Home Bibles ಯೆಹೆಜ್ಕೇಲ 35:10 · ಕನ್ನಡ ಬೈಬಲ್
ಯೆಹೆಜ್ಕೇಲ 35:10 · ಕನ್ನಡ ಬೈಬಲ್

ಕರ್ತನು ಅವುಗಳಲ್ಲಿರುವದರಿಂದ ಈ ಎರಡು ಜನಾಂಗಗಳೂ ಈ ಎರಡು ರಾಜ್ಯಗಳೂ ನನ್ನವಾಗು ವವು. ನೀನು ಹೇಳಿದ್ದರಿಂದ ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ.

Cross references

ಅಂಕೆಗಳ ಪುಸ್ತಕ 35:34

ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.

ಕೀರ್ತನೆಗಳು 48:1

ನಮ್ಮ ದೇವರ ಪಟ್ಟಣದಲ್ಲಿ ಆತನ ಪರಿಶುದ್ಧ ಪರ್ವತದಲ್ಲಿ ಕರ್ತನು ದೊಡ್ಡ ವನೂ ಬಹಳವಾಗಿ ಸ್ತುತಿಸಲ್ಪಡುವಾತನೂ ಆಗಿದ್ದಾನೆ.

ಕೀರ್ತನೆಗಳು 76:1

ದೇವರು ಯೆಹೂದದಲ್ಲಿ ಪ್ರಸಿದ್ಧವಾಗಿದ್ದಾನೆ; ಇಸ್ರಾಯೇಲಿನಲ್ಲಿ ಆತನ ಹೆಸರು ದೊಡ್ಡದಾಗಿದೆ.

ಕೀರ್ತನೆಗಳು 83:4

ಅವರು--ಬನ್ನಿರಿ, ಅವ ರನ್ನು ಜನಾಂಗವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲಿನ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ ಅನ್ನುತ್ತಾರೆ.

ಕೀರ್ತನೆಗಳು 83:13

ಓ ನನ್ನ ದೇವರೇ, ಅವರನ್ನು ಚಕ್ರದ ಹಾಗೆಯೂ ಗಾಳಿಯ ಮುಂದಿರುವ ಕಸದ ಹಾಗೆಯೂ ಮಾಡು.

ಕೀರ್ತನೆಗಳು 132:13

ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ.

ಯೆಶಾಯ 12:6

ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.

ಯೆಶಾಯ 31:9

ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ.

ಯೆರೆಮಿಯ 49:1

ಬಾಬೆಲಿಗೆ ವಿರೋಧವಾಗಿಯೂ ಕಸ್ದೀಯರ ದೇಶಕ್ಕೆ ವಿರೋಧವಾಗಿಯೂ ಕರ್ತನು ಪ್ರವಾದಿಯಾದ ಯೆರೆವಿಾಯನ ಮೂಲಕ ಹೇಳಿಸಿದ ವಾಕ್ಯವು.

ಯೆಹೆಜ್ಕೇಲ 36:2

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಯಾಕಂದರೆ ನಿನ್ನ ಶತ್ರುವು ನಿನಗೆ ವಿರೋಧವಾಗಿ ಆಹಾ, ಪೂರ್ವದ ಉತ್ತಮ ಸ್ಥಳಗಳು ನಮಗೆ ಸ್ವಾಸ್ತ್ಯವಾದವು ಎಂದು ಹೇಳುವರು;

ಯೆಹೆಜ್ಕೇಲ 36:5

ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಶ್ಚಯವಾಗಿ ನನ್ನ ರೋಷದ ಬೆಂಕಿ ಯಿಂದ ಅನ್ಯಜನಾಂಗಗಳಲ್ಲಿ ಉಳಿದವರಿಗೂ ಎಲ್ಲಾ ಎದೋಮಿಗೆ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶ ವನ್ನು ಕೊಳ್ಳೆಯಾಗಿ ಹೊರಗೆ ಹಾಕುವ ಹಾಗೆ ತಮಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದಾರೆ.

ಯೆಹೆಜ್ಕೇಲ 48:35

ಸುತ್ತಲೂ ಹದಿನೆಂಟು ಸಾವಿರ ಅಳತೆಗಳು; ಆ ದಿನದಿಂದ ಆ ಪಟ್ಟಣದ ಹೆಸರು ಕರ್ತನು ನೆಲೆ ಯಾಗಿರುವನು ಎಂಬದೇ ಆಗಿರುವದು.

ಒಬದ್ಯ 1:13

ನನ್ನ ಜನರ ಬಾಗಲೊಳಗೆ ಅವರ ಆಪತ್ತಿನ ದಿನದಲ್ಲಿ ಪ್ರವೇಶಿಸಬಾರದಾಗಿತ್ತು; ಹೌದು, ನೀನು ಅವರ ಆಪತ್ತಿನ ದಿನದಲ್ಲಿ ಅವರ ಕೇಡನ್ನು ನೋಡಬಾರ ದಾಗಿತ್ತು; ಅವರ ಆಪತ್ತಿನ ದಿನದಲ್ಲಿ ಅವರ ಆಸ್ತಿಯ ಮೇಲೆ ಕೈಹಾಕಬಾರದಾಗಿತ್ತು;

ಸೆಫನ್ಯ 3:15

ಕರ್ತನು ನಿನ್ನ ನ್ಯಾಯ ತೀರ್ವಿಕೆಗಳನ್ನು ದೂರಮಾಡಿ ನಿನ್ನ ಶತ್ರು ವನ್ನು ತೆಗೆದುಹಾಕಿದ್ದಾನೆ; ಇಸ್ರಾಯೇಲಿನ ಅರಸನಾದ ಕರ್ತನು ನಿನ್ನ ಮಧ್ಯದಲ್ಲಿ ಇದ್ದಾನೆ; ಇನ್ನು ಮೇಲೆ ನೀನು ಕೇಡನ್ನು ನೋಡುವದಿಲ್ಲ.

ಜೆಕರ್ಯ 2:5

ಯಾಕಂ ದರೆ ನಾನು ಅದರ ಸುತ್ತಲೂ ಬೆಂಕಿಯ ಗೋಡೆಯಾ ಗಿಯೂ ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನೆಂದು ಕರ್ತನು ಅನ್ನುತ್ತಾನೆ.

Interlinear

Choose Theme