Home Bibles ☰ Books ಯೆಹೆಜ್ಕೇಲ 40:5 · ಕನ್ನಡ ಬೈಬಲ್
ಯೆಹೆಜ್ಕೇಲ 40:5 · ಕನ್ನಡ ಬೈಬಲ್

ನೋಡು, ಮನೆಯ ಹೊರಗೆ ಸುತ್ತಮುತ್ತಲೂ ಇರುವ ಗೋಡೆ; ಆ ಮನುಷ್ಯನ ಕೈಯಲ್ಲಿ ಒಂದು ಹಿಡಿ ಉದ್ಧವಾದಂಥ ಆರುಮೊಳ ಉದ್ದ ಅಳತೆ ಕೋಲು ಇತ್ತು; ಹಾಗೆಯೇ ಅವನು ಆ ಕಟ್ಟಡದ ಅಗಲವನ್ನು ಅಳತೆ ಮಾಡಿದಾಗ ಅದರ ಎತ್ತರ ಅಗಲ ಒಂದೇ ಕೋಲಾಗಿತ್ತು.

Cross references

ದ್ವಿತೀಯೋಪದೇಶಕಾಂಡ 3:11

ಮಹಾ ಶರೀರಗಳಲ್ಲಿ ಉಳಿದವರೊಳಗೆ ಬಾಷಾನಿನ ಅರಸ ನಾದ ಓಗನು ಮಾತ್ರ ಉಳಿದನು; ಅಗೋ, ಅವನ ಮಂಚವು ಕಬ್ಬಿಣದ ಮಂಚ; ಅದು ಅಮ್ಮೋನನ ಮಕ್ಕಳ ರಬ್ಬಾನಲ್ಲಿ ಉಂಟಲ್ಲವೋ? ಅದರ ಉದ್ದವು ಪುರುಷನ ಕೈಯಳತೆಯ ಪ್ರಕಾರ ಒಂಭತ್ತು ಮೊಳ, ಅಗಲವು ನಾಲ್ಕು ಮೊಳ ಇತ್ತು.

ಕೀರ್ತನೆಗಳು 125:2

ಯೆರೂಸಲೇಮಿನ ಸುತ್ತಲೂ ಬೆಟ್ಟಗಳಿರುವಂತೆ ಕರ್ತನು ಈಗಿನಿಂದ ಯುಗಯುಗಕ್ಕೂ ತನ್ನ ಜನರ ಸುತ್ತಲೂ ಇದ್ದಾನೆ.

ಯೆಶಾಯ 26:1

ಆ ದಿವಸದಲ್ಲಿ ಯೆಹೂದ ದೇಶದೊಳಗೆ ಈ ಹಾಡನ್ನು ಹಾಡುವರು; ನಮಗೆ ಬಲ ವಾದ ಪಟ್ಟಣವಿದೆ. ರಕ್ಷಣೆಯನ್ನು ಕೋಟೆಯನ್ನಾ ಗಿಯೂ ಹೊರಪೌಳಿಯನ್ನಾಗಿಯೂ ದೇವರು ಮಾಡು ವನು.

ಯೆಶಾಯ 60:18

ಬಲಾತ್ಕಾರವೂ ನಿನ್ನ ದೇಶದೊಳಗೆ ಹಾಳಾದದ್ದೂ ನಾಶವೂ ನಿನ್ನ ಮೇರೆ ಗಳಲ್ಲಿ ಕೇಳಲ್ಪಡುವದಿಲ್ಲ; ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿ ಡುವಿ.

ಯೆಹೆಜ್ಕೇಲ 42:15

ಹೀಗೆ ಅವನು ಒಳಗಿನ ಆಲಯದ ಅಳತೆ ಮಾಡಿ ಮುಗಿಸಿದ ಮೇಲೆ ನನ್ನನ್ನು ಪೂರ್ವದ ಕಡೆಗೆ ಅಭಿಮುಖವಾಗಿರುವ ಬಾಗಲಿನಿಂದ ಹೊರಗೆ ತಂದು ಅದನ್ನು ಸುತ್ತಲಾಗಿ ಅಳೆದನು.

ಯೆಹೆಜ್ಕೇಲ 42:20

ಅವನು ನಾಲ್ಕೂ ಕಡೆಗಳಿಂದ ಅಳೆದನು; ಪರಿಶುದ್ಧ ಸ್ಥಳವನ್ನೂ ಅಪವಿತ್ರ ವಾದ ಸ್ಥಳವನ್ನೂ ಪ್ರತ್ಯೇಕ ಪಡಿಸುವ ಹಾಗೆ ಅದಕ್ಕೆ ಸುತ್ತಲಾಗಿ ಐನೂರು ಕೋಲು ಉದ್ದವಾದಂತ ಮತ್ತು ಐನೂರು ಕೋಲು ಅಗಲವಾದಂತ ಗೋಡೆ ಇತ್ತು.

ಯೆಹೆಜ್ಕೇಲ 43:13

ಈ ಯಜ್ಞವೇದಿಯ ಅಳತೆಗಳು ಮೊಳದ ಪ್ರಕಾರವೇ ಇವೆ; ಮೊಳ ಅಂದರೆ ಮೊಳದ ಮೇಲೆ ಒಂದು ಹಿಡಿ ಉದ್ದ; ಕೆಳಭಾಗದ ಎತ್ತರವು ಒಂದು ಮೊಳ, ಮೇಲಿನ ಕೈ ಅಗಲದಷ್ಟು ಅಂಚಿನ ಉದ್ದವು ಸುತ್ತಲೂ ಒಂದು ಮೊಳ, ಅಂಚಿನ ತುದಿಯಲ್ಲಿ; ಸುತ್ತಲೂ ದಿಂಡಿನ ಅಗಲವು ಒಂದು ಮೊಳ; ಇದೇ ಯಜ್ಞವೇದಿಯ ಉನ್ನತ ಸ್ಥಳ.

ಜೆಕರ್ಯ 2:5

ಯಾಕಂ ದರೆ ನಾನು ಅದರ ಸುತ್ತಲೂ ಬೆಂಕಿಯ ಗೋಡೆಯಾ ಗಿಯೂ ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನೆಂದು ಕರ್ತನು ಅನ್ನುತ್ತಾನೆ.

ಪ್ರಕಟನೆ 21:12

ಆ ಪಟ್ಟಣಕ್ಕೆ ಬಹಳ ಎತ್ತರವಾದ ಗೋಡೆ ಇತ್ತು; ಅದಕ್ಕೆ ಹನ್ನೆರಡು ಹೆಬ್ಬಾಗಿಲು ಗಳಿದ್ದವು; ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೂತರಿದ್ದರು; ಅವುಗಳ ಮೇಲೆ ಇಸ್ರಾ ಯೇಲ್ಯರ ಹನ್ನೆರಡು ಗೋತ್ರಗಳ ಹೆಸರುಗಳು ಬರೆ ದಿದ್ದವು.

Interlinear

Choose Theme