Home Bibles ☰ Books ಯೆಹೆಜ್ಕೇಲ 39:9 · ಕನ್ನಡ ಬೈಬಲ್
ಯೆಹೆಜ್ಕೇಲ 39:9 · ಕನ್ನಡ ಬೈಬಲ್

ಆ ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಹೋಗಿ, ಆಯುಧಗಳಾದ ಗುರಾಣಿ ಗಳನ್ನು ಖೇಡ್ಯಗಳನ್ನೂ ಬಿಲ್ಲುಗಳನ್ನೂ ಬಾಣಗಳನ್ನೂ ಕೈದೊಣ್ಣೆಗಳನ್ನೂ ಭಲ್ಲೆಗಳನ್ನೂ ಬೆಂಕಿಹಚ್ಚಿ ಸುಡುವರು; ಅವರು ಅವುಗಳನ್ನು ಏಳು ವರ್ಷಗಳು ಬೆಂಕಿಯಿಂದ ಸುಡುವರು.

Cross references

ಯೆಹೋಶುವ 11:6

ಆಗ ಕರ್ತನು ಯೆಹೋಶುವನಿಗೆಅವರಿಗೆ ಭಯಪಡಬೇಡ; ನಾಳೆ ಇಷ್ಟು ಹೊತ್ತಿಗೆ ಅವರೆಲ್ಲರನ್ನು ಇಸ್ರಾಯೇಲಿನ ಮುಂದೆ ಕೊಲ್ಲಲ್ಪ ಡುವಂತೆ ಒಪ್ಪಿಸಿಕೊಡುವೆನು. ನೀನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯಿದು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು ಅಂದನು.

ಕೀರ್ತನೆಗಳು 46:9

ಯುದ್ಧಗಳನ್ನು ಭೂಮಿಯ ಅಂತ್ಯದ ವರೆಗೆ ನಿಲ್ಲಿಸಿ ಬಿಲ್ಲನ್ನು ಮುರಿದು ಭಲ್ಲೆಯನ್ನು ಕಡಿದು ತುಂಡುಮಾಡಿ ರಥಗಳನ್ನು ಬೆಂಕಿಯಿಂದ ಸುಡುತ್ತಾನೆ.

ಕೀರ್ತನೆಗಳು 111:2

ಕರ್ತನ ಕೆಲಸಗಳು ದೊಡ್ಡವು; ಅವುಗಳಲ್ಲಿ ಸಂತೋಷಪಡುವವರೆಲ್ಲರು ಅವುಗಳನ್ನು ಶೋಧಿಸುತ್ತಾರೆ.

ಯೆಶಾಯ 66:24

ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.

ಯೆಹೆಜ್ಕೇಲ 39:10

ಅದಕ್ಕಾಗಿ ಅವರು ಬಯಲಿನಿಂದ ಮರ ಗಳನ್ನಾಗಲಿ ತೆಗೆದುಕೊಳ್ಳುವುದಿಲ್ಲ, ಅಥವಾ ಅರಣ್ಯ ದಲ್ಲಿ ಯಾವುದನ್ನೂ ಕತ್ತರಿಸಿಕೊಳ್ಳುವದೂ ಇಲ್ಲ; ಅವರು ಆಯುಧಗಳನ್ನು ಬೆಂಕಿಯಿಂದಲೇ ಸುಡುವರು; ಅವರು ಸೂರೆಯಾದವುಗಳನ್ನು ಸೂರೆಮಾಡುವರು ಮತ್ತು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆ ಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.

ಜೆಕರ್ಯ 9:10

ಇದಲ್ಲದೆ ಎಫ್ರಾಯಾಮಿನೊಳಗಿಂದ ರಥ ಗಳನ್ನೂ ಯೆರೂಸಲೇಮಿನೊಳಗಿಂದ ಕುದುರೆಗಳನ್ನೂ ತೆಗೆದುಬಿಡುವೆನು; ಯುದ್ಧದ ಬಿಲ್ಲು ಸಹ ತೆಗೆದು ಹಾಕಲ್ಪಡುವದು; ಆತನು ಅನ್ಯ ಜನಾಂಗಗಳಿಗೆ ಸಮಾ ಧಾನವನ್ನು ಹೇಳುವನು; ಆತನ ದೊರೆತನವು ಸಮುದ್ರ ದಿಂದ ಸಮುದ್ರಕ್ಕೂ ನದಿಯಿಂದ ಭೂಮಿಯ ಅಂತ್ಯಗಳ ವರೆಗೂ ಇರುವದು.

ಮಲಾಕಿ 1:5

ನಿಮ್ಮ ಕಣ್ಣುಗಳು ನೋಡುವವು; ಇಸ್ರಾಯೇಲಿನ ಮೇರೆ ಯಿಂದ ಕರ್ತನು ಘನಹೊಂದುವನು ಎಂದು ನೀವು ಹೇಳುವಿರಿ.

Interlinear

Choose Theme