Home Bibles ಯೆಹೆಜ್ಕೇಲ 39:6 · ಕನ್ನಡ ಬೈಬಲ್
ಯೆಹೆಜ್ಕೇಲ 39:6 · ಕನ್ನಡ ಬೈಬಲ್

ನಾನು ಮಾಗೋಗ್‌ ಮತ್ತು ಅವ ರೊಂದಿಗೆ ದ್ವೀಪಗಳಲ್ಲಿ ನಿರ್ಲಕ್ಷ್ಯವಾಗಿ ವಾಸಿಸುವವರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅವರು ನಾನೇ ಕರ್ತನೆಂದು ತಿಳಿಯುವರು.

Cross references

ನ್ಯಾಯಾಧಿಪತಿಗಳು 18:7

ಆಗ ಆ ಐದು ಮಂದಿಯು ಹೊರಟು ಲಯಿಷಿಗೆ ಹೋಗಿ ಅದರಲ್ಲಿ ವಾಸಿಸಿರುವ ಆ ಜನರನ್ನು ನೋಡು ವಾಗ ಅವರು ನಿಶ್ಚಿಂತರಾಗಿಯೂ ಚೀದೋನ್ಯರ ಹಾಗೆ ನೆಮ್ಮದಿಯಾಗಿಯೂ ಸುರಕ್ಷಿತವಾಗಿಯೂ ಇದ್ದರು; ಯಾವ ಕಾರ್ಯದಲ್ಲಾದರೂ ನಾಚಿಕೆಪಡಿಸುವದಕ್ಕೆ ಬಿಗಿಹಿಡಿಯುವ ನ್ಯಾಯಾಧಿಪತಿಯು ದೇಶದಲ್ಲಿ ಇರ ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದರು; ಯಾವ ಮನುಷ್ಯನ ಸಂಗಡವೂ ಅವರಿಗೆ ಏನೂ ಕೆಲಸವಿರಲಿಲ್ಲ.

ಕೀರ್ತನೆಗಳು 72:10

ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು.

ಯೆಶಾಯ 66:19

ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.

ಯೆರೆಮಿಯ 25:22

ಆದರೆ ಅರಸನಾದ ಯೆಹೋಯಾಕೀಮನು ಐಗು ಪ್ತಕ್ಕೆ ಜನರನ್ನು, ಅಂದರೆ ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನೂ ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು.

ಯೆಹೆಜ್ಕೇಲ 30:8

ನಾನು ಐಗುಪ್ತದಲ್ಲಿ ಬೆಂಕಿಯಿಟ್ಟಾಗ ಅದಕ್ಕೆ ಸಹಾಯ ಮಾಡುವವರೆಲ್ಲರೂ ನಾಶವಾದ ಮೇಲೆ ಅವರಿಗೆ ನಾನೇ ಕರ್ತನೆಂದು ತಿಳಿಯುವದು.

ಯೆಹೆಜ್ಕೇಲ 30:16

ನಾನು ಐಗುಪ್ತಕ್ಕೆ ಕಿಚ್ಚನ್ನು ಹೆಚ್ಚಿಸಲು ಸೀನ್‌ ಪ್ರಾಣಸಂಕಟಪಡುವದು, ನೋಪುರವು ಭಾಗಭಾಗ ವಾಗಿ ಸೀಳಲ್ಪಡುವದು, ನೋಫಿನ ಮೇಲೆ ಪ್ರತಿ ದಿನವೂ ಇಕ್ಕಟ್ಟು ಇರುವದು.

ಯೆಹೆಜ್ಕೇಲ 38:6

ಗೋಮೆರ್‌ ಮತ್ತು ಅವನ ಎಲ್ಲಾ ದಳಗಳನ್ನು ಉತ್ತರ ದಿಕ್ಕಿನ ತೋಗರ್ಮನ ಮನೆತನದವರನ್ನೂ ಅವನ ಎಲ್ಲಾ ದಳಗಳನ್ನೂ ನಿನ್ನ ಸಂಗಡವಿರುವ ಅನೇಕ ಜನರನ್ನೂ ಹೊರಗೆ ತರುವೆನು.

