Home Bibles ☰ Books ಯೆಹೆಜ್ಕೇಲ 32:13 · ಕನ್ನಡ ಬೈಬಲ್
ಯೆಹೆಜ್ಕೇಲ 32:13 · ಕನ್ನಡ ಬೈಬಲ್

ನಾನು ಆ ಬಹುಪ್ರವಾಹಗಳ ಬಳಿಯಲ್ಲಿರುವ ಅದರ ಮೃಗಗಳನ್ನೆಲ್ಲಾ ನಾಶಮಾಡುವೆನು; ಆ ನೀರಿನಲ್ಲಿ ಇನ್ನು ಮೇಲೆ ಮನುಷ್ಯನ ಕಾಲಾಗಲಿ, ಪ್ರಾಣಿಗಳ ಗೊರಸಾಗಲಿ ಕಲಕಿಸುವದಿಲ್ಲ.

Cross references

ಯೆಹೆಜ್ಕೇಲ 29:8

ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ನಿನ್ನ ಮೇಲೆ ಕತ್ತಿಯನ್ನು ತರುತ್ತೇನೆ. ಮನುಷ್ಯರನ್ನೂ ಮೃಗಗಳನ್ನೂ ನಿನ್ನೊಳಗಿಂದ ಕಡಿದುಬಿಡುತ್ತೇನೆ.

ಯೆಹೆಜ್ಕೇಲ 29:11

ಯಾವ ಮನುಷ್ಯನ ಪಾದವಾದರೂ ಮೃಗಗಳ ಪಾದವಾದರೂ ಅದರಲ್ಲಿ ಹಾದುಹೋಗುವ ದಿಲ್ಲ ಅಥವಾ ನಾಲ್ವತ್ತು ವರ್ಷಗಳ ಕಾಲ ಅದರಲ್ಲಿ ವಾಸಮಾಡುವವರೇ ಇರುವದಿಲ್ಲ.

ಯೆಹೆಜ್ಕೇಲ 30:12

ಇದಲ್ಲದೆ ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು; ದೇಶವನ್ನು ಅದರ ಪರಿಪೂರ್ಣತೆಯನ್ನೂ ಅವರ ಅನ್ಯರ ಕೈಯಿಂದ ಹಾಳುಮಾಡುವೆನು. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.

ಯೆಹೆಜ್ಕೇಲ 32:2

ಮನುಷ್ಯ ಪುತ್ರನೇ, ಐಗುಪ್ತ ಅರಸನಾದ ಫರೋಹನ ವಿಷಯ ವಾಗಿ ಗೋಳಾಟವನ್ನೆತ್ತಿ ಅವನಿಗೆ ನೀನು ಹೇಳಬೇಕಾ ದದ್ದೇನಂದರೆ--ನೀನು ಜನಾಂಗಗಳಲ್ಲಿ ಪ್ರಾಯದ ಸಿಂಹಕ್ಕೆ ಸಮನಾಗಿರುವೆ; ಸಮುದ್ರಗಳಲ್ಲಿರುವ ತಿಮಿಂಗಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇಧಿಸಿಕೊಂಡು ಬಂದ ನೀರನ್ನು ನಿನ್ನ ಕಾಲುಗಳಿಂದ ಕಲಕಿ ಹೊಳೆಗಳನ್ನು ತುಳಿದು ಬದಿಗೆ ಮಾಡಿದೆ.

ಯೆಹೆಜ್ಕೇಲ 34:18

ಒಳ್ಳೇಯ ಮೇವನ್ನು ಚೆನ್ನಾಗಿ ಮೇದು ಮಿಕ್ಕ ಮೇವನ್ನು ತುಳಿದು ಕಸಮಾಡಿದ್ದು ಅಲ್ಪಕಾರ್ಯವೋ? ಮತ್ತು ತಿಳಿ ನೀರನ್ನು ಕುಡಿದು ಮಿಕ್ಕಿದ್ದನ್ನು ಕಾಲಿನಿಂದ ಕಲಕಿ ಬದಿ ಮಾಡಿದ್ದು ಸಣ್ಣ ಕೆಲಸವೋ?

Interlinear

Choose Theme