ನಿನ್ನ ವಿಷಯದಲ್ಲಿ ಗೋಳಾಟವನ್ನೆತ್ತಿ ನಿನಗೆ ಹೇಳುವದೇನಂದರೆ, ಸಮು ದ್ರಗಳ ಬಳಿಯಲ್ಲಿ ವಾಸಿಸಿದವಳೇ, ಹೆಸರು ಗೊಂಡ ಪಟ್ಟಣವೇ, ನೀನೂ ತನ್ನ ನಿವಾಸಿಗಳೂ ಸಮುದ್ರದಲ್ಲಿ ಬಲವಾಗಿದ್ದವಳೇ, ಅದರ ಸಮುದ್ರ ಸಂಚಾರವನ್ನೂ ಭಯಪಡಿಸಿದವಳೇ, ಅಯ್ಯೋ, ಹೇಗೆ ನಾಶವಾದಿ?
Cross references
ರಾಮಕ್ಕೆ ಹೋಗಿ ತೂರ್ ಎಂಬ ಬಲವಾದ ಪಟ್ಟಣದ ವರೆಗೂ ತಿರುಗಿ ಅಲ್ಲಿಂದ ಹೋಸಾಕ್ಕೆ ಹೊರಟು ಸಮುದ್ರದ ಬಳಿಯ ಅಕ್ಜೀಬಿನ ಮೇರೆಯ ಅಂಚಿಗೆ ಮುಗಿಯುವದು.
ಏನಂದರೆ--ಇಸ್ರಾಯೇಲಿನ ಸೌಂದರ್ಯವು ಉನ್ನತಸ್ಥಳಗಳ ಮೇಲೆ ಕೊಲ್ಲಲ್ಪಟ್ಟಿದೆ. ಪರಾಕ್ರಮ ಶಾಲಿಗಳು ಹೇಗೆ ಬಿದ್ದರು!
ಪರಾಕ್ರಮಶಾಲಿಗಳು ಹೇಗೆ ಯುದ್ಧದಲ್ಲಿ ಬಿದ್ದಿದ್ದಾರೆ! ಯೋನಾತಾನನೇ, ನೀನು ನಿನ್ನ ಉನ್ನತಸ್ಥಳಗಳಲ್ಲಿ ಕೊಲ್ಲಲ್ಪಟ್ಟಿ.
ಓ ಲೂಸಿಫರ್ ಉದಯದ ಮಗನೇ. ಆಕಾಶದಿಂದ ನೀನು ಹೇಗೆ ಬಿದ್ದೀ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಕಡಿಯಲ್ಪಟ್ಟಿದ್ದೀ?
ಚೀದೋನೇ, ನಾಚಿಕೆ ಪಡು, ಸಮುದ್ರವು, ಸಮುದ್ರದುರ್ಗವೂ--ನಾವು ಪ್ರಸವವೇದನೆ ಪಡುವದಿಲ್ಲ, ಹೆರುವದಿಲ್ಲ; ಇಲ್ಲವೆ ಮಕ್ಕಳನ್ನು ಬೆಳೆಸುವದಿಲ್ಲ ಕನ್ಯಾಸ್ತ್ರೀಯರನ್ನು ಸಾಕಿ ಸಲ ಹಲಿಲ್ಲ ಎಂದು ಹೇಳಿದೆಯಷ್ಟೆ.
ಅದು ಕಿರೀಟದಾಯಕವಾದ ಪಟ್ಟಣವು ಅದರ ವರ್ತಕರಾದ ಪ್ರಭುಗಳು, ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ತೂರಿಗೆ ವಿರುದ್ಧವಾಗಿ ಈ ಆಲೋಚನೆ ಮಾಡಿದವರು ಯಾರು?
ಆದಾಗ್ಯೂ ಅವರು ನನ್ನ ಮಾತನ್ನು ಕೇಳದೆ ಕಿವಿಗೊಡದೆ ತಮ ಕುತ್ತಿಗೆಯನ್ನು ಕಠಿಣಮಾಡಿಕೊಂಡು ತಮ್ಮ ಪಿತೃಗಳಿಗಿಂತ ಕೆಟ್ಟದ್ದನ್ನು ಮಾಡಿದರು.
ನನ್ನ ಗುಡಾರವು ಸೂರೆಯಾಯಿತು; ನನ್ನ ಹಗ್ಗಗಳೆಲ್ಲಾ ಹರಿದಿವೆ; ನನ್ನ ಮಕ್ಕಳು ನನ್ನನ್ನು ಬಿಟ್ಟು ಹೋಗಿದ್ದಾರೆ, ಅವರು ಇಲ್ಲ; ಇನ್ನು ಮೇಲೆ ನನ್ನ ಡೇರೆಯನ್ನು ಹರಡುವದಕ್ಕೂ ನನ್ನ ಪರದೆಗಳನ್ನು ನಿಲ್ಲಿಸುವದಕ್ಕೂ ಒಬ್ಬನೂ ಇಲ್ಲ.
