Home Bibles ಯೆಹೆಜ್ಕೇಲ 40:23 · ಕನ್ನಡ ಬೈಬಲ್
ಯೆಹೆಜ್ಕೇಲ 40:23 · ಕನ್ನಡ ಬೈಬಲ್

ಒಳಗಿನ ಅಂಗಳದ ಬಾಗಲು ಉತ್ತರ ಮತ್ತು ಪೂರ್ವಕ್ಕಿರುವ ಬಾಗಲಿಗೆ ಎದುರಾಗಿತ್ತು; ಅವನು ಬಾಗಲಿನಿಂದ ಬಾಗಲಿಗೆ ನೂರು ಮೊಳವೆಂದು ಅಳೆ ದನು.

Cross references

ನಿರ್ಗಮಕಾಂಡ 27:9

ಗುಡಾರದ ಅಂಗಳವನ್ನು ಮಾಡಬೇಕು. ದಕ್ಷಿಣ ದಿಕ್ಕಿನಲ್ಲಿರುವ ದಕ್ಷಿಣ ಭಾಗದಲ್ಲಿ ಅಂಗಳಕ್ಕೋಸ್ಕರ ನಯವಾದ ಹೊಸೆದ ನಾರಿನ ಪರದೆಗಳನ್ನು ಮಾಡ ಬೇಕು. ಒಂದು ಕಡೆಯಲ್ಲಿ ಅದರ ಉದ್ದವು ನೂರು ಮೊಳವಿರಬೇಕು.

ನಿರ್ಗಮಕಾಂಡ 38:9

ಅವನು ಅಂಗಳವನ್ನು ಮಾಡಿದನು: ಅಂಗಳದ ದಕ್ಷಿಣ ದಿಕ್ಕಿನ ಭಾಗದಲ್ಲಿದ್ದ ತೆರೆಗಳು ನಯವಾಗಿ ಹೊಸೆದ ನೂಲಿನ ಬಟ್ಟೆಯಿಂದ ಮಾಡಲ್ಪಟ್ಟಿದ್ದವು. ಅವು ನೂರು ಮೊಳ ಉದ್ದವಾಗಿದ್ದವು.

ಯೆಹೆಜ್ಕೇಲ 40:19

ಆಗ ಅವನು ಕೆಳಗಿನ ಬಾಗಲಿನ ಮುಂದುಗಡೆಯಿಂದ ಒಳಗಿನ ಅಂಗಳದ ಹೊರಗಡೆಯ ವರೆಗೂ ಪೂರ್ವಕ್ಕೂ ಉತ್ತರಕ್ಕೂ ಇರುವ ಅಗಲವನ್ನು ನೂರು ಮೊಳವೆಂದು ಅಳೆದನು.

ಯೆಹೆಜ್ಕೇಲ 40:27

ಒಳಗಿನ ಅಂಗಳದಲ್ಲಿ ದಕ್ಷಿಣದ ಕಡೆಗೆ ಬಾಗಲಿತ್ತು; ಅವನು ಒಂದು ಬಾಗಲಿನಿಂದ ಮತ್ತೊಂದು ಬಾಗಲಿಗೆ ದಕ್ಷಿಣವಾಗಿ ನೂರು ಮೊಳ ಅಳೆದನು.

ಯೆಹೆಜ್ಕೇಲ 40:44

ಒಳಗಿನ ಬಾಗಲಿನ ಹೊರಗೆ ಒಳಗಿನ ಅಂಗಳದಲ್ಲಿ ಹಾಡುವವರ ಕೊಠಡಿಗಳು ಇದ್ದವು; ಒಂದು ಉತ್ತರದ ಬಾಗಲಿನ ಕಡೆಗೆ ದಕ್ಷಿಣಕ್ಕೆ ಅಭಿಮುಖವಾಗಿತ್ತು; ಮತ್ತೊಂದು ಪೂರ್ವದ ಬಾಗಲಿನ ಕಡೆಗೆ ಉತ್ತರಕ್ಕೆ ಅಭಿಮುಖ ವಾಗಿತ್ತು.

Interlinear

Choose Theme