Home Bibles ಯೆಹೆಜ್ಕೇಲ 38:19 · ಕನ್ನಡ ಬೈಬಲ್
ಯೆಹೆಜ್ಕೇಲ 38:19 · ಕನ್ನಡ ಬೈಬಲ್

ನನ್ನ ಈ ರೋಷದಲ್ಲಿ ಮತ್ತು ನನ್ನ ಕೋಪದ ಬೆಂಕಿಯಲ್ಲಿ ನಾನು ಮಾತನಾಡುತ್ತೇನೆ. ನಿಶ್ಚಯವಾಗಿ ಆ ದಿನ ಇಸ್ರಾಯೇಲ್‌ ದೇಶದಲ್ಲಿ ಮಹಾಕಂಪನ ಉಂಟಾಗು ವದು;

Cross references

ದ್ವಿತೀಯೋಪದೇಶಕಾಂಡ 29:20

ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು.

ಕೀರ್ತನೆಗಳು 18:7

ಆಗ ಆತನು ಕೋಪಗೊಂಡಿದ್ದನು. ಭೂಮಿಯು ಕದಲಿ ಕಂಪಿಸಿತು; ಪರ್ವತಗಳ ಅಸ್ತಿವಾರಗಳು ಸಹ ನಡುಗಿ ಕದಲಿದವು;

ಯೆಶಾಯ 42:13

ಕರ್ತನು ಪರಾಕ್ರಮ ಶಾಲಿಯಾಗಿ ಮುಂದೆ ಹೋಗುವನು; ಯುದ್ಧ ವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸು ವನು; ತನ್ನ ಶತ್ರುಗಳಿಗೆ ವಿರೋಧವಾಗಿ ಜಯ ಶಾಲಿಯಾಗುವನು.

ಯೆಹೆಜ್ಕೇಲ 5:13

ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ಉರಿಯನ್ನು ಅವರ ಮೇಲೆ ಶಾಂತಪಡಿಸಿ, ಸಮಾಧಾನ ಹೊಂದು ವೆನು; ಹೀಗೆ ನಾನು ನನ್ನ ಉರಿಯನ್ನು ಅವರ ಮೇಲೆ ತೀರಿಸಿದ ತರುವಾಯ ಕರ್ತನಾದ ನಾನು ನನ್ನ ಉದ್ದೇಶ ಪೂರ್ವಕವಾಗಿ ಮಾಡಿದ್ದೇನೆಂದು ಅವರಿಗೆ ಗೊತ್ತಾಗು ವದು.

ಯೆಹೆಜ್ಕೇಲ 36:5

ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಶ್ಚಯವಾಗಿ ನನ್ನ ರೋಷದ ಬೆಂಕಿ ಯಿಂದ ಅನ್ಯಜನಾಂಗಗಳಲ್ಲಿ ಉಳಿದವರಿಗೂ ಎಲ್ಲಾ ಎದೋಮಿಗೆ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶ ವನ್ನು ಕೊಳ್ಳೆಯಾಗಿ ಹೊರಗೆ ಹಾಕುವ ಹಾಗೆ ತಮಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದಾರೆ.

ಯೆಹೆಜ್ಕೇಲ 39:25

ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈಗ ನಾನು ಯಾಕೋಬಿನ ಸೆರೆಯನ್ನು ತಿರಿಗಿ ತರುತ್ತೇನೆ, ಸಂಪೂರ್ಣ ಇಸ್ರಾಯೇಲಿನ ಮನೆತನದ ವರ ಮೇಲೆ ಕರುಣೆಯಿಡುತ್ತೆನೆ; ನನ್ನ ಪರಿಶುದ್ಧ ಹೆಸರಿಗಾಗಿ ಸ್ವಗೌರವುಳ್ಳವನಾಗಿರುವೆನು.

ಯೋವೇಲ 2:18

ಆಗ ಕರ್ತನು ತನ್ನ ದೇಶಕ್ಕೋಸ್ಕರ ರೋಷ ಗೊಂಡು ತನ್ನ ಜನರನ್ನು ಕನಿಕರಿಸುವನು.

