Home Bibles ಯೆಹೆಜ್ಕೇಲ 24:1 · ಕನ್ನಡ ಬೈಬಲ್
ಯೆಹೆಜ್ಕೇಲ 24:1 · ಕನ್ನಡ ಬೈಬಲ್

ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ

Cross references

2 ಅರಸುಗಳು 24:12

ಆಗ ಯೆಹೂದದ ಅರಸನಾದ ಯೆಹೋಯಾಖೀನನೂ ಅವನ ತಾಯಿಯೂ ಸೇವ ಕರೂ ಪ್ರಧಾನರೂ ಕಂಚುಕಿಯರೂ ಅಧಿಕಾರಿಗಳ ಸಹಿತವಾಗಿ ಬಾಬೆಲಿನ ಅರಸನ ಬಳಿಗೆ ಹೋದರು. ಬಾಬೆಲಿನ ಅರಸನು ತನ್ನ ಆಳಿಕೆಯ ಎಂಟನೇ ವರುಷ ದಲ್ಲಿ ಅವನನ್ನು ಸೆರೆಹಿಡಿದನು.

ಯೆರೆಮಿಯ 39:1

ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆರೆವಿಾಯನನ್ನು ಸಂಕೋಲೆ ಗಳಿಂದ ಕಟ್ಟಿಸಿ ಬಾಬೆಲಿಗೆ ಒಯ್ಯುವ ಯೆರೂಸಲೇಮಿನ ಮತ್ತು ಯೆಹೂದದ ಸೆರೆಯವರೆಲ್ಲರ ಮಧ್ಯದಲ್ಲಿ ತಕ್ಕೊಂಡುಹೋಗಿ ರಾಮದಲ್ಲಿ ಅವನನ್ನು ಬಿಡಿಸಿ ಅಲ್ಲಿಂದ ಕಳುಹಿಸಿದ ಮೇಲೆ ಯೆರೆವಿಾಯನಿಗೆ ಕರ್ತ ನಿಂದ ಉಂಟಾದ ವಾಕ್ಯವು.

ಯೆಹೆಜ್ಕೇಲ 1:2

ತಿಂಗಳಿನ ಐದನೆಯ ದಿನದಲ್ಲಿ ಅರಸನಾದ ಯೆಹೋಯಾಖೀನನ ಸೆರೆಯ ಐದನೆಯ ವರುಷದಲಿ

ಯೆಹೆಜ್ಕೇಲ 8:1

ಆರನೇ ವರುಷದ ಆರನೆಯ ತಿಂಗಳಿನ ಐದನೆಯ ದಿನದಲ್ಲಿ ಆಗಿದ್ದೇನಂದರೆ--ನಾನೂ ಯೆಹೂದದ ಹಿರಿಯರೂ ನನ್ನ ಮನೆಯಲ್ಲಿ ಕುಳಿತುಕೊಂಡಿರುವಾಗ ಅಲ್ಲಿ ದೇವರಾದ ಕರ್ತನ ಹಸ್ತವು ನನ್ನ ಮೇಲೆ ಬಿತ್ತು.

ಯೆಹೆಜ್ಕೇಲ 20:1

ಏಳನೆಯ ವರುಷದ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಆದದ್ದೇನಂದರೆ-- ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಕರ್ತನ ಬಳಿಗೆ ವಿಚಾರಣೆಗಾಗಿ ಬಂದು ನನ್ನ ಮುಂದೆ ಕುಳಿತು ಕೊಂಡರು.

ಯೆಹೆಜ್ಕೇಲ 26:1

ಹನ್ನೊಂದನೇ ವರುಷದ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--

ಯೆಹೆಜ್ಕೇಲ 29:1

ಹತ್ತನೇ ವರುಷದ ಹತ್ತನೇ ತಿಂಗಳಿನ, ಹನ್ನೆರಡನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಹೇಳಿದ್ದೇನಂದರೆ--

ಯೆಹೆಜ್ಕೇಲ 29:17

ಇಪ್ಪತ್ತೇಳನೇ ವರುಷದ ಮೊದಲನೇ ತಿಂಗಳಿನ, ಮೊದಲನೇ ದಿನದಲ್ಲಿ ಆದದ್ದೇನಂದರೆ ಕರ್ತನ ವಾಕ್ಯವು ನನಗೆ ಬಂದು ಹೀಗೆ ಹೇಳಿತು.

ಯೆಹೆಜ್ಕೇಲ 31:1

ಹನ್ನೊಂದನೇ ವರುಷದಲ್ಲಿ ಮೂರನೇ ತಿಂಗಳಿನ, ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--

ಯೆಹೆಜ್ಕೇಲ 32:1

ಹನ್ನೆರಡನೇ ವರುಷದ, ಹನ್ನೆರಡನೇ ತಿಂಗಳಿನ, ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--

ಯೆಹೆಜ್ಕೇಲ 32:17

ಇದಲ್ಲದೆ ಹನ್ನೆರಡನೇ ವರ್ಷದ, ತಿಂಗಳಿನ ಹದಿನೈದನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--

ಯೆಹೆಜ್ಕೇಲ 33:21

ನಮ್ಮ ಸೆರೆಯ ಹನ್ನೆರಡನೇ ವರುಷದ ಹತ್ತನೇ ತಿಂಗಳಿನ ಐದನೇ ದಿನದಲ್ಲಿ ಆದದ್ದೇನಂದರೆ, ಯೆರೂಸ ಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು ಪಟ್ಟಣವು ಹೊಡೆಯಲ್ಪಟ್ಟಿದೆ ಎಂದು ಹೇಳಿದನು.

ಯೆಹೆಜ್ಕೇಲ 40:1

ನಮ್ಮ ಸೆರೆಯ ಇಪ್ಪತ್ತೈದನೆಯ ವರ್ಷದ ಆರಂಭದ ತಿಂಗಳಿನ ಹತ್ತನೇ ದಿನದಲ್ಲಿ ಪಟ್ಟಣವು ಒಡೆದು ಹಾಕಲ್ಪಟ್ಟ ಮೇಲೆ, ಹದಿನಾಲ್ಕನೇ ವರುಷದ ಅದೇ ದಿನದಲ್ಲಿ, ಕರ್ತನ ಕೈ ನನ್ನ ಮೇಲೆ ಇದ್ದು ನನ್ನನ್ನು ಅಲ್ಲಿಗೆ ಬರಮಾಡಿತು.

ಜೆಕರ್ಯ 8:19

ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾಲ್ಕನೇ ತಿಂಗಳಿನ ಉಪವಾಸವು, ಐದನೆ ಯದು, ಏಳನೆಯದು, ಹತ್ತನೆಯದು, ಯೆಹೂದದ ಮನೆತನದವರಿಗೆ ಸಂತೋಷವೂ ಸಂಭ್ರಮವೂ ಆನಂದವಾದ ಹಬ್ಬಗಳೂ ಆಗುವವು; ಆದರೆ ಸತ್ಯ ವನ್ನೂ ಸಮಾಧಾನವನ್ನೂ ಪ್ರೀತಿಮಾಡಿರಿ.

Interlinear

Choose Theme