Home Bibles ಯೆಹೆಜ್ಕೇಲ 39:24 · ಕನ್ನಡ ಬೈಬಲ್
ಯೆಹೆಜ್ಕೇಲ 39:24 · ಕನ್ನಡ ಬೈಬಲ್

ಅವರ ಅಶುದ್ಧತ್ವದ ಪ್ರಕಾರವೂ ಅಕ್ರಮಗಳ ಪ್ರಕಾರವೂ ನಾನು ಅವರನ್ನು ದಂಡಿಸಿ, ನನ್ನ ಮುಖವನ್ನು ಅವರಿಂದ ಮರೆಮಾಡಿದ್ದೇನೆ.

Cross references

ಲೇವ್ಯಕಾಂಡ 26:24

ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು.

ದ್ವಿತೀಯೋಪದೇಶಕಾಂಡ 31:17

ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು.

2 ಅರಸುಗಳು 17:7

ಯಾಕೆ ಹೀಗಾಯಿತಂದರೆ, ಇಸ್ರಾಯೇಲಿನ ಮಕ್ಕಳು, ಐಗುಪ್ತದ ಅರಸನಾದ ಫರೋಹನ ಕೈಯಿಂದ ತಪ್ಪಿಸಿ ಐಗುಪ್ತದೇಶದೊಳಗಿಂದ ಬರ ಮಾಡಿದ ತಮ್ಮ ದೇವರಾದ ಕರ್ತನಿಗೆ ವಿರೋಧ ವಾಗಿ ಪಾಪಮಾಡಿ ಇತರ ದೇವರುಗಳಿಗೆ ಭಯಪಟ್ಟರು.

ಯೆಶಾಯ 1:20

ನೀವು ತಿರಸ್ಕರಿಸಿ ತಿರುಗಿಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಕರ್ತನ ಬಾಯಿಯೇ ಇದನ್ನು ನುಡಿದಿದೆ.

ಯೆಶಾಯ 3:11

ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.

ಯೆಶಾಯ 59:2

ನಿಮ್ಮ ಅಕ್ರಮಗಳೇ ನಿಮ್ಮನ್ನು ನಿಮ್ಮ ದೇವರಿಂದ ಅಗಲಿಸಿಯವೆ; ನಿಮ್ಮ ಪಾಪಗಳೇ ಆತನು ಕೇಳದ ಹಾಗೆ ಆತನ ಮುಖವನ್ನು ನಿಮಗೆ ಮರೆಮಾಡಿಯವೆ.

ಯೆಶಾಯ 59:17

ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು; ಪ್ರತೀಕಾರದ ವಸ್ತ್ರ ಗಳನ್ನು ಹೊದಿಕೆಯಾಗಿ ಹೊದ್ದುಕೊಂಡು ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.

ಯೆರೆಮಿಯ 2:17

ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡಿ ಅಲ್ಲವೋ?

ಯೆರೆಮಿಯ 2:19

ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.

ಯೆರೆಮಿಯ 4:18

ನಿನ್ನ ಮಾರ್ಗಗಳು ನಿನ್ನ ಕ್ರಿಯೆಗಳು ಇವುಗಳನ್ನು ನಿನಗೆ ಉಂಟುಮಾಡಿದವು, ಇದು ನಿನ್ನ ಕೆಟ್ಟತನವೇ; ಅದು ಕಹಿಯಾದದ್ದಲ್ಲವೋ? ನಿನ್ನ ಹೃದಯಕ್ಕೆ ತಾಕುತ್ತದ್ದಲ್ಲವೋ?

ಯೆರೆಮಿಯ 5:25

ಹೊಲಕ್ಕೆ ಹೊರಡಬೇಡ; ದಾರಿಯಲ್ಲಿ ನಡೆಯಬೇಡ; ಯಾಕಂದರೆ ಶತ್ರುವಿನ ಕತ್ತಿಯೂ ಅಂಜಿಕೆಯೂ ಸುತ್ತಲು ಆವೆ.

ಯೆಹೆಜ್ಕೇಲ 36:19

ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸಿದೆನು. ಅವರು ಆ ದೇಶ ಗಳಲ್ಲಿ ಚದರಿಹೋದರು; ಅವರ ಮಾರ್ಗಗಳ ದುಷ್ಕ್ರಿ ಯೆಗಳ ಪ್ರಕಾರವಾಗಿ ಅವರಿಗೆ ನಾನು ನ್ಯಾಯ ತೀರಿಸಿದೆನು.

ದಾನಿಯೇಲ 9:5

ನಾವು ಪಾಪ ಅಕ್ರಮವನ್ನು ಮಾಡಿದ್ದೇವೆ; ಇದಲ್ಲದೆ ಕೆಟ್ಟವರಾಗಿ ನಡೆದು ತಿರುಗಿಬಿದ್ದಿದ್ದೇವೆ; ಅಂದರೆ ನಿನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಬಿಟ್ಟುಹೋಗಿದ್ದೇವೆ.

Interlinear

Choose Theme