Home Bibles ಯೆಹೆಜ್ಕೇಲ 29:19 · ಕನ್ನಡ ಬೈಬಲ್
ಯೆಹೆಜ್ಕೇಲ 29:19 · ಕನ್ನಡ ಬೈಬಲ್

ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತದೇಶವನ್ನು ಕೊಡುತ್ತೇನೆ, ಅವನು ಅದರ ಜನಸಮೂಹವನ್ನೂ ಕೊಳ್ಳೆಯನ್ನೂ ಸುಲಿಗೆಯನ್ನು ಸೂರೆಮಾಡುವನು. ಇದೇ ಅವನ ದಂಡು ಪಟ್ಟ ಶ್ರಮಕ್ಕೆ ಪ್ರತಿಫಲವಾಗುವದು.

Cross references

ಯೆರೆಮಿಯ 43:10

ಈ ದಿನದ ವರೆಗೂ ಅವರು ತಗ್ಗಿಸಿಕೊಳ್ಳಲಿಲ್ಲ, ಭಯಪಡಲಿಲ್ಲ; ನಾನು ನಿಮ್ಮ ಮುಂದೆಯೂ ನಿಮ್ಮ ತಂದೆಗಳ ಮುಂದೆಯೂ ಇಟ್ಟ ನನ್ನ ನ್ಯಾಯ ಪ್ರಮಾಣದಲ್ಲಿಯೂ ನನ್ನ ನಿಯಮಗಳಲ್ಲಿಯೂ ನಡೆಯಲಿಲ್ಲ.

ಯೆರೆಮಿಯ 43:12

ಐಗುಪ್ತದೇಶಕ್ಕೆ ಹೋಗಿ ಅಲ್ಲಿ ತಂಗಬೇಕೆಂದು ತಮ್ಮ ಮುಖಗಳನ್ನು ತಿರುಗಿಸಿರುವ ಯೆಹೂದದಲ್ಲಿ ಉಳಿದಿರುವವರನ್ನು ತಕ್ಕೊಳ್ಳುತ್ತೇನೆ; ಅವರೆಲ್ಲರೂ ಕಡಿದು ಬಿಡಲ್ಪಟ್ಟ ಐಗುಪ್ತದೇಶದಲ್ಲಿ ಬೀಳುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಕಡಿದು ಬಿಡಲ್ಪಡು ವರು; ಚಿಕ್ಕವನು ಮೊದಲುಗೊಂಡು ದೊಡ್ಡವನ ವರೆಗೂ ಕತ್ತಿಯಿಂದಲೂ ಕ್ಷಾಮದಿಂದಲೂ ಸಾಯು ವರು. ಅವರು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವರು.

ಯೆಹೆಜ್ಕೇಲ 29:8

ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ನಿನ್ನ ಮೇಲೆ ಕತ್ತಿಯನ್ನು ತರುತ್ತೇನೆ. ಮನುಷ್ಯರನ್ನೂ ಮೃಗಗಳನ್ನೂ ನಿನ್ನೊಳಗಿಂದ ಕಡಿದುಬಿಡುತ್ತೇನೆ.

ಯೆಹೆಜ್ಕೇಲ 30:4

ಕತ್ತಿಯು ಐಗುಪ್ತದ ಮೇಲೆ ಬರುವದು, ಅಲ್ಲಿನ ಪ್ರಜೆಗಳು ಹತರಾಗಲು ಐಥಿಯೋಪ್ಯ ದಲ್ಲಿಯೂ ಸಂಕಟವಾಗುವದು; ಐಗುಪ್ತದ ಜನಸಮೂ ಹವು ಒಯ್ಯಲ್ಪಡುವದು ಅದರ ಅಸ್ತಿವಾರವು ಮುರಿದು ಹಾಳಾಗುವದು.

ಯೆಹೆಜ್ಕೇಲ 30:10

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಐಗುಪ್ತದ ಜನಸಮೂಹವನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಿಂದ ಕೊನೆಗಾಣಿಸುವೆನು.

ಯೆಹೆಜ್ಕೇಲ 30:24

ಬಾಬೆಲಿನ ಅರಸನ ತೋಳು ಗಳನ್ನು ನಾನು ಬಲಪಡಿಸುವೆನು; ಅವನ ಕೈಯಲ್ಲಿ ನನ್ನ ಕತ್ತಿಯನ್ನಿಡುವೆನು; ಫರೋಹನ ತೋಳನ್ನು ಮುರಿಯುವೆನು, ಅವನು ಗಾಯದಿಂದ ಸಾಯುವ ಹಾಗೆ ಅವನ ಮುಂದೆ ನರಳಾಡುವನು.

ಯೆಹೆಜ್ಕೇಲ 32:11

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನ ಅರಸನ ಕತ್ತಿಯು ನಿನ್ನ ಮೇಲೆ ಬರುವದು;

Interlinear

Choose Theme