Home Bibles ಯೆಹೆಜ್ಕೇಲ 26:6 · ಕನ್ನಡ ಬೈಬಲ್
ಯೆಹೆಜ್ಕೇಲ 26:6 · ಕನ್ನಡ ಬೈಬಲ್

ಇದಲ್ಲದೆ ಬಯಲು ಭೂಮಿಯಲ್ಲಿ ರುವ ಅದರ ಕುಮಾರ್ತೆಯರು ಖಡ್ಗದಿಂದ ಕೊಲ್ಲಲ್ಪಡು ವರು, ಆಗ ನಾನೇ ಕರ್ತನೆಂದು ಎಲ್ಲರಿಗೂ ತಿಳಿಯುವದು.

Cross references

ಯೆರೆಮಿಯ 49:2

ಜನಾಂಗಗಳಿಗೆ ತಿಳಿಸಿರಿ, ಸಾರಿರಿ; ಧ್ವಜವನ್ನೆತ್ತಿರಿ; ಸಾರಿರಿ, ಮರೆಮಾಡಬೇಡಿರಿ, ಬಾಬೆಲು ಹಿಡಿಯ ಲ್ಪಟ್ಟಳು, ಬೇಲ್‌ನಿಗೆ ನಾಚಿಕೆಯಾಯಿತು, ಮೆರೋದಾ ಕನು ತುಂಡು ತುಂಡಾಗಿ ಮುರಿದು ಹೋದನು, ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಅವಳ ವಿಗ್ರಹಗಳು ಮುರಿದು ಹೋದವೆಂದು ಹೇಳಿರಿ;

ಯೆಹೆಜ್ಕೇಲ 16:46

ನಿನ್ನ ಎಡಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯವೇ ನಿನ್ನ ಅಕ್ಕ; ಬಲಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್‌ ನಿನ್ನ ತಂಗಿ.

ಯೆಹೆಜ್ಕೇಲ 16:48

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಜೀವದಾಣೆ, ನಿನ್ನ ತಂಗಿಯಾದ ಸೊದೋಮು, ತಾನಾದರೂ ತನ್ನ ಕುಮಾರ್ತೆಯ ರಾದರೂ ನೀನು ನಿನ್ನ ಕುಮಾರ್ತೆಯರು ಮಾಡಿದ ಹಾಗೆ ಮಾಡಲಿಲ್ಲ.

ಯೆಹೆಜ್ಕೇಲ 25:5

ನಾನು ರಬ್ಬಾವನ್ನು ಒಂಟೆಗಳ ನಿವಾಸಸ್ಥಳವಾಗಿಯೂ ಅಮ್ಮೋನ್ಯರ ಮಂದೆ ಗಳು ಮಲಗುವ ಸ್ಥಳವನ್ನಾಗಿಯೂ ಮಾಡುವೆನು. ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ.

ಯೆಹೆಜ್ಕೇಲ 25:7

ಇಗೋ, ನಾನು ನನ್ನ ಕೈಯನ್ನು ನಿಮ್ಮ ಮೇಲೆ ಚಾಚಿ, ಅನ್ಯಜನಾಂಗಗಳಿಗೆ ಕೊಳ್ಳೆಯಾಗಿ ಕೊಟ್ಟು ಜನಗಳೊಳಗೆ ನಿನ್ನನ್ನು ಕಡಿದುಬಿಟ್ಟು ದೇಶದೊಳಗಿಂದ ನಿನ್ನನ್ನು ನಾಶಮಾಡಿ ಸಂಹಾರ ಮಾಡುವೆನು, ಆಗ ನಾನೇ ಕರ್ತನೆಂದು ತಿಳಿಯುವಿ.

ಯೆಹೆಜ್ಕೇಲ 25:11

ಮೋವಾಬ್ಯರಿಗೆ ನಾನು ನ್ಯಾಯಗಳನ್ನು ತೀರಿಸುವೆನು; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.

ಯೆಹೆಜ್ಕೇಲ 25:14

ನಾನು ನನ್ನ ಜನರಾದ ಇಸ್ರಾಯೇಲಿನ ಮೂಲಕವಾಗಿ ನನ್ನ ಪ್ರತಿದಂಡನೆಯನ್ನು ಎದೋಮಿನ ಮೇಲೆ ಇಡುವೆನು, ಅವರು ಎದೋಮಿನಲ್ಲಿ ನನ್ನ ಕೋಪದ ಪ್ರಕಾರವೂ ರೋಷದ ಪ್ರಕಾರವೂ ಮಾಡು ವರು; ಹೀಗೆಯೇ ಅವರು ನನ್ನ ಪ್ರತಿದಂಡನೆಯನ್ನು ತಿಳಿಯುವರೆಂದು ದೇವರಾದ ಕರ್ತನು ಹೇಳುತ್ತಾನೆ.

ಯೆಹೆಜ್ಕೇಲ 25:17

ನಾನು ದೊಡ್ಡ ಪ್ರತಿದಂಡನೆ ಯನ್ನು ಉರಿಯುಳ್ಳ ಗದರಿಕೆಗಳ ಸಂಗಡ ಅವರಲ್ಲಿ ತೀರಿಸುತ್ತೇನೆ; ಹೀಗೆ ಪ್ರತೀಕಾರ ಮಾಡಿದ ಮೇಲೆ ನಾನೇ ಕರ್ತನೆಂದು ಅವರಿಗೆ ತಿಳಿಯುವದು.

ಯೆಹೆಜ್ಕೇಲ 26:8

ಅವನು ಬಯಲು ಭೂಮಿಯಲ್ಲಿನ ನಿನ್ನ ಕುಮಾರ್ತೆಯರನ್ನು ಖಡ್ಗದಿಂದ ಕೊಂದು ನಿನಗೆ ವಿರೋಧವಾಗಿ ಕೋಟೆಯನ್ನು ಕಟ್ಟಿ ದಿಬ್ಬ ಹಾಕಿ ನಿನಗೆ ವಿರೋಧವಾಗಿ ಖೇಡ್ಯವನ್ನು ಎತ್ತುವನು;

Interlinear

Choose Theme