Home Bibles ಯೆಹೆಜ್ಕೇಲ 38:16 · ಕನ್ನಡ ಬೈಬಲ್
ಯೆಹೆಜ್ಕೇಲ 38:16 · ಕನ್ನಡ ಬೈಬಲ್

ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲ್ಯರಿಗೆ ವಿರೋಧವಾಗಿ ಅವರ ಮೇಲೆ ಬರುವಿ; ಇದು ನಡೆ ಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಅನ್ಯಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ಬರಮಾಡುವೆನು.

Cross references

ನಿರ್ಗಮಕಾಂಡ 14:4

ಇದಲ್ಲದೆ ಫರೋಹನು ಅವರನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು; ಫರೋಹನಲ್ಲಿಯೂ ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು; ಆಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿಯುವರು ಎಂದು ಹೇಳಿದನು. ಅವರು ಹಾಗೆಯೇ ಮಾಡಿದರು.

ನಿರ್ಗಮಕಾಂಡ 14:18

ನಾನು ಫರೋ ಹನ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿ ಕೊಂಡಾಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿದು ಕೊಳ್ಳುವರು ಅಂದನು.

ದ್ವಿತೀಯೋಪದೇಶಕಾಂಡ 31:29

ನಾನು ಸತ್ತ ಮೇಲೆ ನೀವು ಪೂರ್ಣವಾಗಿ ನಿಮ್ಮನ್ನು ನೀವು ಕೆಡಿಸಿ ಕೊಂಡು ನಾನು ನಿಮಗೆ ಆಜ್ಞಾಪಿಸಿದ ಮಾರ್ಗದಿಂದ ತೊಲಗಿ ಹೋಗುವಿರೆಂದು ನಾನು ಬಲ್ಲೆನು; ನೀವು ಕರ್ತನ ಮುಂದೆ ಕೆಟ್ಟದ್ದನ್ನು ಮಾಡಿ ನಿಮ್ಮ ಕ್ರಿಯೆಗಳಿಂದ ಆತನಿಗೆ ಕೋಪವನ್ನೆಬ್ಬಿಸುವ ಕಾರಣ ಕಡೇ ದಿವಸಗಳಲ್ಲಿ ನಿಮಗೆ ಕೇಡುಸಂಭವಿಸುವದು ಎಂದು ಹೇಳಿದನು.ಆಗ ಮೋಶೆ ಇಸ್ರಾಯೇಲ್‌ ಸಭೆಗೆ ಕೇಳುವ ಹಾಗೆ ಈ ಹಾಡಿನ ಮಾತುಗಳನ್ನು ಹೇಳಿ ಮುಗಿಸಿದನು.

1 ಸಮುವೇಲ 17:45

ಆಗ ದಾವೀದನು ಫಿಲಿಷ್ಟಿಯನಿಗೆ--ನೀನು ಕತ್ತಿ ಈಟಿಯ ಗುರಾಣಿಯ ಸಂಗಡ ನನ್ನ ಬಳಿಗೆ ಬರುತ್ತೀ; ಆದರೆ ನೀನು ನಿಂದಿಸಿದ ಇಸ್ರಾಯೇ ಲಿನ ಸೈನ್ಯಗಳ ದೇವರಾದಂಥ ಸೈನ್ಯಗಳ ಕರ್ತನ ಹೆಸರಿ ನಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ.

2 ಅರಸುಗಳು 19:19

ಆದದ ರಿಂದ ಅವರು ಅವುಗಳನ್ನು ನಾಶಮಾಡಿದ್ದಾರೆ. ಆದರೆ ಈಗ ನಮ್ಮ ದೇವರಾದ ಕರ್ತನೇ, ನೀನೊಬ್ಬನೇ ದೇವರಾದ ಕರ್ತನಾಗಿದ್ದೀ ಎಂದು ಭೂಮಿಯ ಎಲ್ಲಾ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸು ಎಂಬದೇ.

ಕೀರ್ತನೆಗಳು 83:17

ಅವರು ನಾಚಿಕೆಪಟ್ಟು ಎಂದೆಂ ದಿಗೂ ಕಳವಳಗೊಳ್ಳಲಿ; ಹೌದು, ಅವರು ಲಜ್ಜೆ ಯಿಂದ ನಾಶವಾಗಲಿ.ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ.

ಯೆಶಾಯ 2:2

ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.

