Cross references
ಆದರೆ ಅರಸನಾದ ಯೆಹೋಯಾಕೀಮನು ಐಗು ಪ್ತಕ್ಕೆ ಜನರನ್ನು, ಅಂದರೆ ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನೂ ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು.
ಹನ್ನೊಂದನೇ ವರುಷದ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
ನಿನ್ನ ಆಸ್ತಿಪಾಸ್ತಿಗಳೂ ಸರಕುಗಳೂ ನಾವಿಕರೂ ಅಂಬಿಗರೂ ಒಡಕುಗಳನ್ನು ಮುಚ್ಚುವವರೂ ವ್ಯಾಪಾರಿ ಗಳೂ ನಿನ್ನಲ್ಲಿನ ಸಮಸ್ತ ಸೈನಿಕರೂ ಅಂತೂ ನಿನ್ನೊಳಗೆ ಸೇರಿಕೊಂಡಿರುವ ಸಿಬ್ಬಂದಿಯೆಲ್ಲವೂ ನಿನ್ನ ನಾಶನದ ದಿನದಲ್ಲಿ ಸಮುದ್ರದೊಳಗೆ ನಿನ್ನೊಂದಿಗೆ ಮುಳುಗಿ ಹೋಗುವರು.
ಕರ್ತನು ಹೀಗೆ ಹೇಳುತ್ತಾನೆ--ತೂರಿನ ಮೂರು ಮತ್ತು ನಾಲ್ಕರ ನಿಮಿತ್ತ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದಿಲ್ಲ; ಅವರು ಸಹೋದರರ ಒಡಂಬ ಡಿಕೆಯನ್ನು ಜ್ಞಾಪಕಮಾಡಲಿಲ್ಲ; ಪೂರ್ಣ ಸೆರೆಯನ್ನು ಎದೋಮಿಗೆ ಒಪ್ಪಿಸಿಬಿಟ್ಟರು.
ಹಮಾತು ಬಹಳ ಜ್ಞಾನವಿರುವ ತೂರ್ ಚೀದೋನ್ ಸಹ ಅದರ ಮೇರೆಯಾಗಿದೆ.
ತೂರ್ ತನಗಾಗಿ ಬಲವಾದ ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ಧೂಳಿನಂತೆಯೂ ಚೊಕ್ಕ ಬಂಗಾರವನ್ನು ಬೀದಿಗಳ ಕೆಸರಿನಂತೆಯೂ ಕೂಡಿಸಿಕೊಂಡಿತು.