ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣ ಮಾಡಿ ನಿಶ್ಚಿಂತರಾದ ಐಥಿಯೋಪ್ಯರನ್ನು ಹೆದರಿಸುವರು; ಐಗುಪ್ತದ ದಿನದಲ್ಲಿ ಆದಹಾಗೆ ಅವರ ಮೇಲೆ ದೊಡ್ಡಬಾಧೆ ಉಂಟಾಗುವದು; ಇಗೋ, ಅದು ಬಂತು.
Cross references
ಆಗ ಆ ಐದು ಮಂದಿಯು ಹೊರಟು ಲಯಿಷಿಗೆ ಹೋಗಿ ಅದರಲ್ಲಿ ವಾಸಿಸಿರುವ ಆ ಜನರನ್ನು ನೋಡು ವಾಗ ಅವರು ನಿಶ್ಚಿಂತರಾಗಿಯೂ ಚೀದೋನ್ಯರ ಹಾಗೆ ನೆಮ್ಮದಿಯಾಗಿಯೂ ಸುರಕ್ಷಿತವಾಗಿಯೂ ಇದ್ದರು; ಯಾವ ಕಾರ್ಯದಲ್ಲಾದರೂ ನಾಚಿಕೆಪಡಿಸುವದಕ್ಕೆ ಬಿಗಿಹಿಡಿಯುವ ನ್ಯಾಯಾಧಿಪತಿಯು ದೇಶದಲ್ಲಿ ಇರ ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದರು; ಯಾವ ಮನುಷ್ಯನ ಸಂಗಡವೂ ಅವರಿಗೆ ಏನೂ ಕೆಲಸವಿರಲಿಲ್ಲ.
ಓ ಐಥಿಯೋಪಿಯ ನದಿಗಳ ಆಚೆಯಲ್ಲಿರುವ ರೆಕ್ಕೆಗಳು ಪಟಪಟನೆ ಆಡುವ ನಾಡೇ, ಅಯ್ಯೋ!
ಐಗುಪ್ತವು ಬೆಚ್ಚಿ ಬೀಳುವದಕ್ಕೆ ಯೆಹೂದ ದೇಶವು ಕಾರಣವಾಗುವದು; ಈ ದೇಶದ ಹೆಸರನ್ನು ಕೇಳುವ ಪ್ರತಿಯೊಬ್ಬನೂ ಸೈನ್ಯಗಳ ಕರ್ತನು ಐಗುಪ್ತಕ್ಕೆ ಪ್ರತಿಕೂಲವಾಗಿ ಮಾಡಿಕೊಂಡಿರುವ ಆಲೋಚನೆ ಯನ್ನು ತಿಳಿದು ಬೆರಗಾಗುವನು.
ಕರ್ತನು ಹೇಳಿದ್ದೇನಂದರೆ, ನನ್ನ ಸೇವಕ ನಾದ ಯೆಶಾಯನು ಐಗುಪ್ತಕ್ಕೂ ಐಥಿಯೋಪಿ ಯಕ್ಕೂ ಗುರುತಾಗಿಯೂ ಆಶ್ಚರ್ಯವಾಗಿಯೂ ಹೀಗೆ ಮೂರು ವರ್ಷ ಬೆತ್ತಲೆಯಾಗಿ ಕೆರವಿಲ್ಲದೆ ನಡೆದನು.
ಆಗ (ನನ್ನ ಜನರು) ಅವನು ನಿರೀಕ್ಷಿಸಿಕೊಂಡಿದ್ದ ಐಥಿಯೋ ಪಿಯರ ನಿಮಿತ್ತವಾಗಿಯೂ ತಮ್ಮ ವೈಭವದ ಐಗುಪ್ತದ ವಿಷಯವಾಗಿಯೂ ಬೆಚ್ಚಿ ಬೆರಗಾಗಿ ನಾಚಿಕೆಪಡು ವರು.ಆ ದಿವಸದಲ್ಲಿ ಈ ತೀರದ ನಿವಾಸಿಗಳು ಹೇಳುವದೇನಂದರೆ--ಇಗೋ, ಅಶ್ಶೂರದ ಅರಸ ರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೇವೋ ಅವ ರಿಗೆ ಈ ಗತಿ ಬಂತಲ್ಲಾ ನಾವು ತಪ್ಪಿಸಿಕೊಳ್ಳುವದು ಹೇಗೆ ಅನ್ನುವರು.