ಜನಭರಿತವಾಗಿದ್ದ ನಗರಿಯು ಹೇಗೆ ಒಂಟಿಯಾಗಿ ಕೂತುಕೊಂಡಿದ್ದಾಳೆ! ಅವಳು ಹೇಗೆ ವಿಧವೆಯಾದಳು! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ ಹೇಗೆ ಕಪ್ಪವನ್ನು ಕೊಡುವಂಥವಳಾದಳು!
ಇದಲ್ಲದೆ ನೀನು ಇಸ್ರಾಯೇಲಿನ ಪ್ರಧಾನ ವಿಷಯವಾಗಿ ಈ ಪ್ರಲಾಪ ವನ್ನೆತ್ತಿ
ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು ಅದರಲ್ಲಿ ಫಲವನ್ನು ತಿಂದು ಬಿಟ್ಟಿದೆ; ಅದರಲ್ಲಿ ಆಳುವದಕ್ಕೆ ರಾಜದಂಡಕ್ಕಾಗಿ ತಕ್ಕದಾದ ಬಲವುಳ್ಳ ಬಳ್ಳಿಯು ಈಗ ಇಲ್ಲ; ಇದು ಪ್ರಲಾಪವಾಗಿದೆ; ಪ್ರಲಾಪಕ್ಕಾಗಿಯೇ ಇದೆ.
ಮನುಷ್ಯಪುತ್ರನೇ, ಈಗ ತೂರಿನ ಬಗ್ಗೆ ನೀನು ಗೋಳಾಟವನ್ನೆತ್ತು;
ಮನುಷ್ಯಪುತ್ರನೇ, ತೂರಿನ ಪ್ರಭುವಿಗೆ ಹೇಳಬೇಕಾದದ್ದೇನಂದರೆ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಹೃದಯವು ಹೆಚ್ಚಿಸಲ್ಪಟ್ಟಿದ್ದರಿಂದ--ನಾನೇ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿ ರುವೆನೆಂದು ಹೇಳಿದ್ದರಿಂದ ನೀನು ದೇವರಲ್ಲ, ಮನು ಷ್ಯನೇ; ಆದರೂ ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡಿರುವೆ.
ಮನುಷ್ಯಪುತ್ರನೇ, ತೂರಿನ ಅರಸನ ವಿಷಯದಲ್ಲಿ ಶೋಕಗೀತೆಯನ್ನೆತ್ತಿ ಅವನಿಗೆ ಹೀಗೆ ಹೇಳು--ದೇವರಾದ ಕರ್ತನು ಹೀಗೆ ಹೇಳು ತ್ತಾನೆ, ಸಂಪೂರ್ಣ ಜ್ಞಾನಿ, ಪರಿಪೂರ್ಣ ಸುಂದರವಾದ ನೀನು ಲೆಕ್ಕವನ್ನು ಮುದ್ರಿಸುತ್ತೀ.
ಮನುಷ್ಯ ಪುತ್ರನೇ, ಐಗುಪ್ತ ಅರಸನಾದ ಫರೋಹನ ವಿಷಯ ವಾಗಿ ಗೋಳಾಟವನ್ನೆತ್ತಿ ಅವನಿಗೆ ನೀನು ಹೇಳಬೇಕಾ ದದ್ದೇನಂದರೆ--ನೀನು ಜನಾಂಗಗಳಲ್ಲಿ ಪ್ರಾಯದ ಸಿಂಹಕ್ಕೆ ಸಮನಾಗಿರುವೆ; ಸಮುದ್ರಗಳಲ್ಲಿರುವ ತಿಮಿಂಗಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇಧಿಸಿಕೊಂಡು ಬಂದ ನೀರನ್ನು ನಿನ್ನ ಕಾಲುಗಳಿಂದ ಕಲಕಿ ಹೊಳೆಗಳನ್ನು ತುಳಿದು ಬದಿಗೆ ಮಾಡಿದೆ.
ಇದು ಅವರು ಗೋಳಾಡುವಂತಹ ಗೋಳಾಟವಾಗಿದೆ; ಐಗುಪ್ತದ ವಿಷಯವಾಗಿಯೂ ಅದರ ಎಲ್ಲಾ ಜನ ಸಮೂಹದ ವಿಷಯವಾಗಿಯೂ ಜನಾಂಗಗಳ ಕುಮಾರ್ತೆಯರು ಇದನ್ನು ಕುರಿತು ಗೋಳಾಡುವರು; ಎಂದು ದೇವರಾದ ಕರ್ತನು ಹೇಳುತ್ತಾನೆ.