ಯೆಹೆಜ್ಕೇಲ 38:11

ನೀನು ಪೌಳಿಗೋಡೆಯಿಲ್ಲದ ಹಳ್ಳಿಗಳುಳ್ಳ ದೇಶಕ್ಕೆ ನಾನು ಹೋಗುವೆನು; ಪೌಳಿ ಗೋಡೆಗಳಿಲ್ಲದೆ ಇಲ್ಲವೆ ಬಾಗಲುಗಳು ಅಗುಳಿಗಳು ಇಲ್ಲದೆ ಅದೂ ಅವರು ವಿಶ್ರಾಂತಿಯಿಂದಲೂ ಸುಖ ವಾಗಿ ವಾಸಿಸುತ್ತಿರುವಾಗ ನಾನು ಹೋಗಿ,

ಯೆಹೆಜ್ಕೇಲ 38:13

ಶೇಬಾ, ದೇದಾನ್‌ ಮತ್ತು ತಾರ್ಷೀಷಿನ ವರ್ತಕರು, ಎಲ್ಲಾ ಪ್ರಾಯದ ಸಿಂಹಗಳೊಂದಿಗೆ ಅಲ್ಲಿ ನಿನಗೆ--ನೀನು ಸುಲಿಗೆ ತೆಗೆದುಕೊಳ್ಳಬೇಕೆಂದು ಬಂದಿಯಾ ಕೊಳ್ಳೆಹೊಡೆಯುವದಕ್ಕಾಗಿಯೇ ನಿನ್ನ ತಂಡ ವನ್ನು ಕೂಡಿಸಿದೆಯೋ? ಬಂಗಾರ ಮತ್ತು ಬೆಳ್ಳಿಯನ್ನು ಹೊತ್ತುಕೊಂಡು ದನಗಳನ್ನು ಸಂಪತ್ತನ್ನೂ ತೆಗೆದು ಕೊಂಡು ಮಹಾಸುಲಿಗೆ ತೆಗೆದುಕೊಳ್ಳಬೇಕೆಂದೋ ಅನ್ನುವರು.

ಯೆಹೆಜ್ಕೇಲ 38:19

ನನ್ನ ಈ ರೋಷದಲ್ಲಿ ಮತ್ತು ನನ್ನ ಕೋಪದ ಬೆಂಕಿಯಲ್ಲಿ ನಾನು ಮಾತನಾಡುತ್ತೇನೆ. ನಿಶ್ಚಯವಾಗಿ ಆ ದಿನ ಇಸ್ರಾಯೇಲ್‌ ದೇಶದಲ್ಲಿ ಮಹಾಕಂಪನ ಉಂಟಾಗು ವದು;

ಆಮೋಸ 1:4

ಆದರೆ ನಾನು ಹಜಾಯೇಲನ ಮನೆಯೊಳಗೆ ಬೆಂಕಿಯನ್ನು ಕಳುಹಿಸುತ್ತೇನೆ; ಅದು ಬೆನ್ಹದದನ ಅರಮನೆಗಳನ್ನು ನುಂಗಿಬಿಡುವದು.

ಆಮೋಸ 1:7

ಆದರೆ ನಾನು ಗಾಜದ ಗೋಡೆಯಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅದು ಅವರ ಅರಮನೆಗಳನ್ನು ನುಂಗಿಬಿಡುವದು.

ಆಮೋಸ 1:10

ಆದರೆ ನಾನು ತೂರಿನ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.

ನಹೂಮ 1:6

ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.

ಸೆಫನ್ಯ 2:11

ಕರ್ತನು ಅವರಿಗೆ ಭಯಂಕರನಾಗಿ ರುವನು. ಆತನು ಭೂಮಿಯ ಎಲ್ಲಾ ದೇವರುಗಳನ್ನು ಕ್ಷೀಣಮಾಡುವನು; ಅನ್ಯಜನಾಂಗಗಳ ದ್ವೀಪಗಳವ ರೆಲ್ಲರು ತಮ್ಮ ತಮ್ಮ ಸ್ಥಳಗಳಿಂದ ಆತನನ್ನು ಆರಾ ಧಿಸುವರು.

Interlinear

Choose Theme