ಯೆಶಾಯ 29:23

ಆದರೆ ನನ್ನ ಕೈಕೆಲಸವಾದ ಅವನ ಮಕ್ಕಳನ್ನು ತನ್ನ ಮಧ್ಯದಲ್ಲಿ ನೋಡುವಾಗ ನನ್ನ ನಾಮವನ್ನು ಪರಿಶುದ್ಧವೆಂದೆಣಿಸಿ ಯಾಕೋಬನ ಪರಿ ಶುದ್ಧನನ್ನು ಪ್ರತಿಷ್ಠಿಸುವರು; ಇಸ್ರಾಯೇಲಿನ ದೇವ ರಿಗೆ ಭಯಪಡುವರು.ತಪ್ಪಿದ ಆತ್ಮವುಳ್ಳವರು ವಿವೇಕಿಗಳಾಗುವರು. ಗುಣುಗುಟ್ಟುವವರು ಬೋಧನೆ ಕಲಿಯುವರು.

ಯೆಹೆಜ್ಕೇಲ 20:41

ನಾನು ನಿಮ್ಮನ್ನು ಜನರಿಂದ ಹೊರತಂದು ನೀವು ಚದರಿರುವ ದೇಶಗಳೊಳಗಿಂದ ನಿಮ್ಮನ್ನು ಕೂಡಿಸುವಾಗ ನಿಮ್ಮ ಸುವಾಸನೆಯ ಸಂಗಡ ನಾನು ನಿಮ್ಮನ್ನು ಅಂಗೀಕರಿಸುವೆನು, ನಾನು ಅನ್ಯ ಜನಾಂಗಗಳ ಮುಂದೆ ನಿಮ್ಮಲ್ಲಿ ಪರಿಶುದ್ಧವೆನಿಸಿಕೊಳ್ಳು ವೆನು.

ಯೆಹೆಜ್ಕೇಲ 36:23

ನೀವು ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಮಹತ್ತರ ನಾಮವನ್ನು ನಾನು ಪರಿಶುದ್ಧಮಾಡುವೆನು; ಹಾಗೆ ನಾನು ಅವರ ಕಣ್ಣುಗಳ ಮುಂದೆ ನಿಮ್ಮಲ್ಲಿ ಪರಿಶುದ್ಧನಾದ ಮೇಲೆ ಆ ಅನ್ಯ ಜನಾಂಗಗಳವರು ನಾನೇ ಕರ್ತನೆಂದು ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.

ಯೆಹೆಜ್ಕೇಲ 38:8

ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಪರಿಶೀ ಲಿಸುತ್ತೇನೆ; ವರುಷಗಳ ಅಂತ್ಯದಲ್ಲಿ ನೀನು ಕತ್ತಿಯಿಂದ ಹಿಂತಿರುಗಿಸಲ್ಪಟ್ಟಂಥ ದೇಶಕ್ಕೂ ಯಾವಾಗಲೂ ಬೀಡಾ ಗಿದ್ದ ಇಸ್ರಾಯೇಲ್‌ ಪರ್ವತಗಳ ಮೇಲೆಯೂ ಜನಾಂಗಗಳೊಳಗಿಂದ ಮುಂದೆ ತರಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೂ ಬರುವಿ.

ಯೆಹೆಜ್ಕೇಲ 38:23

ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು.

ಯೆಹೆಜ್ಕೇಲ 39:21

ನಾನು ನನ್ನ ಮಹಿಮೆಯನ್ನು ಅನ್ಯಜನಾಂಗಗಳಲ್ಲಿ ಸ್ಥಾಪಿಸುತ್ತೇನೆ; ಎಲ್ಲಾ ಅನ್ಯಜನಾಂಗಗಳು ನಾನು ನಡೆಸಿದ ನನ್ನ ನ್ಯಾಯತೀರ್ಪನ್ನು ಮತ್ತು ಅವರ ಮೇಲೆ ಇರಿಸಿದ ನನ್ನ ಕೈಯನ್ನು ನೋಡುವವು.

