ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅವನು ಸಮಾಧಿಗೆ ಇಳಿದ ದಿನದಲ್ಲಿ ಗೋಳಾಟ ಹುಟ್ಟಿಸುವೆನು, ಅವನಿಗಾಗಿ ನಾನು ಅಗಾಧವನ್ನು ಮುಚ್ಚುವೆನು; ನಾನು ಅದರ ಪ್ರವಾಹವನ್ನು ತಡೆಹಿಡಿಯುವೆನು; ಮಹಾ ಜಲವು ನಿಲ್ಲಿಸಲ್ಪಡುವವು. ನಾನು ಲೆಬನೋನನ್ನು ಸಹ ಅವನಿಗೋಸ್ಕರ ಗೋಳಾಡಿಸುವೆನು. ಬಯಲಿನ ಮರಗಳೆಲ್ಲಾ ಅವನಿಗೋಸ್ಕರ ಕುಗ್ಗಿಹೋಗುವವು.
Cross references
ಆಮೇಲೆ ಸಮುದ್ರದ ಎಲ್ಲಾ ಪ್ರಭುಗಳು ತಮ್ಮ ಸಿಂಹಾಸನಗಳನ್ನು ಬಿಟ್ಟು ಇಳಿಯುವರು; ತಮ್ಮ ನಿಲು ವಂಗಿಗಳನ್ನು ತೆಗೆದುಹಾಕುವರು, ಚಿತ್ರವಾಗಿ ಹೊಲಿದ ತಮ್ಮ ವಸ್ತ್ರಗಳನ್ನು ಇಟ್ಟುಬಿಡುವರು; ನಡುಗುವಿಕೆಯನ್ನು ಹೊದ್ದುಕೊಳ್ಳುವರು; ನೆಲದ ಮೇಲೆ ಕುಳಿತುಕೊಳ್ಳು ವರು, ಕ್ಷಣಕ್ಷಣಕ್ಕೂ ನಡುಗುವರು, ನಿನ್ನ ವಿಷಯ ವಾಗಿ ಆಶ್ಚರ್ಯಪಡುವರು.
ಈಗ ನೀನು ಬೀಳುವ ದಿವಸದಲ್ಲಿ ದ್ವೀಪಗಳು ನಡುಗುವವು ಹೌದು, ನೀನು ಹೋಗಿಬಿಡುವದರಿಂದ ಸಮುದ್ರದಲ್ಲಿರುವ ದ್ವೀಪಗಳು ಗಾಬರಿಯಾಗುವವು.
ನಿನೆವೆ ಹುಟ್ಟಿದಂದಿನಿಂದ ನೀರಿನ ಕೆರೆಯ ಹಾಗಿತ್ತು; ಆದರೂ ಅವರು ಓಡಿಹೋಗುತ್ತಾರೆ; ನಿಲ್ಲಿರಿ, ನಿಲ್ಲಿರಿ ಅಂದರೂ ಒಬ್ಬನೂ ಹಿಂದಕ್ಕೆ ನೋಡುವದಿಲ್ಲ.
ಆಗ ಅವರು ಕರ್ತನಿಗೆ ನೀತಿಯಲ್ಲಿ ಕಾಣಿಕೆಯನ್ನು ಅರ್ಪಿಸುವದಕ್ಕಾಗಿಯೇ ಶುದ್ಧ ಮಾಡುವನು. ಯೆಹೂದದ ಮತ್ತು ಯೆರೂಸಲೇಮಿನ ಕಾಣಿಕೆಯು ಕರ್ತನಿಗೆ ಪೂರ್ವದ ದಿವಸಗಳಲ್ಲಿಯೂ ಮುಂಚಿನ ವರುಷಗಳಲ್ಲಿಯೂ ಆದ ಹಾಗೆ ಮೆಚ್ಚಿಕೆಯಾ ಗಿರುವದು.
ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು.
ಅವಳ ದಹನದ ಹೊಗೆಯನ್ನು ನೋಡುತ್ತಾ--ಈ ಮಹಾ ಪಟ್ಟಣಕ್ಕೆ ಸಮಾನವಾದ ಪಟ್ಟಣವು ಯಾವದು ಎಂದು ಕೂಗಿ ಹೇಳಿದರು.