Home Bibles ಯೆಹೆಜ್ಕೇಲ 25:1 · ಕನ್ನಡ ಬೈಬಲ್
ಯೆಹೆಜ್ಕೇಲ 25:1 · ಕನ್ನಡ ಬೈಬಲ್

ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--

Cross references

ನೆಹೆಮ್ಯ 13:1

ಅದೇ ದಿವಸದಲ್ಲಿ ಜನರು ಕೇಳುವ ಹಾಗೆ ಮೋಶೆಯ ಪುಸ್ತಕದೊಳಗೆ ಓದುವಾಗ ಅಮ್ಮೋನ್ಯರೂ ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದೆಂದು ಅದರಲ್ಲಿ ಬರೆದದ್ದು ಸಿಕ್ಕಿತು.

ಯೆರೆಮಿಯ 12:14

ಅವರ ತಂದೆಗಳನ್ನೂ ಮಕ್ಕಳನ್ನೂ ಕೂಡ ಒಬ್ಬನ ಮೇಲೊಬ್ಬನನ್ನು ಅಪ್ಪಳಿಸು ವೆನು. ನಾನು ಅವರನ್ನು ಕನಿಕರಿಸುವದಿಲ್ಲ, ಕರುಣಿಸು ವದಿಲ್ಲ ಅಂತಃಕರುಣೆಪಡುವದಿಲ್ಲ ಅವರನ್ನು ಕೆಡಿಸು ವೆನು ಎಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 25:21

ಆಗ ಅರಸನಾದ ಯೆಹೋಯಾಕೀಮನೂ ಅವನ ಪರಾಕ್ರಮಶಾಲಿಗಳೆ ಲ್ಲರೂ ಪ್ರಧಾನರೆಲ್ಲರೂ ಅವನ ಮಾತುಗಳನ್ನು ಕೇಳಿ ದಾಗ ಅರಸನು ಅವನನ್ನು ಕೊಂದುಹಾಕುವದಕ್ಕೆ ಹುಡುಕಿದನು; ಅದರೆ ಊರೀಯನು ಅದನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತಕ್ಕೆ ಸೇರಿಕೊಂಡನು.

ಯೆರೆಮಿಯ 27:3

ಎರಡು ವರುಷದೊಳ ಗಾಗಿ ನಾನು ಬಾಬೆಲಿನ ಅರಸನಾದ ನೆಬೂಕ ದ್ನೆಚ್ಚರನು ಈ ಸ್ಥಳದಿಂದ ತಕ್ಕೊಂಡು ಬಾಬೆಲಿಗೆ ಒಯ್ದ ಕರ್ತನ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು.

ಯೆರೆಮಿಯ 49:1

ಬಾಬೆಲಿಗೆ ವಿರೋಧವಾಗಿಯೂ ಕಸ್ದೀಯರ ದೇಶಕ್ಕೆ ವಿರೋಧವಾಗಿಯೂ ಕರ್ತನು ಪ್ರವಾದಿಯಾದ ಯೆರೆವಿಾಯನ ಮೂಲಕ ಹೇಳಿಸಿದ ವಾಕ್ಯವು.

ವಿಲಾಪಗಳು 1:21

ನಾನು ನಿಟ್ಟುಸಿರಿಡುವದನ್ನು ಅವರು ಕೇಳಿದರೂ ನನ್ನನ್ನು ಆದರಿ ಸಲು ಯಾರೂ ಅಲ್ಲಿರಲಿಲ್ಲ; ನನ್ನ ಶತ್ರುಗಳೆಲ್ಲಾ ನನ್ನ ಕಷ್ಟದ ವಿಷಯವನ್ನು ಕೇಳಿದರು; ನೀನು ಹಾಗೆ ಮಾಡಿದೆಯೆಂದು ಅವರು ಸಂತೋಷಪಟ್ಟರು. ನೀನು ತಿಳಿಸಿದ ಆ ದಿನವು ಬರಲು ಅವರು ನನ್ನ ಹಾಗೆಯೇ ಆಗುವರು.ಅವರ ಕೆಡುಕೆಲ್ಲಾ ನಿನ್ನ ಮುಂದೆ ಬರಲಿ; ನನ್ನ ಎಲ್ಲಾ ದ್ರೋಹಗಳ ನಿಮಿತ್ತ ನೀನು ನನಗೆ ಮಾಡಿದ ಪ್ರಕಾರವೇ ಅವರಿಗೆ ಮಾಡು; ನನ್ನ ನಿಟ್ಟು ಸಿರುಗಳು ಅನೇಕವಾಗಿವೆ; ನನ್ನ ಹೃದಯವು ಕುಂದಿದೆ.

