮ ಮಕ್ಕಳನ್ನು ವಿಗ್ರಹಗಳಿಗೋಸ್ಕರ ಕೊಂದು ಹಾಕಿದ ಮೇಲೆ ಅದೇ ದಿನದಲ್ಲಿ ನನ್ನ ಪರಿಶುದ್ಧ ಸ್ಥಳವನ್ನು ಕೆಡಿಸುವದಕ್ಕೆ ಬಂದರು. ಇಗೋ, ಅವರು ನನ್ನ ಆಲಯದ ಮಧ್ಯದಲ್ಲಿಯೇ ಹೀಗೆ ಮಾಡಿದ್ದಾರೆ;

Cross references

2 ಅರಸುಗಳು 21:4

ಇದಲ್ಲದೆ ಯೆರೂಸಲೇಮಿನಲ್ಲಿ ನನ್ನ ನಾಮವನ್ನು ಇರಿಸುವೆನೆಂದು ಕರ್ತನು ಯಾವದನ್ನು ಕುರಿತು ಹೇಳಿದ್ದನೋ ಆ ಕರ್ತನ ಮನೆಯಲ್ಲಿ ಅವನು ಬಲಿಪೀಠಗಳನ್ನು ಕಟ್ಟಿಸಿದನು.

2 ಅರಸುಗಳು 21:6

ಅವನು ತನ್ನ ಮಗನನ್ನು ಬೆಂಕಿಯಲ್ಲಿ ದಾಟುವಂತೆ ಮಾಡಿದನು; ಮೇಘ ಮಂತ್ರ ಗಳನ್ನೂ ಸರ್ಪಮಂತ್ರಗಳನ್ನೂ ಮಾಡಿದನು; ಯಕ್ಷಿಣಿ ಗಾರರ ಬಳಿಯಲ್ಲೂ ಮಂತ್ರಜ್ಞರ ಬಳಿಯಲ್ಲೂ ವಿಚಾರಿ ಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸಲು ಆತನ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿದನು.

2 ದಿನವೃತ್ತಾಂತ 33:4

ಇದ ಲ್ಲದೆ--ಯೆರೂಸಲೇಮಿನಲ್ಲಿ ನನ್ನ ಹೆಸರು ಯುಗ ಯುಗಕ್ಕೂ ಇರುವದೆಂದು ಕರ್ತನು ಹೇಳಿದ ಕರ್ತನ ಆಲಯದಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.

ಯೆಶಾಯ 3:9

ಅವರ ಮುಖಭಾವವೇ ಅವರಿಗೆ ವಿರುದ್ಧವಾಗಿ ಸಾಕ್ಷಿಯಾಗಿದೆ. ತಮ್ಮ ಪಾಪ ಗಳನ್ನು ಸೊದೋಮಿನವರಂತೆ ಮರೆಮಾಜದೆ ಪ್ರಕಟ ಮಾಡುತ್ತಾರೆ. ಅವರ ಆತ್ಮಕ್ಕೆ ಅಯ್ಯೋ! ತಮಗೆ ತಾವೇ ಕೇಡನ್ನು ಪ್ರತೀಕಾರವಾಗಿ ಮಾಡಿಕೊಂಡಿದ್ದಾರೆ.

ಯೆರೆಮಿಯ 7:8

ಹೀಗಿರಲು--ನಾವು ಜ್ಞಾನಿಗಳು, ಕರ್ತನ ನ್ಯಾಯ ಪ್ರಮಾಣವು ನಮ್ಮ ಸಂಗಡ ಇದೆ ಎಂದು ನೀವು ಹೇಳುವದು ಹೇಗೆ? ಇಗೋ, ನಿಶ್ಚಯವಾಗಿ ಆತನು ಅದನ್ನು ವ್ಯರ್ಥವಾಗಿ ಮಾಡಿದ್ದಾನೆ. ಶಾಸ್ತ್ರಿಗಳ ಲೇಖ ನಿಯು ವ್ಯರ್ಥವಾಗಿದೆ.

ಯೆರೆಮಿಯ 11:15

ನಾನು ಅವರನ್ನು ಕಿತ್ತುಹಾಕಿದ ಮೇಲೆ ಆಗುವದೇ ನಂದರೆ--ನಾನು ಹಿಂತಿರುಗಿ ಅವರನ್ನು ಕರುಣಿಸುವೆನು; ತಮ್ಮ ತಮ್ಮ ಸ್ವಾಸ್ತ್ಯಕ್ಕೂ ತಮ್ಮ ತಮ್ಮ ದೇಶಕ್ಕೂ ಅವರನ್ನು ತಿರುಗಿ ಬರಮಾಡುವೆನು.

ಯೆಹೆಜ್ಕೇಲ 5:11

ಆದಕಾರಣ ನನ್ನ ಜೀವದಾಣೆ, ದೇವರಾದ ಕರ್ತನು --ನಿಶ್ಚಯವಾಗಿ ನೀನು ನನ್ನ ಪರಿಶುದ್ಧ ಸ್ಥಳವನ್ನು ನಿನ್ನ ಎಲ್ಲಾ ಹೇಸಿಗೆಗಳಿಂದಲೂ ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ ನಾನೂ ಸಹ ನಿನ್ನನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವದಿಲ್ಲ, ಇಲ್ಲವೆ ಕಟಾಕ್ಷವನ್ನು ತೋರಿಸುವದಿಲ್ಲ.

ಯೆಹೆಜ್ಕೇಲ 23:38

ಇದಲ್ಲದೆ ಇದನ್ನು ಮಾಡಿದ ದಿನದಲ್ಲಿಯೇ ನನ್ನ ಪರಿಶುದ್ಧಸ್ಥಳವನ್ನು ಅಪವಿತ್ರಪಡಿಸಿ ನನ್ನ ಸಬ್ಬತ್ತುಗಳನ್ನು ಕೆಡಿಸಿದ್ದಾರೆ.

ಯೆಹೆಜ್ಕೇಲ 44:7

ಅವು ಗಳಲ್ಲಿ ನೀವು ನನ್ನ ರೊಟ್ಟಿಯನ್ನೂ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವಾಗ ನಿಮ್ಮ ಎಲ್ಲಾ ಅಸಹ್ಯಗಳಿ ಗೋಸ್ಕರ ನನ್ನ ಒಡಂಬಡಿಕೆಯನ್ನು ವಿಾರುವಂಥ ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿ ಯಿಲ್ಲದಂಥ ಪರಕೀಯರನ್ನು ನನ್ನ ಪರಿಶುದ್ಧಸ್ಥಳಕ್ಕೆ ಕರೆತಂದು ನನ್ನ ಆಲಯವನ್ನು ಅಪವಿತ್ರಪಡಿಸಿದಿರಿ;

ಮೀಕ 3:11

ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.

ಯೋಹಾನ 18:28

ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ನ್ಯಾಯಾಲಯಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಮೈಲಿಗೆಯಾಗಿ ಪಸ್ಕದ ಊಟ ಮಾಡುವದಕ್ಕೆ ಅಡ್ಡಿಯಾದೀತೆಂದು ಅವರು ನ್ಯಾಯಾಲಯದ ಒಳಗೆ ಹೋಗಲಿಲ್ಲ.

Interlinear

Choose Theme