ಯೋವೇಲ 3:16

ಕರ್ತನು ಚೀಯೋನಿನೊಳಗಿಂದ ಘರ್ಜಿಸಿ ಯೆರೂಸಲೇಮಿನೊಳಗಿಂದ ತನ್ನ ಶಬ್ದವನ್ನು ಕೊಡುವನು. ಆಕಾಶಗಳೂ ಭೂಮಿಯೂ ಕದಲು ವವು; ಆದರೆ ಕರ್ತನು ತನ್ನ ಜನರಿಗೆ ನಿರೀಕ್ಷೆಯೂ ಇಸ್ರಾಯೇಲನ ಮಕ್ಕಳಿಗೆ ಬಲವೂ ಆಗಿರುವನು.

ಹಗ್ಗಾಯ 2:6

ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ, ಇನ್ನು ಒಂದು ಸಾರಿ ಕೊಂಚ ಕಾಲವಾದ ಮೇಲೆ ನಾನು ಆಕಾಶಗಳನ್ನೂ ಭೂಮಿಯನ್ನೂ ಸಮುದ್ರ ವನ್ನೂ ಒಣಗಿದ ನೆಲವನ್ನೂ ಕದಲಿಸುತ್ತೇನೆ.

ಹಗ್ಗಾಯ 2:21

ಹೇಗಂದರೆ, ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೆ ನೀನು ಹೇಳತಕ್ಕದ್ದೇನಂದರೆ--ನಾನು ಆಕಾಶಗಳನ್ನೂ ಭೂಮಿಯನ್ನೂ ಕದಲಿಸುವೆನು.

ಜೆಕರ್ಯ 1:14

ನನ್ನ ಸಂಗಡ ಮಾತ ನಾಡಿದ ದೂತನು ನನಗೆ ಹೇಳಿದ್ದೇನಂದರೆ--ಕೂಗಿ ಹೇಳು; ಏನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾನು ಯೆರೂಸಲೇಮಿಗಾಗಿಯೂ ಚೀಯೋನಿ ಗಾಗಿಯೂ ಬಹುರೋಷವುಳ್ಳವನಾಗಿದ್ದೇನೆ.

ಹೆಬ್ರಿಯರಿಗೆ 12:26

ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು; ಈಗಲಾದರೋ ಆತನು--ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆಂದು ವಾಗ್ದಾನ ಮಾಡಿ ಹೇಳಿದ್ದಾನೆ.

ಪ್ರಕಟನೆ 11:13

ಅದೇ ತಾಸಿನಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದ ಂಶವು ಬಿದ್ದು ಹೋಯಿತು; ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಹತರಾದರು ಉಳಿದವರು ಭಯ ಗ್ರಸ್ಥರಾಗಿ ಪರಲೋಕದ ದೇವರನ್ನು ಮಹಿಮೆ ಪಡಿಸಿದರು.

ಪ್ರಕಟನೆ 16:18

ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಉಂಟಾದವು; ಇದಲ್ಲದೆ ಮಹಾ ಭೂಕಂಪವುಂಟಾಯಿತು; ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ಬಲವಾದ ಮತ್ತು ದೊಡ್ಡ ದಾದ ಭೂಕಂಪವಾಗಿರಲಿಲ್ಲ.

ಪ್ರಕಟನೆ 16:20

ಆಗ ದ್ವೀಪಗಳೆಲ್ಲಾ ಓಡಿಹೋದವು; ಬೆಟ್ಟಗಳು ಸಿಕ್ಕದೆ ಹೋದವು.ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಅನೇ ಕಲ್ಲುಗಳು ಸುರಿದವು; ಒಂದೊಂದು ಕಲ್ಲು ಹೆಚ್ಚು ಕಡಿಮೆ ನಾಲ್ಕು ಮಣ ತೂಕವಾಗಿತ್ತು; ಆ ಆನೆಕಲ್ಲುಗಳ ಉಪದ್ರವವು ಬಹಳ ಅತಿದೊಡ್ಡದಾಗಿ ದ್ದದರಿಂದ ಮನುಷ್ಯರು ದೇವರನ್ನು ದೂಷಿಸಿದರು.

Interlinear

Choose Theme