Home Bibles ಯೆಹೆಜ್ಕೇಲ 27:31 · ಕನ್ನಡ ಬೈಬಲ್
ಯೆಹೆಜ್ಕೇಲ 27:31 · ಕನ್ನಡ ಬೈಬಲ್

ನಿನಗಾಗಿ ತಲೆಬೋಳಿಸಿಕೊಂಡು ಗೋಣಿಚೀಲವನ್ನು ಸುತ್ತಿಕೊಂಡು ಮನೋವ್ಯಥೆ ಯಿಂದ ಗೋಳಾಡಿ ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು.

Cross references

ಲೇವ್ಯಕಾಂಡ 21:5

ಅವರು ತಮ್ಮ ತಲೆಯನ್ನು ಬೋಳಿಸಿಕೊಳ್ಳಬಾರದು. ಅಲ್ಲದೆ ತಮ್ಮ ಗಡ್ಡದ ಮೂಲೆಯನ್ನು ಬೋಳಿಸಿ ಕೊಳ್ಳಬಾರದು. ತಮ್ಮ ಶರೀರವನ್ನು ಕೊಯ್ದುಕೊಳ್ಳ ಬಾರದು.

ದ್ವಿತೀಯೋಪದೇಶಕಾಂಡ 14:1

ನೀವು ನಿಮ್ಮ ದೇವರಾದ ಕರ್ತನ ಮಕ್ಕಳೇ. ನೀವು ಸತ್ತವರಿಗೋಸ್ಕರ ಗಾಯಮಾಡಿ ಕೊಳ್ಳಬೇಡಿರಿ. ನಿಮ್ಮ ಕಣ್ಣುಗಳ ನಡುವೆ ಬೋಳಿಸಿ ಕೊಳ್ಳಬೇಡಿರಿ.

ಯೆಶಾಯ 15:2

ಬಯಿತ್‌ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು.

ಯೆಶಾಯ 16:9

ಆದಕಾರಣ ಸಿಬ್ಮದ ದ್ರಾಕ್ಷಾ ಲತೆಯ ನಿಮಿತ್ತ ಯಜ್ಜೇರಿನೊಂದಿಗೆ ಅಳುವೆನು; ಓ ಹೆಷ್ಬೋನೇ, ಎಲೆಯಾಲೇ, ನಿನ್ನನ್ನು ನನ್ನ ಕಣ್ಣೀರಿ ನಿಂದ ತೋಯಿಸುವೆನು; ಬಿದ್ದುಹೋದ ನಿನ್ನ ಬೇಸಿ ಗೆಯ ಫಲಗಳಿಗೂ ಬೆಳೆಗಳಿಗೂ ಆರ್ಭಟಿಸುವರು.

ಯೆಶಾಯ 22:4

ಹೀಗಿರಲು ನನ್ನ ಕಡೆ ಯಿಂದ ದೃಷ್ಟಿ ತಿರುಗಿಸಿರಿ. ಬಹುಸಂಕಟದಿಂದ ನಾನು ಅಳುವೆನು. ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವದಕ್ಕೆ ತವಕಗೊಳ್ಳದಿರಿ ಅಂದೆನು.

ಯೆಶಾಯ 22:12

ಆ ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು.

ಯೆರೆಮಿಯ 16:6

ಅವನು ಅಡವಿಯಲ್ಲಿರುವ ಕುರುಚಲ ಗಿಡದ ಹಾಗಿರುವನು; ಒಳ್ಳೇದು ಬರುವಾಗ ನೋಡದೆ ಇರುವನು; ನಿವಾಸಿ ಗಳಿಲ್ಲದ ಚೌಳುನೆಲವಾಗಿರುವ ಅರಣ್ಯದ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು.

ಯೆರೆಮಿಯ 47:5

ಲೂಹೀತ್‌ ದಿಣ್ಣೆಯನ್ನು ಅಳುತ್ತಲೇ ಹತ್ತುವರು; ಹೊರೊನಯಿಮಿನ ಇಳಿಜಾರಿನಲ್ಲಿ ಶತ್ರುಗಳು ನಾಶನದ ಶಬ್ದವನ್ನು ಕೇಳಿದ್ದಾರೆ.