ಅವರ ಸಮಾಧಿಗಳು ಕುಣಿಯ ಕಡೆಗಳಲ್ಲಿ ಇಡಲ್ಪಟ್ಟಿವೆ, ಅದರ ಸಮಾಧಿಯ ಸುತ್ತಲೂ ಅವರ ಗುಂಪುಗಳಿವೆ. ಜೀವಿತರ ದೇಶದಲ್ಲಿ ಭಯಂಕ ರರಾಗಿದ್ದ ಇವರೆಲ್ಲರೂ ಕತ್ತಿಯಿಂದ ಬಿದ್ದು ಹತರಾ ದರು.
ಸುನ್ನತಿಯಿಲ್ಲದವರಲ್ಲಿ ಬಿದ್ದಂತ ತಮ್ಮ ಯುದ್ಧದ ಆಯುಧಗಳ ಸಂಗಡ ಪಾತಾಳಕ್ಕೆ ಇಳಿದಂತ ಶೂರರ ಸಂಗಡ ಇವರು ಮಲಗಬೇಡವೇ? ಅವರು ತಮ್ಮ ಕತ್ತಿಗಳನ್ನು ತಮ್ಮ ತಲೆಗಳ ಕೆಳಗೆ ಇಟ್ಟುಕೊಂಡಿದ್ದಾರೆ; ಅವರು ಜೀವಿತರ ದೇಶದಲ್ಲಿ ಶೂರರಿಗೆ ಭಯಂಕರ ರಾಗಿದ್ದಾಗ್ಯೂ ಅವರ ಅಕ್ರಮಗಳು ಅವರ ಎಲುಬು ಗಳ ಮೇಲೆ ಇರುವವು.
ಪಶುಗಳು ಎಷ್ಟೋ ಮುಲುಗುತ್ತವೆ; ದನದ ಹಿಂಡುಗಳು ಕಳವಳಗೊಂಡಿವೆ; ಅವಕ್ಕೆ ಮೇವು ಇಲ್ಲ; ಕುರಿಮಂದೆಗಳು ಸಹ ನಾಶ ವಾಗುತ್ತವೆ.
ಕಳ್ಳರು ನಿನ್ನ ಬಳಿಗೆ ಬಂದಿದ್ದರೆ ಸುಲುಕೊಳ್ಳುವವರು ರಾತ್ರಿಯಲ್ಲಿ ಬಂದಿದ್ದರೆ ಎಷ್ಟೋ ಹಾಳಾಗುತ್ತಿದ್ದಿಯಲ್ಲಾ! ಅವರು ತಮಗೆ ಸಾಕಾಗುವಷ್ಟು ಕದ್ದುಕೊಳ್ಳುವರಲ್ಲವೋ? ದ್ರಾಕ್ಷೇಹಣ್ಣನ್ನು ಕೂಡಿಸುವ ವರು ನಿನ್ನ ಬಳಿಗೆ ಬಂದಿದ್ದರೆ ಅವರು ಕೆಲವು ದ್ರಾಕ್ಷೇ ಹಣ್ಣನ್ನು ಬಿಡುವರಲ್ಲವೋ?
ಆ ದಿನದಲ್ಲಿ ನಿಮ್ಮ ವಿಷಯವಾಗಿ ಸಾಮ್ಯವನ್ನೆತ್ತಿ ದುಃಖವುಳ್ಳ ಗೋಳಾಟವನ್ನು ಮಾಡಿ ಹೇಳುವದೇನಂದರೆ--ನಾವು ಪೂರ್ಣವಾಗಿ ಹಾಳಾ ದೆವು; ಅವನು ನನ್ನ ಜನರ ಪಾಲನ್ನು ಬದಲಾಯಿಸಿ ದ್ದಾನೆ; ಅವನು ಅದನ್ನು ನನ್ನಿಂದ ಹಿಂತೆಗೆದದ್ದು ಹೇಗೆ? ಹಿಂತಿರುಗಿ ಅವನು ನಮ್ಮ ಹೊಲಗಳನ್ನು ಹಂಚಿಕೊಟ್ಟಿ ದ್ದಾನೆ.
ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.
ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು.
ಅಯ್ಯೋ, ಅಯ್ಯೋ, ಮಹಾನಗರಿಯೇ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರವನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮುತ್ತುಗಳು ಇವುಗಳಿಂದ ಅಲಂಕರಿಸಲ್ಪಟ್ಟವಳೇ,