ಅವರು ತೂರಿನ ಗೋಡೆಗಳನ್ನು ಕೆಡಿಸಿ ಅದರ ಗೋಪುರಗಳನ್ನು ಒಡೆದು ಬಿಡುವರು, ನಾನು ಅದರ ದೂಳನ್ನು ಅದರಿಂದ ಒರಿಸಿ ಅದನ್ನು ಬಂಡೆಯ ತುದಿಯಂತೆ ಮಾಡುವೆನು.
Cross references
ಆ ಮನೆಯ ಒಳ ಭಾಗದಲ್ಲಿ ಸುತ್ತಲೂ ಕೆರೆದು, ಕೆರೆದ ಧೂಳನ್ನು ಪಟ್ಟಣದ ಹೊರಗೆ ಅಶುದ್ಧ ಸ್ಥಳದಲ್ಲಿ ಸುರಿಯ ಬೇಕೆಂದೂ
ಆತನು ಸಮುದ್ರದ ಮೇಲೆ ತನ್ನ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ; ಕರ್ತನು ವ್ಯಾಪಾರದ ಪಟ್ಟಣವನ್ನು (ಕಾನಾನ್) ಅದರ ದುರ್ಗ ಗಳನ್ನು ನಾಶಮಾಡಬೇಕೆಂದು ಆಜ್ಞಾಪಿಸಿದ್ದಾನೆ.
ನಾನು ಯಾರ ಸಂಗಡ ಮಾತನಾಡಲಿ? ಅವರು ಕೇಳುವ ಹಾಗೆ ಯಾರನ್ನು ಎಚ್ಚರಿಸಲಿ? ಇಗೋ, ಅವರು ಆಲೈಸಲಾರದ ಹಾಗೆ ಅವರ ಕಿವಿ ಪರಿಛೇದನೆ ಯಿಲ್ಲದಾಗಿದೆ; ಇಗೋ, ಕರ್ತನ ವಾಕ್ಯವು ಅವರಿಗೆ ನಿಂದೆಯಾಗಿದೆ, ಅದರಲ್ಲಿ ಅವರಿಗೆ ಸಂತೋಷವಿಲ್ಲ.
ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ; ದೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ;
ತನ್ನ ಯುದ್ಧಯಂತ್ರಗಳನ್ನು ನಿನ್ನ ಗೋಡೆಗಳಿಗೆ ವಿರೋಧ ವಾಗಿ ತಾಕಿಸುವೆನು ನಿನ್ನ ಗೋಪುರಗಳನ್ನು ತನ್ನ ಕೊಡಲಿಗಳಿಂದ ಒಡೆದು ಬಿಡುವನು.
ಅವರು ನಿನ್ನ ಸಂಪತ್ತನ್ನು ಕಸಿದುಕೊಂಡು, ಸರಕುಗಳನ್ನು ಕೊಳ್ಳೇ ಹೊಡೆದು, ಗೋಡೆಗಳನ್ನು ಒಡೆದು, ರಮ್ಯವಾದ ಮನೆಗಳನ್ನು ಕೆಡವಿ, ಕಲ್ಲುಗಳನ್ನೂ ಮರಗಳನ್ನೂ ದೂಳನ್ನೂ ನೀರಿನಲ್ಲಿ ಹಾಕುವರು.
ಆದರೆ ನಾನು ತೂರಿನ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.
ತೂರ್ ತನಗಾಗಿ ಬಲವಾದ ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ಧೂಳಿನಂತೆಯೂ ಚೊಕ್ಕ ಬಂಗಾರವನ್ನು ಬೀದಿಗಳ ಕೆಸರಿನಂತೆಯೂ ಕೂಡಿಸಿಕೊಂಡಿತು.