ಯೆರೆಮಿಯ 48:37

ಏಲಾಮನ್ನು ಅವರ ಶತ್ರುಗಳ ಮುಂದೆಯೂ ಪ್ರಾಣವನ್ನು ಹುಡುಕುವವರ ಮುಂದೆಯೂ ಹೆದರ ಮಾಡುವೆನು; ಅವರ ಮೇಲೆ ಕೇಡನ್ನೂ ನನ್ನ ಕೋಪದ ಉಗ್ರವನ್ನೂ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ; ಅವರನ್ನು ಮುಗಿಸಿ ಬಿಡುವವರೆಗೆ ಕತ್ತಿಯನ್ನು ಅವರ ಹಿಂದೆ ಕಳುಹಿಸುವೆನು.

ಯೆಹೆಜ್ಕೇಲ 7:18

ಅವರು ತಮ್ಮಲ್ಲಿ ಗೋಣಿತಟ್ಟುಗಳನ್ನು ಕಟ್ಟಿ ಕೊಳ್ಳುವರು ಮತ್ತು ಭಯವು ಅವರನ್ನು ಮುಚ್ಚಿಬಿಡು ವದು; ಎಲ್ಲಾ ಮುಖಗಳ ಮೇಲೆ ನಾಚಿಕೆಯೂ ಅವರ ಎಲ್ಲಾ ತಲೆಗಳು ಬೋಳಾಗಿಯೂ ಇರುವವು.

ಯೋವೇಲ 1:13

ಯಾಜಕರೇ, ನಿಮ್ಮ ನಡುಕಟ್ಟಿಕೊಂಡು ಗೋಳಾ ಡಿರಿ; ಬಲಿಪೀಠದ ಸೇವಕರೇ, ಗೋಳಾಡಿರಿ; ನನ್ನ ದೇವರ ಸೇವಕರೇ, ಬಂದು ಗೋಣೀತಟ್ಟಿನಲ್ಲಿ ರಾತ್ರಿ ಯೆಲ್ಲಾ ಮಲಗಿರಿ, ಯಾಕಂದರೆ ಆಹಾರದರ್ಪಣೆಯೂ ಪಾನ ದರ್ಪಣೆಯೂ ನಿಮ್ಮ ದೇವರ ಆಲಯದಿಂದ ಹಿಂತೆಗೆಯಲ್ಪಟ್ಟಿವೆ.

ಆಮೋಸ 8:10

ನಿಮ್ಮ ಹಬ್ಬಗಳನ್ನು ದುಃಖಕ್ಕೂ ನಿಮ್ಮ ಹಾಡುಗಳನ್ನೆಲ್ಲಾ ಗೋಳಾಟಕ್ಕೂ ಬದಲಾಯಿಸುವೆನು; ಎಲ್ಲರೂ ಸೊಂಟಗಳಿಗೆ ಗೋಣೀತಟ್ಟನ್ನು ಕಟ್ಟಿಕೊಂಡು ತಲೆಗಳನ್ನು ಬೋಳಿಸಿಕೊಳ್ಳುವಂತೆ ಮಾಡುವೆನು; ಅದನ್ನು ಒಬ್ಬನೇ ಮಗನಿಗಾಗಿ ದುಃಖಿಸುವಂತೆಯೂ ಅದರ ಅಂತ್ಯವು ಕಹಿಯಾದ ದಿನವಾಗುವಂತೆಯೂ ಮಾಡುವೆನು.

ಮೀಕ 1:8

ಆದದರಿಂದ ನಾನು ಗೋಳಾಡಿ ಅರಚುವೆನು; ಬರಿಗಾಲಾಗಿಯೂ ಬೆತ್ತಲೆಯಾಗಿಯೂ ಹೋಗುವೆನು; ನರಿಗಳ ಹಾಗೆ ಗೋಳಾಡುವೆನು; ಬಕಪಕ್ಷಿಯಂತೆ ದುಃಖಪಡುವೆನು.

ಮೀಕ 1:16

ನಿನ್ನ ಮುದ್ದು ಮಕ್ಕಳಿಗೋಸ್ಕರ ತಲೆಬೋಳಿಸಿಕೊಂಡು ಕ್ಷೌರ ಮಾಡಿಸಿಕೊ; ಹದ್ದಿನಂತೆ ನಿನ್ನ ಬೋಳುತನವನ್ನು ಅಗಲ ಮಾಡಿಕೊ; ಅವರು ನಿನ್ನನ್ನು ಬಿಟ್ಟು ಸೆರೆಯಾಗಿ ಹೋಗಿದ್ದಾರೆ.

Interlinear

Choose Theme