Home Bibles ಯೆಹೆಜ್ಕೇಲ 40:44 · ಕನ್ನಡ ಬೈಬಲ್
ಯೆಹೆಜ್ಕೇಲ 40:44 · ಕನ್ನಡ ಬೈಬಲ್

ಒಳಗಿನ ಬಾಗಲಿನ ಹೊರಗೆ ಒಳಗಿನ ಅಂಗಳದಲ್ಲಿ ಹಾಡುವವರ ಕೊಠಡಿಗಳು ಇದ್ದವು; ಒಂದು ಉತ್ತರದ ಬಾಗಲಿನ ಕಡೆಗೆ ದಕ್ಷಿಣಕ್ಕೆ ಅಭಿಮುಖವಾಗಿತ್ತು; ಮತ್ತೊಂದು ಪೂರ್ವದ ಬಾಗಲಿನ ಕಡೆಗೆ ಉತ್ತರಕ್ಕೆ ಅಭಿಮುಖ ವಾಗಿತ್ತು.

Cross references

1 ದಿನವೃತ್ತಾಂತ 6:31

ಮಂಜೂಷವನ್ನು ನೆಲೆಯಾಗಿ ಇರಿಸಿದ ತರು ವಾಯ ದಾವೀದನು ಕರ್ತನ ಮನೆಯಲ್ಲಿ ಹಾಡುವ ಸೇವೆಯ ಮೇಲೆ ಇರಿಸಿದವರು ಇವರೇ.

1 ದಿನವೃತ್ತಾಂತ 16:41

ಅವರ ಸಂಗಡ ಆತನ ಕೃಪೆ ಯುಗಯುಗಕ್ಕಿರುವ ಕಾರಣ ಕರ್ತನನ್ನು ಕೊಂಡಾಡುವದಕ್ಕೆ ಹೇಮಾನನೂ ಯೆದುತೂನನೂ ಹೆಸರಿನಿಂದ ಲೆಕ್ಕಿಸಲ್ಪಟ್ಟು ಆಯಲ್ಪಟ್ಟ ಮಿಕ್ಕಾದವರೂ.

1 ದಿನವೃತ್ತಾಂತ 25:1

ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್‌ ಹೇಮಾನ್‌ ಯೆದುತೂನ್‌ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು.

ಯೆಹೆಜ್ಕೇಲ 40:7

ಪ್ರತಿಯೊಂದು ಚಿಕ್ಕ ಕೋಣೆಯು ಒಂದು ಕೋಲು ಉದ್ದವಾಗಿ ಒಂದು ಕೋಲು ಅಗಲವಾಗಿ ಇತ್ತು; ಕೊಠಡಿಗಳ ನಡುವೆ ಐದು ಮೊಳ ಒಳಬಾಗಲಿನ ಪಡಸಾಲೆಯ ಬಳಿಯಲ್ಲಿ ರುವ ಬಾಗಲಿನ ಹೊಸ್ತಿಲು ಒಂದು ಕೋಲಿನ ಅಳತೆ ಯಷ್ಟಿತ್ತು.

ಯೆಹೆಜ್ಕೇಲ 40:10

ಮೂಡ ಣದ ಕಡೆಗಿರುವ ಬಾಗಲಿನ ಕೊಠಡಿಗಳು ಈ ಕಡೆ ಯಲ್ಲಿ ಮೂರು ಆ ಕಡೆಯಲ್ಲಿ ಮೂರು ಇದ್ದವು; ಆ ಮೂರಕ್ಕೂ ಒಂದೇ ಅಳತೆ ಇತ್ತು. ಈ ಕಡೆಯೂ ಆ ಕಡೆಯೂ ಕಂಬಗಳಿಗೂ ಸಹ ಒಂದೇ ಅಳತೆ ಇತ್ತು.

ಯೆಹೆಜ್ಕೇಲ 40:17

ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ತಂದನು; ಇಗೋ, ಕೊಠಡಿಗಳೂ ಕಲ್ಲು ಹಾಸಿದ ನೆಲವೂ ಅಂಗಳದ ಸುತ್ತಲೂ ಮಾಡಲ್ಪಟ್ಟಿದ್ದವು; ಕಲ್ಲು ಹಾಸಿದ ನೆಲದ ಬದಿಯಲ್ಲಿ ಮೂವತ್ತು ಕೊಠಡಿ ಗಳಿದ್ದವು.

ಯೆಹೆಜ್ಕೇಲ 40:23

ಒಳಗಿನ ಅಂಗಳದ ಬಾಗಲು ಉತ್ತರ ಮತ್ತು ಪೂರ್ವಕ್ಕಿರುವ ಬಾಗಲಿಗೆ ಎದುರಾಗಿತ್ತು; ಅವನು ಬಾಗಲಿನಿಂದ ಬಾಗಲಿಗೆ ನೂರು ಮೊಳವೆಂದು ಅಳೆ ದನು.

ಯೆಹೆಜ್ಕೇಲ 40:27

ಒಳಗಿನ ಅಂಗಳದಲ್ಲಿ ದಕ್ಷಿಣದ ಕಡೆಗೆ ಬಾಗಲಿತ್ತು; ಅವನು ಒಂದು ಬಾಗಲಿನಿಂದ ಮತ್ತೊಂದು ಬಾಗಲಿಗೆ ದಕ್ಷಿಣವಾಗಿ ನೂರು ಮೊಳ ಅಳೆದನು.

ಯೆಹೆಜ್ಕೇಲ 40:29

ಅಲ್ಲಿನ ಆ ಚಿಕ್ಕ ಕೊಠಡಿಗಳನ್ನೂ ಅದರ ಕಂಬ ಗಳನ್ನೂ ಕಮಾನುಗಳನ್ನೂ ಈ ಅಳತೆಯ ಪ್ರಕಾರ ಅಳೆದನು. ಅದರಲ್ಲಿಯೂ ಅದರ ಸುತ್ತಲಿರುವ ಕಮಾ ನುಗಳಲ್ಲಿಯೂ ಕಿಟಕಿಗಳಿದ್ದವು ಅದರ ಉದ್ದ ಐವತ್ತು ಮೊಳ, ಅಗಲ ಇಪ್ಪತ್ತೈದು ಮೊಳ;

ಯೆಹೆಜ್ಕೇಲ 40:38

ಕೊಠಡಿಗಳೂ ಅವುಗಳ ಪ್ರವೇಶಗಳೂ ಬಾಗಲುಗಳ ಕಂಬಗಳ ಬಳಿಯಲ್ಲಿ, ದಹನ ಬಲಿಯನ್ನು ತೊಳೆ ಯುವಲ್ಲಿ ಇದ್ದವು;

ಎಫೆಸದವರಿಗೆ 5:19

ಕೀರ್ತನೆಗಳಿಂದಲೂ ಸಂಗೀತ ಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮಗೆ ನೀವೇ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯದಲ್ಲಿ ಕರ್ತನಿಗೆ ಗಾನಮಾಡುತ್ತಾ ಇಂಪಾಗಿ ಹಾಡುತ್ತಾ ಇರ್ರಿ.

ಕೊಲೊಸ್ಸೆಯವರಿಗೆ 3:16

ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.

Interlinear

Choose Theme