ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಕೈತಟ್ಟಿ ಕಾಲಿನಿಂದ ತುಳಿದು ಇಸ್ರಾಯೇಲ್ ದೇಶವನ್ನು ಮನಃ ಪೂರ್ವಕವಾಗಿ ತಿರಸ್ಕರಿಸಿ ಅದರ ಆ ಸ್ಥಿತಿಗೆ ಸಂತೋಷ ಪಟ್ಟದ್ದರಿಂದ
Cross references
ಇದಲ್ಲದೆ ಅಮ್ಮೋನ್ಯನಾದ ಟೋಬೀ ಯನು ಅವನ ಬಳಿಯಲ್ಲಿದ್ದು--ಒಂದು ನರಿಯು ಅವರು ಕಟ್ಟಿದರ ಮೇಲೆ ಹಾರಿದರೆ ಅದು ಅವರ ಕಲ್ಲುಗೋಡೆಯನ್ನು ಕೆಡವಿಹಾಕುವದು ಅಂದನು.
ಜನರು ಅವನ ಕಡೆಗೆ ಚಪ್ಪಾಳೆ ತಟ್ಟುತ್ತಾರೆ. ಅವನ ಸ್ಥಳದೊಳಗಿಂದ ಅವನನ್ನು ಛೇ ಎಂದು ಹೊರಡಿಸುತ್ತಾರೆ.
ತನ್ನ ಪಾಪಕ್ಕೆ ದ್ರೋಹ ವನ್ನು ಕೂಡಿಸುತ್ತಾನೆ; ನಮ್ಮ ಮಧ್ಯದಲ್ಲಿ ಚಪ್ಪಾಳೆ ತಟ್ಟುತ್ತಾನೆ; ದೇವರಿಗೆ ವಿರೋಧವಾಗಿ ತನ್ನ ಮಾತು ಗಳನ್ನು ಅಧಿಕಮಾಡುತ್ತಾನೆ.
ನಿನ್ನ ಶತ್ರು ಬಿದ್ದರೆ ಸಂತೋಷಿಸಬೇಡ; ಅವನು ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ;
ನಾನು ದಮಸ್ಕದ ಗೋಡೆಯಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಬೆನ್‌ಹದದನ ಅರಮನೆಗಳನ್ನು ತಿಂದುಬಿಡುವದು.
ಯೆರೂಸಲೇಮು ಕಷ್ಟ ಮತ್ತು ಸಂಕಟದಲ್ಲಿದ್ದಾಗ ಪೂರ್ವದಿನಗಳಲ್ಲಿ ತನಗಿದ್ದ ರಮ್ಯವಾದವುಗಳೆಲ್ಲವನ್ನು ಜ್ಞಾಪಕಮಾಡಿಕೊಂಡಿದ್ದಾಳೆ. ಆಕೆಯ ಜನರು ಶತ್ರುವಿನ ಕೈಯಲ್ಲಿ ಬಿದ್ದಾಗ ಯಾವನೂ ಸಹಾಯಮಾಡಲಿಲ್ಲ. ವೈರಿಗಳು ಅವಳನ್ನು ನೋಡಿ ಅವಳ ಸಬ್ಬತ್ತುಗಳ ವಿಷಯದಲ್ಲಿ ಅಪಹಾಸ್ಯಮಾಡಿದರು.
ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ; ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿ--ಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ?