ಯೆಹೆಜ್ಕೇಲ 28:26

ಅವರು ನಿರ್ಭಯರಾಗಿ ಅಲ್ಲಿ ವಾಸಿಸುವರು; ಮನೆ ಗಳನ್ನು ಕಟ್ಟುವರು; ದ್ರಾಕ್ಷೇತೋಟಗಳನ್ನು ನೆಡುವರು; ಹೌದು, ಸುತ್ತಲಾಗಿ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯರಾಗಿ ವಾಸಿಸುವರು. ಕರ್ತನಾದ ನಾನೇ ಅವರ ದೇವರೆಂದು ತಿಳಿಯುವರು.

ಯೆಹೆಜ್ಕೇಲ 32:29

ಅಲ್ಲಿ ಎದೋಮೂ ಅದರ ಅರಸರೂ ಮತ್ತು ಎಲ್ಲಾ ಪ್ರಧಾನರೂ ಶೂರರಾಗಿದ್ದಾಗ್ಯೂ ಕತ್ತಿಯಿಂದ ಹತವಾ ದವರ ಸಂಗಡ ಹೂಣಲ್ಪಟ್ಟಿದ್ದಾರೆ; ಅವರು ಸುನ್ನತಿಯಿಲ್ಲದವರ ಸಂಗಡವೂ ಕುಣಿಗೆ ಇಳಿಯುವವರ ಸಂಗಡವೂ ಹತರಾದವರು.

ಯೆಹೆಜ್ಕೇಲ 36:7

ಆದದರಿಂದ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನನ್ನ ಕೈಯನ್ನು ಮೇಲೆತ್ತಿದ್ದೇನೆ, ನಿಶ್ಚಯವಾಗಿ ನಿನ್ನ ಮೇಲಿ ರುವ ಅನ್ಯಜನಾಂಗಗಳು ತಾವಾಗಿಯೇ ತಮ್ಮ ನಿಂದೆಯನ್ನು ಹೊರುವರು.

ಯೋವೇಲ 3:19

ಐಗುಪ್ತವು ಹಾಳಾಗು ವದು; ಎದೋಮು ಹಾಳಾದ ಅರಣ್ಯವಾಗುವದು; ಅವರು ಯೆಹೂದನ ಮಕ್ಕಳನ್ನು ಬಲಾತ್ಕಾರಮಾಡಿ ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿ ದರು.

ಆಮೋಸ 1:13

ಕರ್ತನು ಹೀಗೆ ಹೇಳುತ್ತಾನೆ--ಅಮ್ಮೋನಿನ ಮಕ್ಕಳ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ವಾಗಿ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವ ದಿಲ್ಲ; ತಮ್ಮ ಮೇರೆಯನ್ನು ವಿಸ್ತಾರ ಮಾಡುವದಕ್ಕಾಗಿ ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿದ್ದಾರೆ.

ಹಬಕ್ಕೂಕ 1:17

ಹೀಗಿರುವದರಿಂದ ಅವರು ತಮ್ಮ ಬಲೆಯನ್ನು ಬರಿದುಮಾಡಿ ನಿತ್ಯವಾಗಿ ಜನಾಂಗ ಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?

ಸೆಫನ್ಯ 2:8

ನನ್ನ ಜನರನ್ನು ನಿಂದಿಸಿ, ಅವರ ಮೇರೆಗೆ ಮೋವಾ ಬ್ಯರೂ ಅಮ್ಮೋನ್ಯರೂ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಂಡದ್ದನ್ನು ನಾನು ಕೇಳಿದ್ದೇನೆ.

ಸೆಫನ್ಯ 2:9

ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು.

Interlinear

Choose Theme