ದೇವರ ತೋಟ ವಾದ ಏದೆನಿನಲ್ಲಿ ನೀನಿದ್ದಿ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇ ಧಿಕ, ಕೆಂಪು, ಸ್ಪಟಿಕ, ಚಿನ್ನ ಈ ಅಮೂಲ್ಯವಾದವು ಗಳಿಂದ ಭೂಷಿತವಾಗಿದ್ದಿ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.
Cross references
ಕರ್ತನಾದ ದೇವರು ಏದೆನಿನಲ್ಲಿ ಪೂರ್ವ ದಿಕ್ಕಿಗೆ ತೋಟವನ್ನು ಮಾಡಿ ತಾನು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇಟ್ಟನು.
ಮೊದಲನೆಯದರ ಹೆಸರು ಪೀಶೋನ್; ಅದು ಹವೀಲ ದೇಶವನ್ನೆಲ್ಲಾ ಸುತ್ತುವದು; ಅದರಲ್ಲಿ ಬಂಗಾರವಿದೆ.
ಆದದರಿಂದ ಕರ್ತನಾದ ದೇವರು ಅವನನ್ನು ಯಾವದರಿಂದ ತೆಗೆದನೋ ಆ ಭೂಮಿಯನ್ನು ವ್ಯವಸಾಯಮಾಡುವದಕ್ಕೆ ಏದೆನ್ ತೋಟದಿಂದ ಹೊರಡಿಸಿಬಿಟ್ಟನು.ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.
ಲೋಟನು ತನ್ನ ಕಣ್ಣುಗಳನ್ನು ಎತ್ತಿ ಯೊರ್ದನಿನ ಮೈದಾನವನ್ನೆಲ್ಲಾ ನೋಡಿದನು. ಯಾಕಂದರೆ ಕರ್ತನು ಸೊದೋಮನ್ನೂ ಗೊಮೋರ ವನ್ನೂ ನಾಶಮಾಡುವದಕ್ಕಿಂತ ಮುಂಚೆ ಅದೆಲ್ಲಾ ಚೋಗರಿನ ವರೆಗೆ ನೀರಾವರಿಯಾಗಿದ್ದು ಕರ್ತನ ತೋಟದಂತೆಯೂ ಐಗುಪ್ತದೇಶದಂತೆಯೂ ಇತ್ತು.
ನೀನು ಅದರಲ್ಲಿ ನಾಲ್ಕು ಕಲ್ಲುಗಳ ನಾಲ್ಕು ಸಾಲುಗಳಾಗಿ ಕಲ್ಲು ಜವೆಗಳನ್ನು ಮಾಡಬೇಕು; ಮೊದಲನೆಯ ಸಾಲಿನಲ್ಲಿ ಪದ್ಮರಾಗ ಗೋಮೇಧಕ ಮಾಣಿಕ್ಯಗಳಿರಬೇಕು. ಇದೇ ಮೊದಲ ನೆಯ ಸಾಲು.
ಅದರಲ್ಲಿ ಕಲ್ಲುಗಳನ್ನು ನಾಲ್ಕು ಸಾಲುಗಳಾಗಿ ಕೂಡ್ರಿಸಿದರು; ಮಾಣಿಕ್ಯ ಪುಷ್ಯರಾಗ ಸ್ಪಟಿಕ ಇವು ಮೊದಲನೆಯ ಸಾಲಿನಲ್ಲಿ ಇದ್ದವು.
ಕೂಷಿನ ಪುಷ್ಯರಾಗ ಅದಕ್ಕೆ ಈಡಾಗಿರುವದಿಲ್ಲ; ಶುದ್ಧ ಬಂಗಾರಕ್ಕೆ ಅದನ್ನು ತೂಗಿಸುವದಿಲ್ಲ.
ನಿನ್ನ ವೈಭವವೂ ವೀಣೆಗಳ ಸ್ವರವೂ ಸಮಾಧಿಗೆ ಇಳಿಸಲ್ಪಟ್ಟಿವೆ. ನಿನಗೆ ಹುಳುಗಳೇ ಹಾಸಿಗೆ, ನಿನ್ನ ಹೊದಿಕೆಯು ಕ್ರಿಮಿಗಳೇ;
ಮರೆತುಹೋದ ಸೂಳೆಯೇ, ಕಿನ್ನರಿಯನ್ನು ತಕ್ಕೋ, ಪಟ್ಟಣಗಳಲ್ಲಿ ಅಲೆಯುತ್ತಾ ನೀನು ನೆನಪಾಗುವ ಹಾಗೆ ಚೆನ್ನಾಗಿ ನುಡಿಸಿ ಬಹಳ ಗೀತೆಗಳನ್ನು ಹಾಡು (ಎಂಬದೇ).
ಕರ್ತನು ಅದರ ಮೇಲೆ ತರುವದಕ್ಕೆ ನೇಮಿ ಸಿದ ದಂಡವು ಹಾದುಹೋಗುವಲ್ಲೆಲ್ಲಾ ಅದು ದಮ್ಮಡಿ ಕಿನ್ನರಿಗಳ ಸಂಗಡ ಇರುವದು; ಆತನು ಗದ್ದಲವುಳ್ಳ ಯುದ್ಧಗಳಲ್ಲಿ ಅದರ ಸಂಗಡ ಯುದ್ಧಮಾಡುವನು.ಪೂರ್ವದಿಂದ (ಪುರಾತನದಿಂದ) ತೋಫೆತ್ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.
