Home Bibles ಯೆಹೆಜ್ಕೇಲ 33:31 · ಕನ್ನಡ ಬೈಬಲ್
ಯೆಹೆಜ್ಕೇಲ 33:31 · ಕನ್ನಡ ಬೈಬಲ್

ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು.

Cross references

ದ್ವಿತೀಯೋಪದೇಶಕಾಂಡ 5:28

ನೀವು ನನ್ನ ಹತ್ತಿರ ಮಾತನಾಡಿದಾಗ ಕರ್ತನು ನಿಮ್ಮ ಮಾತುಗಳ ಶಬ್ದವನ್ನು ಕೇಳಿ ನನಗೆ--ಈ ಜನರು ನಿನಗೆ ಹೇಳಿದ ಮಾತುಗಳ ಶಬ್ದವನ್ನು ಕೇಳಿ ದ್ದೇನೆ. ಅವರು ಹೇಳಿದ್ದೆಲ್ಲಾ ಒಳ್ಳೇದು.

ಎಜ್ರಾ 4:14

ಆದರೆ ನಾವು ಅರಮನೆಯ ಉಪ್ಪನ್ನು ತಿಂದದ್ದರಿಂದ ಅರಸನ ಅವಮಾನವನ್ನು ನೋಡುವದು ನಮಗೆ ತಕ್ಕದ್ದಲ್ಲ; ಆದದರಿಂದ ನಾವು ಅರಸನ ಬಳಿಗೆ ಇದನ್ನು ಕಳುಹಿಸಿ ತಿಳಿಯಮಾಡಿ ದ್ದೇವೆ.

ಕೀರ್ತನೆಗಳು 78:36

ಆದಾಗ್ಯೂ ತಮ್ಮ ಬಾಯಿಗಳಿಂದ ಆತನಿಗೆ ಮುಖಸ್ತುತಿ ಮಾಡಿ ತಮ್ಮ ನಾಲಿಗೆಯಿಂದ ಆತನಿಗೆ ಸುಳ್ಳು ಹೇಳಿದರು.

ಯೆಶಾಯ 28:13

ಆದರೆ ಅವರು ಹೋಗಿ ಹಿಂದಕ್ಕೆ ಎಡವಿ ಮುರಿದುಕೊಳ್ಳುವ ಹಾಗೆಯೂ ಬೋನಿನಲ್ಲಿ ಹಿಡಿ ಯಲ್ಪಟ್ಟು ಸಿಕ್ಕಿಬೀಳುವ ಹಾಗೆಯೂ ಕರ್ತನ ವಾಕ್ಯವು ಅವರಿಗೆ ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ ಇರುವದು.

ಯೆಶಾಯ 29:13

ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಈ ಜನರು ಬಾಯಿಂದ ನನ್ನನ್ನು ಸವಿಾಪಿಸಿ; ಅವರ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ತಮ್ಮ ಹೃದಯವನ್ನು ನನಗೆ ದೂರ ಮಾಡಿಕೊಂಡು ಬಾಯಿ ಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.

ಯೆಶಾಯ 42:20

ನೀನು ಅನೇಕ ಸಂಗತಿಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ; ಅವನ ಕಿವಿಗಳು ತೆರೆದಿದ್ದರೂ ಕೇಳನು.

ಯೆರೆಮಿಯ 6:16

ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ; ನಾನು ಅದನ್ನು ಕೇಳಿಸಿಕೊಳ್ಳು ವದಿಲ್ಲ.

ಯೆರೆಮಿಯ 43:1

ಐಗುಪ್ತದ ಮಿಗ್ದೋಲ್‌ನಲ್ಲಿಯೂ ತಹಪನೇಸನಲ್ಲಿಯೂ ನೋಫನಲ್ಲಿಯೂ ಪತ್ರೋಸ್‌ ದೇಶದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆರೆವಿಾಯನಿಗೆ ಉಂಟಾದ ವಾಕ್ಯವು ಏನಂದರೆ--

ಯೆಹೆಜ್ಕೇಲ 8:1

ಆರನೇ ವರುಷದ ಆರನೆಯ ತಿಂಗಳಿನ ಐದನೆಯ ದಿನದಲ್ಲಿ ಆಗಿದ್ದೇನಂದರೆ--ನಾನೂ ಯೆಹೂದದ ಹಿರಿಯರೂ ನನ್ನ ಮನೆಯಲ್ಲಿ ಕುಳಿತುಕೊಂಡಿರುವಾಗ ಅಲ್ಲಿ ದೇವರಾದ ಕರ್ತನ ಹಸ್ತವು ನನ್ನ ಮೇಲೆ ಬಿತ್ತು.

ಯೆಹೆಜ್ಕೇಲ 14:1

ಆಮೇಲೆ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದು ನನ್ನ ಮುಂದೆ ಕುಳಿತುಕೊಂಡರು.

ಯೆಹೆಜ್ಕೇಲ 20:1

ಏಳನೆಯ ವರುಷದ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಆದದ್ದೇನಂದರೆ-- ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಕರ್ತನ ಬಳಿಗೆ ವಿಚಾರಣೆಗಾಗಿ ಬಂದು ನನ್ನ ಮುಂದೆ ಕುಳಿತು ಕೊಂಡರು.

ಯೆಹೆಜ್ಕೇಲ 22:27

ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ ಪ್ರಾಣ ಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿ ದ್ದಾರೆ.