ಐಗುಪ್ತದ ಸುದ್ದಿಗೆ ಆದ ಹಾಗೆ ತೂರಿನ ಸುದ್ದಿಗೆ ಬಹಳ ವೇದನೆಪಡು ವರು.
ನಿಶ್ಚಿಂತೆಯರಾದ ಹೆಂಗಸರೇ, ಏಳಿರಿ, ನನ್ನ ಸ್ವರ ವನ್ನು ಕೇಳಿರಿ, ಭಯವಿಲ್ಲದ ಹೆಣ್ಣುಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ.
ನಾನೇ ಇರುವವಳು ನನ್ನ ಹೊರತು ಇನ್ನು ಯಾರೂ ಇಲ್ಲ. ನಾನು ವಿಧವೆಯಾಗಿ ಕೂತುಕೊಳ್ಳು ವದಿಲ್ಲ; ಪುತ್ರಶೋಕವನ್ನು ಅನುಭವಿಸುವದಿಲ್ಲ ಎಂದು ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿ ಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು.
ಮೆರಾಥಯಿಮ್ ದೇಶಕ್ಕೂ ಪೆಕೋದಿನ ನಿವಾಸಿ ಗಳಿಗೂ ವಿರೋಧವಾಗಿ ಏರಿಹೋಗು; ಅವರನ್ನು ಹಿಂದಟ್ಟಿ ಕೆಡಿಸಿಬಿಟ್ಟು ಸಂಪೂರ್ಣ ನಾಶಮಾಡು, ನಾನು ನಿನಗೆ ಆಜ್ಞಾಪಿಸಿದ್ದೆಲಾದರ ಪ್ರಕಾರ ಮಾಡು ಎಂದು ಕರ್ತನು ಅನ್ನುತ್ತಾನೆ.
ಅತಿ ಗರ್ವಿಷ್ಠನೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ; ನಿನ್ನ ದಿವಸವೂ ನಿನ್ನ ವಿಚಾರಣೆಯ ಕಾಲವೂ ಬಂತು.
ಕರ್ತನಾದ ನಾನೇ ಅದನ್ನು ಹೇಳಿದ್ದೇನೆ, ಅದು ನಡೆಯುವದು; ನಾನು ಅದನ್ನು ಮಾಡದೆ ಬಿಡುವದಿಲ್ಲ; ಕಟಾಕ್ಷ ತೋರಿಸು ವದಿಲ್ಲ; ಪಶ್ಚಾತ್ತಾಪಪಡುವದಿಲ್ಲ. ನಿನ್ನ ಮಾರ್ಗಗಳ ಪ್ರಕಾರವೂ ನಿನ್ನ ಕ್ರಿಯೆಗಳ ಪ್ರಕಾರವೂ ನಿನಗೆ ನ್ಯಾಯ ತೀರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
ಆಮೇಲೆ ಸಮುದ್ರದ ಎಲ್ಲಾ ಪ್ರಭುಗಳು ತಮ್ಮ ಸಿಂಹಾಸನಗಳನ್ನು ಬಿಟ್ಟು ಇಳಿಯುವರು; ತಮ್ಮ ನಿಲು ವಂಗಿಗಳನ್ನು ತೆಗೆದುಹಾಕುವರು, ಚಿತ್ರವಾಗಿ ಹೊಲಿದ ತಮ್ಮ ವಸ್ತ್ರಗಳನ್ನು ಇಟ್ಟುಬಿಡುವರು; ನಡುಗುವಿಕೆಯನ್ನು ಹೊದ್ದುಕೊಳ್ಳುವರು; ನೆಲದ ಮೇಲೆ ಕುಳಿತುಕೊಳ್ಳು ವರು, ಕ್ಷಣಕ್ಷಣಕ್ಕೂ ನಡುಗುವರು, ನಿನ್ನ ವಿಷಯ ವಾಗಿ ಆಶ್ಚರ್ಯಪಡುವರು.
ದ್ವೀಪದ ನಿವಾಸಿಗಳೆಲ್ಲಾ ನಿನ್ನ ಸ್ಥಿತಿಗೆ ಬೆಚ್ಚಿ ವಿಸ್ಮಯರಾಗಿದ್ದಾರೆ. ಅರಸರು ಬಹಳ ವಾಗಿ ಭಯಪಟ್ಟಿದ್ದಾರೆ. ರಾಜರುಗಳು ನಡುಗಿ ಭೀತಿ ಗೊಂಡರು.ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸ ವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.
