ಆಮೇಲೆ ಅವರನ್ನು ಅನ್ಯಜನಾಂಗಗಳೊಳಗಿಂದ ಸೆರೆಗೈದವನೂ ಇನ್ನು ಮೇಲೆ ಅವರಲ್ಲಿ ಒಬ್ಬನನ್ನಾದರೂ ಉಳಿಸದೆ ದೇಶಕ್ಕೆ ಕೂಡಿಸಿದವನು ನಾನೇ ಅವರ ದೇವರಾದ ಕರ್ತನೆಂದು ಅವರು ತಿಳಿಯುವರು.ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
Cross references
ನಿನ್ನ ದೇವರಾದ ಕರ್ತನು ನಿನ್ನನ್ನು ಸೆರೆಯಿಂದ ಬಿಡಿಸಿ ನಿನ್ನ ಮೇಲೆ ಅಂತಃಕರಣಪಟ್ಟು ತಿರುಗಿಕೊಂಡು ನಿನ್ನನ್ನು ಚದುರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿನ್ನನ್ನು ಕೂಡಿಸುವನು.
ದಯಮಾಡಿ ನಿನ್ನ ಸೇವಕನಾದ ಮೋಶೆಗೆ ಹೇಳಿದ ಮಾತನ್ನು ಜ್ಞಾಪಕಮಾಡು, ಏನಂದರೆ--ನೀವು ಅಕೃತ್ಯ ಮಾಡಿದರೆ ನಾನು ನಿಮ್ಮನ್ನು ಜನಾಂಗಗಳನ್ನು ಚದರಿಸುವಂತೆ ಚದರಿಸುವೆನು.
ಓ ಇಸ್ರಾಯೇಲ್ಯರ ಮಕ್ಕಳೇ, ಕರ್ತನು ನದಿಯ ಕಾಲುವೆ ಮೊದಲುಗೊಂಡು ಐಗುಪ್ತದೇಶದ ನದಿಯ ವರೆಗೆ ಹೊಡೆಯುವನು; ಆಗ ನಿಮ್ಮನ್ನು ಒಬ್ಬೊಬ್ಬರ ನ್ನಾಗಿ ಕೂಡಿಸುವನು.ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
ಆಗ ಅವರು ತಮ್ಮ ಕರ್ತನಾದ ದೇವರೆಂಬ ನಾನೇ ಅವರ ಸಂಗಡ ಇರುವೆನೆಂದೂ ಇಸ್ರಾಯೇಲಿನ ಮನೆತನದವರಾದ ಅವರೇ ನನ್ನ ಜನರಾಗಿರುವರೆಂದೂ ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.ನನ್ನ ಕುರಿಗಳೂ ನನ್ನ ಮೇವಿನ ಮಂದೆಯೂ ಆಗಿರುವ ನೀವು ನರಪ್ರಾಣಿಗಳು. ನಾನು ನಿಮ್ಮ ದೇವರು ಎಂದು ದೇವರಾದ ಕರ್ತನು ಹೇಳುತ್ತಾನೆ.
ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಇಸ್ರಾಯೇಲನ ಮಕ್ಕಳನ್ನು ಅವರು ಹೋಗಿರುವ ಕಡೆಯಿಂದಲೂ ಅವರನ್ನು ಒಂದುಗೂಡಿಸಿ ಅವರನ್ನು ಅವರ ಸ್ವಂತ ದೇಶಕ್ಕೆ ತರುವೆನು.
ಹೀಗೆ ಇಸ್ರಾಯೇಲನ ಮನೆತನದವರು ಕರ್ತನಾದ ನಾನೇ ಅಂದಿನಿಂದಲೂ ಇನ್ನು ಮುಂದೆಯೂ ಅವರ ದೇವ ರಾಗಿರುವೆನೆಂದು ತಿಳಿಯುವರು.
ನಾನು ನಿನ್ನನ್ನು ನಂಬಿಕೆಯಿಂದಲೇ ನಿಶ್ಚಿತಾರ್ಥ ಮಾಡಿಕೊಳ್ಳುವೆನು; ಆಗ ನೀನು ಕರ್ತನನ್ನು ತಿಳಿದುಕೊಳ್ಳುವಿ.
ಇಗೋ, ಮೊರದಲ್ಲಿ ಧಾನ್ಯವನ್ನು ಕೇರುವಂತೆ ನಾನು ಆಜ್ಞಾಪಿಸಿ ಇಸ್ರಾಯೇಲಿನ ಮನೆತನದವ ರನ್ನು ಎಲ್ಲಾ ಜನಾಂಗಗಳಲ್ಲಿ ಕೇರುವೆನು; ಆದಾಗ್ಯೂ ಒಂದು ಕಾಳಾದರೂ ನೆಲಕ್ಕೆ ಬೀಳುವದಿಲ್ಲ.
ದೇವರ ಮಾತು ನಿರರ್ಥಕವಾಯಿತೆಂತಲ್ಲ; ಯಾಕಂದರೆ ಇಸ್ರಾಯೇಲ್ಯರಿಗೆ ಸಂಬಂಧಪಟ್ಟವ ರೆಲ್ಲರೂ ಇಸ್ರಾಯೇಲ್ಯರಲ್ಲ;
ಹಾಗಾದರೆ--ದೇವರು ತನ್ನ ಪ್ರಜೆಯನ್ನು ತಳ್ಳಿಬಿಟ್ಟದ್ದುಂಟೇ ಎಂದು ನಾನು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಯಾಕಂದರೆ ನಾನು ಸಹ ಇಸ್ರಾಯೇಲ್ಯನು. ಅಬ್ರ ಹಾಮನ ಸಂತತಿಯವನು, ಬೆನ್ಯಾವಿಾನನ ಗೋತ್ರ ದವನು ಆಗಿದ್ದೇನಲ್ಲಾ.