Home Bibles ಯೆಹೆಜ್ಕೇಲ 37:27 · ಕನ್ನಡ ಬೈಬಲ್
ಯೆಹೆಜ್ಕೇಲ 37:27 · ಕನ್ನಡ ಬೈಬಲ್

ನನ್ನ ಗುಡಾರವು ಸಹ ಅವರೊಂದಿಗಿರುವದು; ಹೌದು, ನಾನು ಅವರ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಕರ್ತ ನಾದ ನಾನೇ ಇಸ್ರಾಯೇಲ್ಯರನ್ನು ಪರಿಶುದ್ಧ ಗೊಳಿಸಿದೆನೆಂದು ಅನ್ಯಜನರು ತಿಳಿದುಕೊಳ್ಳುವರು.

Cross references

ಲೇವ್ಯಕಾಂಡ 26:11

ಇದಲ್ಲದೆ ನಾನು ನನ್ನ ಗುಡಾರವನ್ನು ನಿಮ್ಮ ಮಧ್ಯದಲ್ಲಿ ಮಾಡಿಕೊಳ್ಳು ವೆನು. ನನ್ನ ಪ್ರಾಣವು ನಿಮ್ಮನ್ನು ಅಸಹ್ಯಿಸದೆ ಇರುವದು.

ಯೆಹೆಜ್ಕೇಲ 11:20

ಆಗ ಅವರು ನನ್ನ ನಿಯಮಗಳಲ್ಲಿ ನಡೆದುಕೊಂಡು ನನ್ನ ನಿಯಮಗ ಳನ್ನು ಕೈಕೊಂಡು ನಡೆಯುವರು. ಅವರು ನನ್ನ ಜನರಾಗು ವರು, ನಾನು ಅವರ ದೇವರಾಗುವೆನು.

ಯೆಹೆಜ್ಕೇಲ 14:11

ಇಸ್ರಾಯೇಲಿನ ಮನೆತನದವರು ಇನ್ನು ಮೇಲೆ ನನ್ನನ್ನು ಬಿಟ್ಟು ತಿರುಗದೇ ತಮ್ಮ ಎಲ್ಲಾ ದ್ರೋಹಗಳಿಂದ ಅಶುದ್ಧರಾಗದೆ ಇರುವ ದರಿಂದ ಅವರು ನನ್ನ ಜನರಾಗಿರುವರು ಅವರಿಗೆ ನಾನು ದೇವರಾಗಿರುವೆನು, ಎಂದು ದೇವರಾದ ಕರ್ತನು ಹೇಳುತ್ತಾನೆ.

ಯೆಹೆಜ್ಕೇಲ 36:28

ನಾನು ನಿಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ವಾಸಿ ಸುವಿರಿ; ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು.

ಯೆಹೆಜ್ಕೇಲ 37:23

ಇಲ್ಲವೆ ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ಅಸಹ್ಯಗಳಿಂದಲೂ ಎಲ್ಲಾ ಅಕ್ರಮಗಳಿಂದಲೂ ಅಶುದ್ಧವಾಗುವದಿಲ್ಲ; ಆದರೆ ನಾನು ಅವರನ್ನು ಪಾಪಮಾಡಿದವರ ಎಲ್ಲಾ ನಿವಾಸಿ ಗಳಿಂದ ರಕ್ಷಿಸಿ, ಅವರನ್ನು ಶುದ್ಧಮಾಡುವೆನು; ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು.

ಹೊಶೇಯ 2:23

ತರುವಾಯ ಇಜ್ರೇಲನ್ನು ನನಗಾಗಿ ದೇಶದಲ್ಲಿ ಬಿತ್ತುವೆನು; ಕರುಣೆ ಹೊಂದ ದವಳ ಮೇಲೆಯೇ ನಾನು ಕರುಣೆಯನ್ನು ತೋರಿ ಸುವೆನು. ನನ್ನ ಜನವಲ್ಲದ್ದಕ್ಕೆ--ನೀನು ನನ್ನ ಜನ ವೆಂದು ಹೇಳುವೆನು; ಅವರು--ನನ್ನ ದೇವರೇ ಎಂದು ಭಜಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.

ಯೋಹಾನ 1:14

ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).

2 ಕೊರಿಂಥದವರಿಗೆ 6:16

ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.

ಕೊಲೊಸ್ಸೆಯವರಿಗೆ 2:9

ಕ್ರಿಸ್ತನಲ್ಲಿಯೇ ದೈವತ್ವ ಸರ್ವಸಂಪೂರ್ಣತೆಯು ಶಾರೀ ರಕವಾಗಿ ವಾಸಮಾಡುತ್ತದೆ.

ಪ್ರಕಟನೆ 21:3

ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ

ಪ್ರಕಟನೆ 21:22

ಪಟ್ಟಣದಲ್ಲಿ ನಾನು ಆಲಯವನ್ನು ಕಾಣಲಿಲ್ಲ; ಯಾಕಂದರೆ ಸರ್ವಶಕ್ತನಾದ ದೇವರಾಗಿ ರುವ ಕರ್ತನೂ ಕುರಿಮರಿಯಾದಾತನೂ ಅದರ ಆಲಯವಾಗಿದ್ದಾರೆ.

Interlinear

Choose Theme