ಯೆಹೆಜ್ಕೇಲ 37:13 · ಕನ್ನಡ ಬೈಬಲ್
ಓ ನನ್ನ ಜನರೇ, ಯಾವಾಗ ನಾನು ನಿಮ್ಮ ಸಮಾಧಿಗಳನ್ನು ತೆರೆದು ಹೊರಗೆ ಬರಮಾಡುವೆನೋ ಆಗ ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
Cross references
ಕೀರ್ತನೆಗಳು 126:2
ಆಗ ನಮ್ಮ ಬಾಯಿ ನಗೆಯಿಂದಲೂ ನಾಲಿಗೆ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಅನ್ಯಜನರು--ಕರ್ತನು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ ಎಂದು ಹೇಳಿದರು.
ಯೆಹೆಜ್ಕೇಲ 16:62
ನಾನು ಈ ಒಡಂಬಡಿಕೆಯನ್ನು ನಿಮ್ಮೊಂದಿಗೆ ಸ್ಥಾಪಿಸುವೆನು; ಆದದರಿಂದ ನಾನೇ ಕರ್ತ ನೆಂದು ನಿಮಗೆ ಗೊತ್ತಾಗುವದು.ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
ಯೆಹೆಜ್ಕೇಲ 37:6
ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ ಮಾಂಸವನ್ನು ಹರಡಿ ಚರ್ಮದಿಂದ ಮುಚ್ಚಿ ನಿಮ್ಮೊಳಗೆ ಉಸಿರನ್ನು ಕೊಟ್ಟು ಬದುಕಿಸುತ್ತೇನೆ; ನಾನೇ ಕರ್ತನೆಂದು ನೀವು ತಿಳಿ ಯುವಿರಿ.