ದಾನಿಯೇಲ 2:28

ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತ ದೇವರು ಪರಲೋಕದಲ್ಲಿದ್ದಾನೆ; ಆತನು ದಿವಸಗಳ ಅಂತ್ಯದಲ್ಲಿ ಸಂಭವಿಸುವಂತವುಗಳನ್ನು ಅರಸನಾದ ನೆಬೂಕದ್ನೆಚ್ಚ ರನಿಗೆ ತಿಳಿಯಪಡಿಸುತ್ತಾನೆ. ನಿನ್ನ ಕನಸಿನಲ್ಲಿ, ನಿನ್ನ ಹಾಸಿಗೆಯಲ್ಲಿ ಬಂದ ನಿನ್ನ ಮನಸ್ಸಿನ ದರ್ಶನಗಳು ಇವೇ ಆಗಿವೆ,

ದಾನಿಯೇಲ 3:24

ಆಗ ಅರಸನಾದ ನೆಬೂಕದ್ನೆ ಚ್ಚರನು ವಿಸ್ಮಯಗೊಂಡವನಾಗಿ ತ್ವರೆಯಾಗಿ ಎದ್ದು ತನ್ನ ಆಲೋಚನಾಗಾರರ ಸಂಗಡ ಮಾತನಾಡಿ--ನಾವು ಮೂವರು ಮನುಷ್ಯರನ್ನು ಕಟ್ಟಿ ಬೆಂಕಿಯಲ್ಲಿ ಹಾಕಿದೆ ವಲ್ಲವೇ? ಅಂದನು. ಆಗ ಅವರು ಅರಸನಿಗೆ--ಓ ಅರಸನೇ, ಹೌದು, ಸತ್ಯ ಎಂದು ಉತ್ತರಿಸಿದರು.

ದಾನಿಯೇಲ 4:32

ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು, ನಿನಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸುವರು. ಮಹೋ ನ್ನತನು ಮನುಷ್ಯರ ರಾಜ್ಯವನ್ನಾಳುವನೆಂದೂ ತನ್ನ ಮನಸ್ಸಿಗೆ ಸರಿಬಂದವರಿಗೆ ಅದನ್ನು ಕೊಡುವೆನೆಂದೂ ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವವು.

ದಾನಿಯೇಲ 6:15

ಆಗ ಆ ಮನುಷ್ಯರು ಅರಸನ ಬಳಿಗೆ ಕೂಡಿ ಬಂದು ಅರಸ ನಿಗೆ--ಓ ಅರಸನೇ, ನೀನು ಜಾರಿಗೆ ತಂದಿರುವ ಯಾವ ನಿರ್ಣಯವಾದರೂ ಆಜ್ಞೆಯಾದರೂ ಬದಲಾಯಿಸ ಬಾರದೆಂದು ಮೇದ್ಯಯರ ಮತ್ತು ಪಾರಸೀಯರ ನ್ಯಾಯ ಪ್ರಮಾಣದಲ್ಲಿದೆ ಎಂದು ನಿನಗೆ ತಿಳಿದರಲಿ ಅಂದನು.

ದಾನಿಯೇಲ 10:14

ಈ ಅಂತ್ಯದಿನಗಳಲ್ಲಿ ನಿನ್ನ ಜನರಿಗಾದ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ನಾನು ಬಂದೆನು. ಆ ಕಾಲದ ಸಂಗತಿಯನ್ನು ವ್ಯಕ್ತಪಡಿ ಸುವ ಹಾಗೆ ದರ್ಶನವು ಇನ್ನೂ ಅನೇಕ ದಿವಸಗಳ ವರೆಗೂ ಇದೆ.

ಹೊಶೇಯ 3:5

ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.

ಮೀಕ 4:1

ಅಂತ್ಯದಿವಸಗಳಲ್ಲಿ ಆಗುವದೇನಂದರೆ, ಕರ್ತನ ಆಲಯದ ಪರ್ವತವು ಬೆಟ್ಟಗಳ ತುದಿಯಲ್ಲಿ ನೆಲೆಯಾಗಿ ಗುಡ್ಡಗಳಿಗಿಂತ ಎತ್ತರ ವಾಗಿರುವದು; ಜನಗಳು ಅದರ ಬಳಿಗೆ ಪ್ರವಾಹದಂತೆ ಬರುವರು.

ಮೀಕ 7:15

ನೀನು ಐಗುಪ್ತ ದೇಶದೊಳಗಿಂದ ಹೊರಡುವ ದಿವಸಗಳ ಹಾಗೆ ಅವನಿಗೆ ಆಶ್ಚರ್ಯವಾದವುಗಳನ್ನು ತೋರಿಸುವೆನು.

ಮತ್ತಾಯ 6:9

ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.

1 ತಿಮೋಥೆಯ 4:1

ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.

2 ತಿಮೋಥೆಯ 3:1

ಆದರೆ ಕಡೇ ದಿವಸಗಳಲ್ಲಿ ಅಪಾಯಕರ ವಾದ ಕಾಲಗಳು ಬರುವವೆಂಬದನ್ನು ಸಹ ತಿಳಿದುಕೋ.

Interlinear

Choose Theme