ಮತ್ತಾಯ 6:24

ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು; ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು. ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ.

ಮತ್ತಾಯ 7:24

ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.

ಮತ್ತಾಯ 13:22

ಮುಳ್ಳುಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಸಹ ಇವನೇ; ಇವನು ವಾಕ್ಯವನ್ನು ಕೇಳುತ್ತಾನೆ; ಆದರೆ ಈ ಪ್ರಪಂಚದ ಚಿಂತೆಯೂ ಐಶ್ವರ್ಯದ ಮೋಸವೂ ವಾಕ್ಯವನ್ನು ಅಡಗಿಸುವ ದರಿಂದ ಅವನು ಫಲ ಕೊಡಲಾರನು.

ಮತ್ತಾಯ 19:22

ಆದರೆ ಆ ಯೌವನಸ್ಥನು ಆತನು ಹೇಳಿದ್ದನ್ನು ಕೇಳಿ ದುಃಖ ದಿಂದ ಹೊರಟುಹೋದನು. ಯಾಕಂದರೆ ಅವನಿಗೆ ಬಹಳ ಆಸ್ತಿ ಇತ್ತು.

ಲೂಕ 6:48

ಅವನು ಆಳವಾಗಿ ಅಗಿದು ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೆಯನ್ನು ಕಟ್ಟಿದ ಮನುಷ್ಯನಿಗೆ ಸಮಾನನಾಗಿದ್ದಾನೆ; ಪ್ರಳಯವು ಎದ್ದು ಪ್ರವಾಹವು ಆ ಮನೆಗೆ ರಭಸ ವಾಗಿ ಬಡಿದರೂ ಅದನ್ನು ಕದಲಿಸಲಿಕ್ಕಾಗದೆ ಹೋಯಿತು; ಯಾಕಂದರೆ ಅದು ಬಂಡೆಯ ಮೇಲೆ ಕಟ್ಟಲ್ಪಟ್ಟಿತು.ಆದರೆ (ನನ್ನ ಮಾತುಗಳನ್ನು) ಕೇಳಿ ಅದರಂತೆ ಮಾಡದೆ ಇರುವವನು ಅಸ್ತಿವಾರ ವಿಲ್ಲದೆ ಮಣ್ಣಿನ ಮೇಲೆ ಮನೆಯನ್ನು ಕಟ್ಟಿದ ಮನುಷ್ಯನಿಗೆ ಹೋಲಿಕೆಯಾಗಿದ್ದಾನೆ; ಪ್ರವಾಹವು ಅದಕ್ಕೆ ರಭಸವಾಗಿ ಬಡಿದದ್ದರಿಂದ ಕೂಡಲೆ ಅದು ಬಿತ್ತು; ಇದರಿಂದ ಆ ಮನೆಯ ನಾಶನವು ದೊಡ್ಡದಾಗಿತ್ತು.

ಲೂಕ 8:21

ಆದರೆ ಆತನು ಪ್ರತ್ಯುತ್ತರವಾಗಿ ಅವರಿಗೆ--ದೇವರ ವಾಕ್ಯವನ್ನು ಕೇಳಿ ಅದರಂತೆ ಮಾಡುವ ಇವರೇ ನನ್ನ ತಾಯಿಯೂ ನನ್ನ ಸಹೋದರರೂ ಆಗಿದ್ದಾರೆ ಎಂದು ಹೇಳಿದನು.

ಲೂಕ 10:39

ಆಕೆಗೆ ಮರಿಯಳೆಂಬ ಒಬ್ಬ ಸಹೋದರಿ ಇದ್ದಳು. ಆಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕೂತು ಆತನ ವಾಕ್ಯವನ್ನು ಕೇಳುತ್ತಿದ್ದಳು.

ಲೂಕ 11:28

ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.

ಲೂಕ 12:15

ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು.

ಲೂಕ 16:14

ಆಗ ಲೋಭಿ ಗಳಾದ ಫರಿಸಾಯರು ಸಹ ಇವೆಲ್ಲವುಗಳನ್ನು ಕೇಳಿ ಆತನಿಗೆ ಪರಿಹಾಸ್ಯ ಮಾಡಿದರು.

ಅಪೋಸ್ತಲರ ಕೃತ್ಯಗಳು 10:33

ಆದಕಾರಣ ನಾನು ತಡಮಾಡದೆ ನಿನ್ನ ಬಳಿಗೆ ಕಳುಹಿಸಿದೆನು. ನೀನು ಬಂದದ್ದು ಒಳ್ಳೇದಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತು ಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.

ಎಫೆಸದವರಿಗೆ 5:5

ಯಾವ ಜಾರನಾಗಲಿ, ಅಶುದ್ಧನಾಗಲಿ, ವಿಗ್ರಹಾರಾಧಕನಂತಿರುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯನಾಗುವದಿಲ್ಲವೆಂದು ನೀವು ಬಲ್ಲಿರಲ್ಲವೇ.

1 ತಿಮೋಥೆಯ 6:9

ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.

ಯಾಕೋಬ 1:22

ನೀವು ವಾಕ್ಯದ ಪ್ರಕಾರ ನಡೆಯುವವರಾಗಿರ್ರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸ ಬೇಡಿರಿ.

ಯಾಕೋಬ 2:14

ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆ ಯುಂಟೆಂದು ಹೇಳಿಕೊಂಡು ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವದೋ?

1 ಯೋಹಾನ 3:17

ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ?

Interlinear

Choose Theme