ಭೂಮಿಯ ಮೇಲಿರುವ ಮೃಗಗಳಿಗೂ ಆಕಾಶದ ಪಕ್ಷಿಗಳಿಗೂ ನಿನ್ನನ್ನು ಆಹಾರ ವನ್ನಾಗಿ ಕೊಟ್ಟಿದ್ದೇನೆ.
Cross references
ದಾವೀದನಿಗೆ--ನೀನು ನನ್ನ ಬಳಿಗೆ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು ಅಂದನು.
ನೀನು ಲಿವ್ಯಾತಾನದ ತಲೆ ಗಳನ್ನು ಒಡೆದು ತುಂಡು ತುಂಡುಮಾಡಿದಿ. ಅದನ್ನು ಅರಣ್ಯದ ಜನರಿಗೆ ಆಹಾರವಾಗಿ ಕೊಟ್ಟಿ.
ಕರ್ತನು ನಿನ್ನ ಬಲ ಪಾರ್ಶ್ವದಲ್ಲಿದ್ದು ತನ್ನ ಕೋಪದ ದಿವಸದಲ್ಲಿ ಅರಸ ರನ್ನು ಹೊಡೆಯುವನು.
ಹಾ, ಅರಣ್ಯದಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೇದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು; ಅವರೆಲ್ಲರೂ ವ್ಯಭಿಚಾರಿಗಳೇ, ವಂಚಕರ ಕೂಟವೇ.
ಆಗ ನಾನು ನಿನಗೆ ಕೊಟ್ಟ ಸ್ವಾಸ್ತ್ಯವನ್ನು ನಿನ್ನಷ್ಟಕ್ಕೆ ನೀನೇ ಬಿಟ್ಟು ಬಿಡುವಿ; ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗಳನ್ನು ನೀನು ಸೇವಿಸುವಂತೆ ಮಾಡುವೆನು, ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ, ಅದು ನಿತ್ಯವೂ ಜ್ವಲಿಸುತ್ತಿರುವದು.
ಅವನ ಬುಡದ ಮೇಲೆ ಆಕಾಶದ ಪಕ್ಷಿಗಳೆಲ್ಲಾ ಕೂತುಕೊಳ್ಳುವವು; ಬಯಲಿನ ಎಲ್ಲಾ ಪ್ರಾಣಿಗಳು ಅವನ ರೆಂಬೆಗಳ ಬಳಿಯಲ್ಲಿರುವವು;
ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆ ಯಿಂದಲೂ ಏದೆನಿನ ಯಾವ ಮರಗಳಿಗೆ ಸಮ ನಾಗಿರುವೆ? ಆದರೂ ಏದೆನಿನ ಮರಗಳ ಸಂಗಡ ಕೆಳಗಿನ ಸೀಮೆಗಳಿಗೆ ಇಳಿಸಲ್ಪಡುವಿ; ಸುನ್ನತಿಯಿಲ್ಲದವರ ಮಧ್ಯದಲ್ಲಿ ಕತ್ತಿಯಿಂದ ಹತವಾದವರ ಸಂಗಡ ಮಲ ಗುವಿ. ಇದೇ ಫರೋಹನನೂ ಅವನ ಎಲ್ಲಾ ಜನ ಸಮೂಹವೂ ಆಗಿವೆ ಎಂದು ದೇವರಾದ ಕರ್ತನು ಹೇಳುತ್ತಾನೆ.
ಆಗ ನಾನು ನಿನ್ನನ್ನು ನೆಲದ ಮೇಲೆ ಹಾಕಿಬಿಡುವೆನು, ಬಯಲಿನ ಮೇಲೆ ಬಿಸಾಡುವೆನು; ಆಕಾಶದ ಪಕ್ಷಿಗಳನ್ನೆಲ್ಲಾ ನಿನ್ನ ಮೇಲೆ ಕೂರಿಸಿ, ಸಮಸ್ತ ಭೂಮಿಯ ಮೇಲಿನ ಮೃಗಗಳನ್ನು ನಿನ್ನಿಂದ ತೃಪ್ತಿಪಡಿಸುವೆನು.
ನೀನೂ ನಿನ್ನ ಎಲ್ಲಾ ದಳಗಳೂ ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳ ಮೇಲೆ ಬೀಳುವಿರಿ; ಎಲ್ಲಾ ತರಹದ ಮಾಂಸ ತಿನ್ನುವ ಪಕ್ಷಿಗಳಿಗೂ ಬಯಲಿನ ಮೃಗಗಳಿಗೂ ತಿನ್ನುವಂತೆ ನಾನು ನಿನ್ನನ್ನು ಕೊಡುವೆನು.
ನೀನು ತೆರೆದ ಬಯಲಿನ ಮೇಲೆ ಬೀಳುವಿ; ನಾನೇ ಇದನ್ನು ಹೇಳಿರುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ.
ಆ ದಿನದಲ್ಲಿ ಆಗುವದೇನಂದರೆ -- ನಾನು ಗೋಗನಿಗೆ ಇಸ್ರಾಯೇಲಿನ ಸಮಾಧಿಗಳಲ್ಲಿ ಸ್ಥಳವನ್ನು ಕೊಡುತ್ತೇನೆ; ಯಾವದಂದರೆ ಸಮುದ್ರದ ಪೂರ್ವದಲ್ಲಿ ರುವ ಪ್ರಯಾಣಿಕರು ಹಾದುಹೋಗುವ ಕಣಿವೆಯೇ; ಆಗ ಅದು ಹಾದುಹೋಗುವವರನ್ನು ನಿಲ್ಲಿಸುವದು; ಅಲ್ಲಿ ಗೋಗನನ್ನೂ ಅವನ ಎಲ್ಲಾ ದಳವನ್ನೂ ಸಮಾಧಿ ಮಾಡುವರು; ಆ ಕಣಿವೆಯನ್ನು ಹಮೋನ ಗೋಗ್ ಎಂದು ಕರೆಯುವರು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯಪುತ್ರನೇ, ನೀನು ಪ್ರತಿಯೊಂದು ರೀತಿಯ ಪಕ್ಷಿಗಳಿಗೂ ಮತ್ತು ಬಯಲಿನ ಪ್ರತಿಯೊಂದು ಪ್ರಾಣಿ ಗಳಿಗೂ ಮಾತನಾಡಿ--ಒಟ್ಟಾಗಿ ಬನ್ನಿರಿ. ನಾನು ನಿಮ ಗಾಗಿ ಅರ್ಪಿಸುವ ನನ್ನ ಯಜ್ಞಕ್ಕೋಸ್ಕರ ಪ್ರತಿಯೊಂದು ಕಡೆಯಿಂದಲೂ ಸೇರಿರಿ; ಇದು ಇಸ್ರಾಯೇಲ್ ಪರ್ವತಗಳ ಮೇಲೆ ನಡೆಯುವ ಮಹಾಯಜ್ಞವಾಗಿದೆ. ನೀವು ಮಾಂಸವನ್ನು ತಿಂದು ರಕ್ತವನ್ನು ಕುಡಿಯ ಬಹುದು.
ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ,