ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯಪುತ್ರನೇ, ನೀನು ಪ್ರತಿಯೊಂದು ರೀತಿಯ ಪಕ್ಷಿಗಳಿಗೂ ಮತ್ತು ಬಯಲಿನ ಪ್ರತಿಯೊಂದು ಪ್ರಾಣಿ ಗಳಿಗೂ ಮಾತನಾಡಿ--ಒಟ್ಟಾಗಿ ಬನ್ನಿರಿ. ನಾನು ನಿಮ ಗಾಗಿ ಅರ್ಪಿಸುವ ನನ್ನ ಯಜ್ಞಕ್ಕೋಸ್ಕರ ಪ್ರತಿಯೊಂದು ಕಡೆಯಿಂದಲೂ ಸೇರಿರಿ; ಇದು ಇಸ್ರಾಯೇಲ್ ಪರ್ವತಗಳ ಮೇಲೆ ನಡೆಯುವ ಮಹಾಯಜ್ಞವಾಗಿದೆ. ನೀವು ಮಾಂಸವನ್ನು ತಿಂದು ರಕ್ತವನ್ನು ಕುಡಿಯ ಬಹುದು.
Cross references
ಯಾಕೋ ಬನು ಆ ಬೆಟ್ಟದಲ್ಲಿ ಬಲಿಯನ್ನು ಅರ್ಪಿಸಿ ರೊಟ್ಟಿ ಯನ್ನು ತಿನ್ನುವದಕ್ಕೆ ತನ್ನ ಸಹೋದರರನ್ನು ಕರೇ ಕಳುಹಿಸಿದನು. ಅವರು ರೊಟ್ಟಿಯನ್ನು ತಿಂದು ಬೆಟ್ಟದಲ್ಲಿಯೇ ರಾತ್ರಿ ಇಳುಕೊಂಡರು.ಹೊತ್ತಾರೆ ಲಾಬಾನನು ಎದ್ದು ತನ್ನ ಕುಮಾರರಿಗೂ ಕುಮಾರ್ತೆ ಯರಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
ನೀವು ಪಟ್ಟಣದೊಳಗೆ ಪ್ರವೇಶಿಸುತ್ತಲೇ ತಿನ್ನುವದಕ್ಕೆ ಗುಡ್ಡದ ಮೇಲೆ ಹೋಗುವದಕ್ಕಿಂತ ಮುಂಚೆ ಅವನನ್ನು ಕಂಡುಕೊಳ್ಳುವಿರಿ. ಅವನು ಬರುವ ವರೆಗೂ ಜನರು ತಿನ್ನುವದಿಲ್ಲ. ಅವನು ಅರ್ಪಣೆಯನ್ನು ಆಶೀರ್ವದಿಸು ತ್ತಾನೆ; ತರುವಾಯ ಕರೆಯಲ್ಪಟ್ಟವರು ತಿನ್ನುತ್ತಾರೆ. ಈಗಲೇ ಹೋಗಿರಿ, ಈ ವೇಳೆಯಲ್ಲಿ ಅವನನ್ನು ಕಂಡು ಕೊಳ್ಳುವಿರಿ ಅಂದರು.
ಅದಕ್ಕೆ ಕರ್ತನು--ನೀನು ಒಂದು ಕಡಸನ್ನು ನಿನ್ನ ಸಂಗಡ ತಕ್ಕೊಂಡುಹೋಗಿ--ನಾನು ಕರ್ತನಿಗೆ ಯಜ್ಞಮಾಡುವದಕ್ಕೆ ಬಂದೆನು ಎಂದು ಹೇಳಿ ಯಜ್ಞ ವನ್ನು ಅರ್ಪಿಸುವದಕ್ಕೆ ಇಷಯನನ್ನು ಕರೆಯಬೇಕು; ಆಗ ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸು ವೆನು. ನಾನು ನಿನಗೆ ಯಾವನ ಹೆಸರನ್ನು ಹೇಳು ತ್ತೇನೋ ಅವನನ್ನು ನೀನು ನನಗೋಸ್ಕರ ಅಭಿಷೇಕಿಸ ಬೇಕು ಅಂದನು.
ಕರ್ತನು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವನು; ನಾನು ನಿನ್ನನ್ನು ಹೊಡೆದುಬಿಟ್ಟು ನಿನ್ನ ತಲೆಯನ್ನು ತೆಗೆದು ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.
ಅವೆಲ್ಲ ಬೆಟ್ಟಗಳ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಬಿಡಲ್ಪಡುವವು; ಪಕ್ಷಿಗಳು ಅವುಗಳ ಮೇಲೆ ಬೇಸಿಗೆಯನ್ನು ಭೂಮಿಯ ಎಲ್ಲಾ ಮೃಗಗಳು ಅವುಗಳ ಮೇಲೆ ಚಳಿಗಾಲವನ್ನು ಕಳೆಯುವವು.ಚದರಿಸಲ್ಪಟ್ಟು ಸೂರೆಯಾಗಿರುವ ಜನರೂ ಅವರು ಹುಟ್ಟಿದಂದಿನಿಂದ ಇಲ್ಲಿಯ ವರೆಗೂ ಭಯಂಕರವಾದ ಜನರೂ ಮಹಾಬಲದಿಂದ ತುಳಿಯಲ್ಪಡುವರು. ನದಿ ಗಳಿಂದ ಹಾಳಾಗಿರುವ ದೇಶದವರು ಸೈನ್ಯಗಳ ಕರ್ತನ ಹೆಸರಿನ ಸ್ಥಳವಾದ ಚೀಯೋನ್ ಪರ್ವತಕ್ಕೆ ಆತನಿ ಗೊಸ್ಕರ ಕಾಣಿಕೆಯನ್ನು ತರುವರು.
ಆದಾಗ್ಯೂ ನಾನು ಅರೀಯೇಲಿಗೆ ಇಕ್ಕಟ್ಟನ್ನು ಉಂಟುಮಾಡುವೆನು. ಅಲ್ಲಿ ಕಷ್ಟವೂ ದುಃಖವೂ ಇರುವದು.
ಕರ್ತನ ಖಡ್ಗವು ರಕ್ತದಿಂದ ತುಂಬಿದೆ; ಅದು ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡದ ಕೊಬ್ಬಿ ನಿಂದಲೂ ಪುಷ್ಟಿಯಾಯಿತು; ಯಾಕಂದರೆ ಕರ್ತನು ಬೊಚ್ರದಲ್ಲಿ ಬಲಿಯನ್ನೂ ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯನ್ನೂ ಉಂಟು ಮಾಡಿದ್ದಾನೆ.
ಅರಣ್ಯದ ಸಕಲ ಮೃಗಗಳೇ, ಹೌದು, ಕಾಡಿನ ಎಲ್ಲಾ ಮೃಗಗಳೇ, ನುಂಗಿಬಿಡುವದಕ್ಕೆ ಬನ್ನಿರಿ.
ಕರ್ತನು ಹೀಗೆ ಹೇಳುತ್ತಾನೆ --ಈ ಪ್ರಕಾರ ನಾನು ಯೆಹೂದದ ಗರ್ವವನ್ನೂ ಯೆರೂಸಲೇಮಿನ ದೊಡ್ಡ ಗರ್ವವನ್ನೂ ಕೆಡಿಸುವೆನು.
ಭೂಮಿಯ ಮೇಲಿರುವ ಮೃಗಗಳಿಗೂ ಆಕಾಶದ ಪಕ್ಷಿಗಳಿಗೂ ನಿನ್ನನ್ನು ಆಹಾರ ವನ್ನಾಗಿ ಕೊಟ್ಟಿದ್ದೇನೆ.
ನೀನೂ ನಿನ್ನ ಎಲ್ಲಾ ದಳಗಳೂ ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳ ಮೇಲೆ ಬೀಳುವಿರಿ; ಎಲ್ಲಾ ತರಹದ ಮಾಂಸ ತಿನ್ನುವ ಪಕ್ಷಿಗಳಿಗೂ ಬಯಲಿನ ಮೃಗಗಳಿಗೂ ತಿನ್ನುವಂತೆ ನಾನು ನಿನ್ನನ್ನು ಕೊಡುವೆನು.
ಕರ್ತ ನಾದ ದೇವರ ಮುಂದೆ ಮೌನವಾಗಿರ್ರಿ: ಕರ್ತನ ದಿನವು ಸವಿಾಪವಾಗಿದೆ; ಕರ್ತನು ಬಲಿಯನ್ನು ಸಿದ್ಧ ಮಾಡಿದ್ದಾನೆ; ತನ್ನ ಅತಿಥಿಗಳನ್ನು ಆಹ್ವಾನಿಸಿದ್ದಾನೆ.
ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ,