ಆ ರಾಜ್ಯವು ಸಮಸ್ತ ರಾಜ್ಯಗಳಲ್ಲಿ ಕನಿಷ್ಠ ರಾಜ್ಯವೆನಿ ಸಿಕೊಳ್ಳುವದು; ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ಮೇಲೆ ತಲೆ ಎತ್ತದು; ಅದು ಜನಾಂಗಗಳ ಮೇಲೆ ದೊರೆತನ ಮಾಡಲಾಗ ದಂತೆ ಅದನ್ನು ಕ್ಷೀಣಗತಿಗೆ ತರುವೆನು.
Cross references
ಅದು ಮೊಳೆತು ತಗ್ಗಾದ ಪ್ರಮಾಣದಲ್ಲಿ ಹಬ್ಬುವ ದ್ರಾಕ್ಷೇ ಗಿಡವಾಯಿತು; ಅದರ ಬಳ್ಳಿಗಳು ಅದರ ಕಡೆಗೆ ತಿರುಗಿ ಕೊಂಡವು, ಅದರ ಬೇರುಗಳು ಅದರ ಕೆಳಗಿದ್ದವು; ಹೀಗೆ ಅದು ದ್ರಾಕ್ಷೇ ಗಿಡವಾಯಿತು, ಕೊಂಬೆಗಳು ಒಡೆದು ಬಳ್ಳಿಗಳು ಹಬ್ಬಿದವು.
ಆ ರಾಜ್ಯವು ತಗ್ಗಾಗಿ ಮೇಲೇಳದ ಹಾಗಿದ್ದರೂ ಅವನು ಒಡಂಬಡಿಕೆಯನ್ನು ಕೈಕೊಳ್ಳುವದರಿಂದ ಅದು ನಿಲ್ಲುವದು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ. ನಾನು ವಿಗ್ರಹಗಳನ್ನು ಹಾಳು ಮಾಡಿ ಬೊಂಬೆಗಳನ್ನು ನೋಫಿನಲ್ಲಿ ತೀರಿಸಿಬಿಡುವೆನು; ಐಗುಪ್ತದೇಶದ ಪ್ರಭುವು ಇನ್ನು ಇರುವದಿಲ್ಲ, ನಾನು ಐಗುಪ್ತ ದೇಶದಲ್ಲಿ ಭಯವನ್ನು ಉಂಟುಮಾಡುತ್ತೇನೆ.
ಮನುಷ್ಯಪುತ್ರನೇ, ಐಗುಪ್ತದ ಅರಸನಾದ ಫರೋಹನೊಂದಿಗೆ ಮತ್ತು ಅವನ ಸಮೂಹದೊಂದಿಗೆ ಮಾತ ನಾಡಿ--ನೀನು ನಿನ್ನ ದೊಡ್ಡಸ್ತಿಕೆಯಲ್ಲಿ ಯಾರಿಗೆ ಸಮಾನನಾಗಿರುವೆ?
ಮನುಷ್ಯ ಪುತ್ರನೇ, ಐಗುಪ್ತ ಅರಸನಾದ ಫರೋಹನ ವಿಷಯ ವಾಗಿ ಗೋಳಾಟವನ್ನೆತ್ತಿ ಅವನಿಗೆ ನೀನು ಹೇಳಬೇಕಾ ದದ್ದೇನಂದರೆ--ನೀನು ಜನಾಂಗಗಳಲ್ಲಿ ಪ್ರಾಯದ ಸಿಂಹಕ್ಕೆ ಸಮನಾಗಿರುವೆ; ಸಮುದ್ರಗಳಲ್ಲಿರುವ ತಿಮಿಂಗಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇಧಿಸಿಕೊಂಡು ಬಂದ ನೀರನ್ನು ನಿನ್ನ ಕಾಲುಗಳಿಂದ ಕಲಕಿ ಹೊಳೆಗಳನ್ನು ತುಳಿದು ಬದಿಗೆ ಮಾಡಿದೆ.
ಅವನು ದೇಶಗಳ ಮೇಲೂ ತನ್ನ ಕೈಯನ್ನು ಚಾಚುವನು; ಐಗುಪ್ತ ದೇಶವು ತಪ್ಪಿಸಿ ಕೊಳ್ಳದು.
ನದಿಗಳ ಬಳಿ ನೆಲೆಯಾಗಿದ್ದ ಅಮೋನಿಗಿಂತ ನೀನು ಒಳ್ಳೆಯವಳೋ? ಅದರ ಸುತ್ತಲೂ ನೀರಿತ್ತು; ಅದರ ಬಲವು ಸಮುದ್ರವೇ; ಸಮುದ್ರವು ಅದಕ್ಕೆ ಗೋಡೆ ಯಾಗಿತ್ತು.
ಅವನು ಸಮುದ್ರವನ್ನು ಬಾಧೆಯಿಂದ ದಾಟುವನು; ಸಮುದ್ರದಲ್ಲಿ ತೆರೆಗಳನ್ನು ಬಡಿಯು ವನು; ನದಿಯ ಅಗಾಧಗಳೆಲ್ಲಾ ಒಣಗುವವು; ಅಶ್ಯೂರಿನ ಗರ್ವವು ತಗ್ಗಿಸಲ್ಪಡುವದು; ಐಗುಪ್ತದ ಮುದ್ರೆಕೋಲು ಹೋಗಿಬಿಡುವದು.ಕರ್ತನಲ್ಲಿ ನಾನು ಅವರನ್ನು ಬಲಪಡಿಸುವೆನು; ಆತನ ಹೆಸರಿನಲ್ಲಿ ಅವರು ಮೇಲೆ ಕೆಳಗೆ ನಡೆಯುವರು ಎಂದು ಕರ್ತನು ಅನ್ನುತ್ತಾನೆ.