Home Bibles ಯೆಹೆಜ್ಕೇಲ 34:31 · ಕನ್ನಡ ಬೈಬಲ್
ಯೆಹೆಜ್ಕೇಲ 34:31 · ಕನ್ನಡ ಬೈಬಲ್

ನನ್ನ ಕುರಿಗಳೂ ನನ್ನ ಮೇವಿನ ಮಂದೆಯೂ ಆಗಿರುವ ನೀವು ನರಪ್ರಾಣಿಗಳು. ನಾನು ನಿಮ್ಮ ದೇವರು ಎಂದು ದೇವರಾದ ಕರ್ತನು ಹೇಳುತ್ತಾನೆ.

Cross references

ಕೀರ್ತನೆಗಳು 78:52

ಕುರಿಗಳ ಹಾಗೆ ತನ್ನ ಜನರನ್ನು ಹೊರತಂದು, ಮಂದೆಯ ಹಾಗೆ ಅರಣ್ಯದಲ್ಲಿ ಅವರನ್ನು ನಡಿಸಿದನು.

ಕೀರ್ತನೆಗಳು 80:1

ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.

ಕೀರ್ತನೆಗಳು 95:7

ಆತನು ನಮ್ಮ ದೇವರು; ನಾವು ಆತನು ಮೇಯಿಸುವ ಜನರೂ ಆತನ ಕೈ ಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಸ್ವರವನ್ನು ಕೇಳಿದರೆ

ಕೀರ್ತನೆಗಳು 100:3

ಕರ್ತನೇ ದೇವರೆಂದು ತಿಳುಕೊಳ್ಳಿರಿ; ನಾವಲ್ಲ, ಆತನೇ ನಮ್ಮನ್ನು ಉಂಟು ಮಾಡಿದ್ದಾನೆ; ನಾವು ಆತನ ಜನರೂ ಆತನ ಹುಲ್ಲುಗಾವಲಿನ ಮಂದೆಯೂ ಆಗಿದ್ದೇವೆ.

ಯೆಶಾಯ 40:11

ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.

ಯೆರೆಮಿಯ 23:1

ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದದ ಅರಸನಾದ ಯೆಹೋಯಾ ಕೀಮನ ಮಗನಾದ ಯೆಕೊನ್ಯನನ್ನೂ ಯೆಹೂದದ ಪ್ರಧಾನರನ್ನೂ ಬಡಗಿಯವರನ್ನೂ ಕಮ್ಮಾರರನೂ ಯೆರೂಸಲೇಮಿನಿಂದ ಸೆರೆಗೆ ಒಯ್ದು ಬಾಬೆಲಿಗೆ ತಕ್ಕೊಂಡುಹೋದ ಮೇಲೆ ಕರ್ತನು ನನಗೆ ತೋರಿಸ ಲಾಗಿ, ಅಗೋ, ಎರಡು ಪುಟ್ಟಿ ಅಂಜೂರದ ಹಣ್ಣುಗಳು ಕರ್ತನ ದೇವಾಲಯದ ಮುಂದೆ ಇದ್ದವು.

ಯೆಹೆಜ್ಕೇಲ 36:38

ಪರಿ ಶುದ್ಧ ಮಂದೆಯ ಹಾಗೆಯೂ ಯೆರೂಸಲೇಮಿನ ಪರಿಶುದ್ಧ ಹಬ್ಬಗಳ ಮಂದೆಯ ಹಾಗೆಯೂ ಇರುವರು; ಆದಕಾರಣ ಬೀಡಾದ ಪಟ್ಟಣಗಳು ಮನುಷ್ಯರ ಮಂದೆಗಳಿಂದ ತುಂಬುವವು; ನಾನೇ ಕರ್ತನೆಂದು ಅವರಿಗೆ ತಿಳಿಯುವದು.

ಮೀಕ 7:14

ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆ ಯನ್ನೂ ನಿನ್ನ ಕೋಲಿನಿಂದ ಮೇಯಿಸು; ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.

ಲೂಕ 12:32

ಚಿಕ್ಕ ಹಿಂಡೇ, ಭಯಪಡಬೇಡ; ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.

ಯೋಹಾನ 10:11

ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.

ಯೋಹಾನ 10:16

ಇದಲ್ಲದೆ ಈ ಹಟ್ಟಿಗೆ ಸೇರದ ಬೇರೆ ಕುರಿಗಳು ನನಗುಂಟು; ಅವುಗಳನ್ನು ಸಹ ನಾನು ತರಬೇಕು ಮತ್ತು ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು ಮತ್ತು ಒಬ್ಬನೇ ಕುರುಬನು ಇರುವನು.

ಯೋಹಾನ 10:26

ಆದರೆ ನಾನು ನಿಮಗೆ ಹೇಳಿದಂತೆ ನೀವು ನನ್ನ ಕುರಿಗಳಲ್ಲವಾದದರಿಂದ ನಂಬದೆ ಇದ್ದೀರಿ.

ಯೋಹಾನ 20:15

ಯೇಸು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ ಅನ್ನಲು ಆಕೆಯು ಆತನು ತೋಟಗಾರನೆಂದು ನೆನಸಿ ಆತನಿಗೆ--ಅಯ್ಯಾ, ನೀನು ಆತನನ್ನು ಇಲ್ಲಿಂದ ತೆಗೆದುಕೊಂಡು ಹೋಗಿದ್ದರೆ ಆತನನ್ನು ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು; ನಾನು ಆತನನ್ನು ತೆಗೆದುಕೊಂಡು ಹೋಗುತ್ತೇ

ಅಪೋಸ್ತಲರ ಕೃತ್ಯಗಳು 20:28

ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.

1 ಪೇತ್ರ 5:2

ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ.

Interlinear

Choose Theme