ದೇವರಾದ ಕರ್ತನು ಹೇಳುವದೇನಂದರೆ; ನಿನ್ನ ಕೈಯಿಂದ ಬಡಿದು ನಿನ್ನ ಪಾದದಿಂದ ತುಳಿದು ಹೇಳ ಬೇಕಾದದ್ದೇನಂದರೆ--ಮನೆಯವರ ಸಮಸ್ತ ಕೆಟ್ಟ ಅಸಹ್ಯಗಳೇ ಅಯ್ಯೋ, ಅವರು ಕತ್ತಿಯಿಂದಲೂ ಬರ ದಿಂದಲೂ ಮತ್ತು ವ್ಯಾಧಿಗಳಿಂದಲೂ ಬೀಳುವರು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಫಿಲಿಷ್ಟಿಯರು ಮುಯ್ಯಿಗೆ ಮುಯ್ಯಿ ನಡಿಸಿ, ಹಗೆಯುಳ್ಳ ಹೃದಯದಿಂದ ಸೇಡು ತೀರಿಸಿಕೊಂಡು ಪೂರ್ವದ ಕ್ರೋಧದಿಂದ ಕೆಡಿಸಿದರು.
ಹೇಗೆ ನೀನು ಇಸ್ರಾಯೇಲ್ಯರ ಸ್ವಾತಂತ್ರ್ಯದ ನಾಶನಕ್ಕೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಓ ಸೇಯಾರ್ ಪರ್ವತವೇ ಮತ್ತು ಸಮಸ್ತ ಎದೋಮೇಸಂಪೂರ್ಣವಾಗಿ ಹಾಳಾಗುವಿ; ಆಗ ನಾನೇ ಕರ್ತ ನೆಂದು ನಿಮಗೆ ತಿಳಿಯುವದು.
ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಶ್ಚಯವಾಗಿ ನನ್ನ ರೋಷದ ಬೆಂಕಿ ಯಿಂದ ಅನ್ಯಜನಾಂಗಗಳಲ್ಲಿ ಉಳಿದವರಿಗೂ ಎಲ್ಲಾ ಎದೋಮಿಗೆ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶ ವನ್ನು ಕೊಳ್ಳೆಯಾಗಿ ಹೊರಗೆ ಹಾಕುವ ಹಾಗೆ ತಮಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದಾರೆ.
ಆದರೆ ನಿನ್ನ ಸಹೋದರನ ದಿನದಲ್ಲಿ ಅವನು ಅನ್ಯನಾದ ದಿನದಲ್ಲಿ ನೀನು ನೋಡಬಾರ ದಾಗಿತ್ತು; ಯೆಹೂದನ ಮಕ್ಕಳ ಮೇಲೆ ಅವರ ನಾಶನದ ದಿವಸದಲ್ಲಿ ಸಂತೋಷಿಸಬಾರದಾಗಿತ್ತು; ಕಷ್ಟದ ದಿನದಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು;
ನಿನ್ನ ಗಾಯವು ಗುಣಹೊಂದದು; ನಿನ್ನ ಗಾಯ ಕಠಿಣ ವಾದದ್ದು; ನಿನ್ನ ಸುದ್ದಿಯನ್ನು ಕೇಳುವವರೆಲ್ಲರು ನಿನಗೆ ಚಪ್ಪಾಳೆ ಹೊಡೆಯುವರು; ನಿನ್ನ ಕೆಟ್ಟತನವು ನಿತ್ಯವಾಗಿ ಯಾರ ಮೇಲೆ ಹಾದುಹೋಗದೆ ಇತ್ತು?
ನನ್ನ ಜನರನ್ನು ನಿಂದಿಸಿ, ಅವರ ಮೇರೆಗೆ ಮೋವಾ ಬ್ಯರೂ ಅಮ್ಮೋನ್ಯರೂ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಂಡದ್ದನ್ನು ನಾನು ಕೇಳಿದ್ದೇನೆ.
ಅವರ ಗರ್ವಕ್ಕೋಸ್ಕರ ಇದೇ ಅವರಿಗೆ ಸಿಕ್ಕುವದು; ಅವರು ಸೈನ್ಯಗಳ ಕರ್ತನ ಜನರಿಗೆ ವಿರೋಧವಾಗಿ ನಿಂದಿಸಿ ತಮ್ಮನ್ನು ಹೆಚ್ಚಿಸಿಕೊಂಡ ದ್ದರಿಂದಲೇ
ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.