Home Bibles ಯೆಹೆಜ್ಕೇಲ 32:9 · ಕನ್ನಡ ಬೈಬಲ್
ಯೆಹೆಜ್ಕೇಲ 32:9 · ಕನ್ನಡ ಬೈಬಲ್

ಇದಲ್ಲದೆ ಜನಾಂಗಗಳೊಳಗೆ ನೀನು ಅರಿಯದ ದೇಶಗಳಲ್ಲಿ, ನಿನ್ನ ನಾಶನವನ್ನು ಪ್ರಸಿದ್ಧಿಪಡಿಸಿ, ಅನೇಕ ಜನಗಳ ಹೃದಯದಲ್ಲಿ ಗಲಿಬಿಲಿ ಎಬ್ಬಿಸುವೆನು.

Cross references

ನಿರ್ಗಮಕಾಂಡ 15:14

ಜನರು ಇದನ್ನು ಕೇಳಿ ಭಯಪಡುವರು; ದುಃಖವು ಫಿಲಿಷ್ಟಿಯದಲ್ಲಿ ವಾಸಿಸುವವರನ್ನು ಹಿಡಿಯುವದು.

ಯೆರೆಮಿಯ 25:15

ಆದರೂ ನೀವು ನನ್ನನ್ನು ಕೊಂದುಹಾಕಿದರೆ ನಿಮ್ಮ ಮೇಲೆಯೂ ಈ ಪಟ್ಟಣದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಅಪರಾಧವಿಲ್ಲದ ರಕ್ತವನ್ನು ಬರಮಾಡು ತ್ತೀರೆಂದು ನಿಶ್ಚಯವಾಗಿ ತಿಳುಕೊಳ್ಳಿರಿ, ಈ ವಾಕ್ಯಗಳ ನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಅಂದನು.

ಯೆಹೆಜ್ಕೇಲ 29:12

ನಾನು ಐಗುಪ್ತ ದೇಶದವನ್ನು ಹಾಳಾದ ದೇಶಗಳ ಮಧ್ಯದಲ್ಲಿ ಹಾಳು ಮಾಡುವೆನು; ಅದರ ಪಟ್ಟಣಗಳು ಕಾಡಾಗಿರುವ ಪಟ್ಟಣಗಳ ಮಧ್ಯದಲ್ಲಿ ನಾಲ್ವತ್ತು ವರ್ಷಗಳು ಹಾಳಾಗಿರುವವು; ನಾನು ಐಗುಪ್ತರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳಲ್ಲಿ ಹರಡಿಸಿಬಿಡುವೆನು.

ಯೆಹೆಜ್ಕೇಲ 30:23

ಐಗುಪ್ತರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಹರಡುವೆನು.

ಯೆಹೆಜ್ಕೇಲ 30:26

ನಾನು ಐಗುಪ್ತರನ್ನು ಜನಾಂಗಗಳೊಳಗೆ ಚದರಿಸಿ ದೇಶಗಳಲ್ಲಿ ಹರಡಿಸು ತ್ತೇನೆ; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.

ಪ್ರಕಟನೆ 11:18

ಜನಾಂಗಗಳು ಕೋಪಿಸಿ ಕೊಂಡವು, ನಿನ್ನ ಕೋಪವು ಬಂದಿತು. ಸತ್ತವರು ತೀರ್ಪು ಹೊಂದುವದಕ್ಕೂ ನೀನು ನಿನ್ನ ಸೇವಕರಾದ ಪ್ರವಾದಿಗಳಿಗೂ ಪರಿಶುದ್ಧರಿಗೂ ನಿನ್ನ ನಾಮಕ್ಕೆ ಭಯಪಡುವ ಚಿಕ್ಕವರಿಗೂ ದೊಡ್ಡವರಿಗೂ ಪ್ರತಿ ಫಲವನ್ನು ಕೊಡುವದಕ್ಕೆ ಮತ್ತು ಭೂಮಿಯನ್ನು ನಾಶಮಾಡುವವರನುಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.

ಪ್ರಕಟನೆ 18:10

ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು.

Interlinear

Choose Theme