ಕತ್ತಿಯು ಐಗುಪ್ತದ ಮೇಲೆ ಬರುವದು, ಅಲ್ಲಿನ ಪ್ರಜೆಗಳು ಹತರಾಗಲು ಐಥಿಯೋಪ್ಯ ದಲ್ಲಿಯೂ ಸಂಕಟವಾಗುವದು; ಐಗುಪ್ತದ ಜನಸಮೂ ಹವು ಒಯ್ಯಲ್ಪಡುವದು ಅದರ ಅಸ್ತಿವಾರವು ಮುರಿದು ಹಾಳಾಗುವದು.
ಇದಲ್ಲದೆ ಜನಾಂಗಗಳೊಳಗೆ ನೀನು ಅರಿಯದ ದೇಶಗಳಲ್ಲಿ, ನಿನ್ನ ನಾಶನವನ್ನು ಪ್ರಸಿದ್ಧಿಪಡಿಸಿ, ಅನೇಕ ಜನಗಳ ಹೃದಯದಲ್ಲಿ ಗಲಿಬಿಲಿ ಎಬ್ಬಿಸುವೆನು.
ಯಾವಾಗ ಇದು ಬರುತ್ತದೋ ಆಗ ಅವರಿಗೆ ಪ್ರವಾದಿಯು ತಮ್ಮ ಸಂಗಡ ಇದ್ದಾನೆಂದು ತಿಳಿಯುವದು.
ನೀನು ಪೌಳಿಗೋಡೆಯಿಲ್ಲದ ಹಳ್ಳಿಗಳುಳ್ಳ ದೇಶಕ್ಕೆ ನಾನು ಹೋಗುವೆನು; ಪೌಳಿ ಗೋಡೆಗಳಿಲ್ಲದೆ ಇಲ್ಲವೆ ಬಾಗಲುಗಳು ಅಗುಳಿಗಳು ಇಲ್ಲದೆ ಅದೂ ಅವರು ವಿಶ್ರಾಂತಿಯಿಂದಲೂ ಸುಖ ವಾಗಿ ವಾಸಿಸುತ್ತಿರುವಾಗ ನಾನು ಹೋಗಿ,
ನಾನು ಮಾಗೋಗ್ ಮತ್ತು ಅವ ರೊಂದಿಗೆ ದ್ವೀಪಗಳಲ್ಲಿ ನಿರ್ಲಕ್ಷ್ಯವಾಗಿ ವಾಸಿಸುವವರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅವರು ನಾನೇ ಕರ್ತನೆಂದು ತಿಳಿಯುವರು.
ಕರ್ತನಾದ ದೇವರು ತನ್ನ ಪರಿಶುದ್ಧತ್ವದ ಮೇಲೆ ಆಣೆ ಇಟ್ಟುಕೊಂಡಿದ್ದಾನೆ. ಅದೇನಂದರೆ--ಇಗೋ, ನಿಮ್ಮನ್ನು ಕೊಂಡಿಗ ಳಿಂದಲೂ ನಿಮ್ಮ ವಂಶಾವಳಿಯನ್ನು ವಿಾನಿನ ಗಾಳ ಗಳಿಂದಲೂ ತೆಗೆದುಹಾಕುವ ದಿವಸಗಳು ನಿಮ್ಮ ಮೇಲೆ ಬರುವವು.
ದರ್ಶನವು ಇನ್ನು ನೇಮಕವಾದ ಕಾಲಕ್ಕೆ ಉಂಟು; ಆದರೆ ಕಡೆಯಲ್ಲಿ ಅದು ಸುಳ್ಳಾಗದೆ ಮಾತನಾಡುವದು; ಅದು ತಡವಾ ದರೂ ಅದಕ್ಕೆ ಕಾದುಕೊಂಡಿರು; ಅದು ತಡಮಾಡದೆ ನಿಶ್ಚಯವಾಗಿ ಬರುವದು.
ಕೂಷ್ಯರೇ, ನೀವೂ ಸಹ ನನ್ನ ಕತ್ತಿ ಯಿಂದ ಕೊಲ್ಲಲ್ಪಡುವಿರಿ;
ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.
ತುರಾಯಿ ಗಿಡವೇ, ಗೋಳಿಡು; ದೇವದಾರು ಬಿದ್ದುಹೋಯಿತು, ಬಲವಾದವುಗಳು ಹಾಳಾದವು; ಬಾಷಾನಿನ ಓಕ್ ಮರಗಳೇ, ಗೋಳಾ ಡಿರಿ; ದ್ರಾಕ್ಷೆಯ ಅಡವಿಯು ಇಳಿದು ಬಂದಿದೆ.
ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.