ಕರ್ತನು ಚೀಯೋನನ್ನು ಆದರಿಸುವನು; ಆತನು ಅದರ ಹಾಳಾದ ಸ್ಥಳಗ ಳನ್ನು ಸುಧಾರಿಸುವನು; ಅದರ ಅರಣ್ಯವನ್ನು ಏದೆನ್ ಹಾಗೆಯೂ ಮರುಭೂಮಿಯನ್ನು ಕರ್ತನ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ ಉಲ್ಲಾ ಸವೂ ಉಪಕಾರ ಸ್ತುತಿಯೂ ಇಂಪಾದ ಸ್ವರವೂ ಕಂಡುಬರುವವು.
ಸಂಕಟಕ್ಕೊಳಗಾದವಳೇ, ಬಿರುಗಾಳಿಯಿಂದ ಬಡಿ ಯಲ್ಪಟ್ಟು ಆದರಣೆ ಹೊಂದದವಳೇ, ಇಗೋ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು ನಿನ್ನ ಅಸ್ತಿವಾರವನ್ನು ನೀಲಮಣಿಗಳೊಂದಿಗೆ ಹಾಕುವೆನು.
ಅದನ್ನು ನಾನು ಮತ್ತೆ ಒರೆಗೆ ಸೇರಿಸುವೆನೋ? ನೀನು ನಿರ್ಮಿಸಲ್ಪಟ್ಟ ಸ್ಥಳದಲ್ಲಿಯೇ ನೀನು ಹುಟ್ಟಿದ ಸ್ಥಳದಲ್ಲಿಯೇ ನಿನಗೆ ನ್ಯಾಯತೀರಿಸುವೆನು.
ಆಗ ನಿನ್ನ ಹಾಡು ಗಳ ಶಬ್ದವನ್ನು ನಿಲ್ಲಿಸುವೆನು, ಇನ್ನು ನಿನ್ನ ಕಿನ್ನರಿಗಳ ಧ್ವನಿ ಕೇಳಲ್ಪಡುವದಿಲ್ಲ.
ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದದರಿಂದ ಅರಾಮಿನವರು ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಳು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.
ಶೆಬ ದವರು, ರಗ್ಮದವರು ನಿನ್ನ ಕಡೆಯ ವರ್ತಕರಾಗಿ ಶ್ರೇಷ್ಟವಾದ ಎಲ್ಲಾ ಸುಗಂಧ ದ್ರವ್ಯದಿಂದಲೂ ಬೆಲೆ ಯುಳ್ಳ ಎಲ್ಲಾ ರತ್ನಗಳಿಂದಲೂ ಚಿನ್ನದಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು.
ನಿನ್ನ ಸೃಷ್ಟಿಯ ದಿನದಿಂದ ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ ನಿನ್ನ ನಡತೆಯು ನಿರ್ದೋಷವಾಗಿ ಕಾಣುತ್ತಿತ್ತು.
ದೇವರ ತೋಟದ ದೇವದಾರುಗಳು ಅವನನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅವನ ಕೊಂಬೆಗಳಿಗೆ ಸಮ ವಾಗಲಿಲ್ಲ; ಆಲದ ಮರಗಳು ಅವನ ರೆಂಬೆಗಳಷ್ಟೂ ಇಲ್ಲ; ಆ ದೇವರ ತೋಟದ ಯಾವುದೇ ಮರವು ಇವನ ಸೌಂದರ್ಯಕ್ಕೆ ಸಮವಾಗಲಿಲ್ಲ.
ಹಾಳಾಗಿದ್ದ ಈ ದೇಶವು ಏದೆನಿನ ಉದ್ಯಾನವನದ ಹಾಗಾಯಿತೆಂದು ಮತ್ತು ಹಾಳಾಗಿ ಬಿದ್ದುಹೋಗಿ ಬೀಡಾಗಿ ನಶಿಸಿ ಹೋಗಿರುವ ಪಟ್ಟಣಗಳು ನಾಡಾಗಿ ಕೋಟೆಗಳಿಂದಲೂ ನಿವಾಸಿಗಳಿಂದಲೂ ತುಂಬಿವೆ ಎಂದು ಹೇಳುವರು.
ಅವರ ಮುಂದೆ ಬೆಂಕಿ ದಹಿಸುತ್ತದೆ; ಅವರ ಹಿಂದೆ ಜ್ವಾಲೆ ಸುಡುತ್ತದೆ; ಅವರ ಮುಂದೆ ದೇಶವು ಏದೆನ್ ತೋಟದ ಹಾಗಿದೆ; ಅವರ ಹಿಂದೆ ಹಾಳಾದ ಕಾಡು; ಹೌದು, ಅವುಗಳಿಗೆ ಯಾವದೂ ತಪ್ಪಿಸಿಕೊಳ್ಳಲಾರದು.
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.
ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು
ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲವಿಧವಾದ ಅಮೂಲ್ಯವಾದ ಕಲ್ಲುಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿ ವಾರವು ಸೂರ್ಯಕಾಂತ, ಎರಡನೆಯದು ನೀಲಮಣಿ, ಮೂರನೆಯದು ಕೆಂಪು, ನಾಲ್ಕನೆಯದು ಪಚ್ಚೆ.