Home Bibles ಯೆಹೆಜ್ಕೇಲ 42:3 · ಕನ್ನಡ ಬೈಬಲ್
ಯೆಹೆಜ್ಕೇಲ 42:3 · ಕನ್ನಡ ಬೈಬಲ್

ಒಳಗಿನ ಅಂಗಳಕ್ಕೆ ಇದ್ದ ಇಪ್ಪತ್ತು ಮೊಳಕ್ಕೆ ಎದುರಾಗಿಯೂ ಹೊರಗಿನ ಅಂಗಳಕ್ಕೆ ಇದ್ದ ಕಲ್ಲು ಹಾಸಿದ ನೆಲಕ್ಕೆ ಎದುರಾಗಿಯೂ ಮೂರು ಅಂತಸ್ತುಗಳಲ್ಲಿಯೂ ಪಡ ಸಾಲೆಗಳ ಮೇಲೆ ಪಡಸಾಲೆಗಳಿದ್ದವು.

Cross references

2 ದಿನವೃತ್ತಾಂತ 7:3

ಇಸ್ರಾಯೇ ಲಿನ ಮಕ್ಕಳೆಲ್ಲರೂ ಬೆಂಕಿಯು ಇಳಿದದ್ದನ್ನು ಮನೆಯ ಮೇಲೆ ಇರುವ ಕರ್ತನ ಮಹಿಮೆಯನ್ನು ಕಂಡಾಗ ನೆಲಕ್ಕೆ ತಮ್ಮ ಮುಖಗಳನ್ನು ಬಾಗಿಸಿ ಆರಾಧಿಸಿ ಕರ್ತ ನನ್ನು ಕೊಂಡಾಡಿ--ಆತನು ಒಳ್ಳೆಯವನು, ಆತನ ಕೃಪೆಯು ಯುಗಯುಗಕ್ಕೂ ಇರುವದು ಎಂದು ಹೇಳಿ ದರು.

ಪರಮಗೀತ 1:17

ನಮ್ಮ ಮನೆಯ ತೊಲೆಗಳು ದೇವದಾರು ಮರಗಳು, ನಮ್ಮ ಜಂತೆಗಳು ತುರಾಯಿ ಗಿಡಗಳು.

ಪರಮಗೀತ 7:5

ನಿನ್ನ ತಲೆಯು ಕರ್ಮೆಲಿನ ಹಾಗೆಯೂ ನಿನ್ನ ತಲೆಯ ಕೂದಲು ಧೂಮ್ರದ ಹಾಗೆಯೂ ಇವೆ. ಅರಸನು ವೇದಿಕೆಗಳಲ್ಲಿ ಹಿಡಿಯಲ್ಪಟ್ಟಿದ್ದಾನೆ.

ಯೆಹೆಜ್ಕೇಲ 40:17

ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ತಂದನು; ಇಗೋ, ಕೊಠಡಿಗಳೂ ಕಲ್ಲು ಹಾಸಿದ ನೆಲವೂ ಅಂಗಳದ ಸುತ್ತಲೂ ಮಾಡಲ್ಪಟ್ಟಿದ್ದವು; ಕಲ್ಲು ಹಾಸಿದ ನೆಲದ ಬದಿಯಲ್ಲಿ ಮೂವತ್ತು ಕೊಠಡಿ ಗಳಿದ್ದವು.

ಯೆಹೆಜ್ಕೇಲ 41:10

ಕೊಠಡಿಗಳ ನಡುವೆ ಆಲಯದ ಸುತ್ತಲೂ ಪ್ರತಿ ಯೊಂದು ಕಡೆಗೂ ಇಪ್ಪತ್ತು ಮೊಳ ಅಗಲವಿತ್ತು;

ಯೆಹೆಜ್ಕೇಲ 41:15

ಪ್ರತ್ಯೇಕ ಸ್ಥಳಕ್ಕೆ ಎದುರಾಗಿಯೂ ಹಿಂದೆಯೂ ಇದ್ದಂತ ಕಟ್ಟಡ ವನ್ನು ಅಂದರೆ ಕೈಪಡಸಾಲೆಗಳನ್ನೂ ಆ ಕಡೆ ಈ ಕಡೆ ನೂರು ಮೊಳವೆಂದೂ ಅಳೆದನು; ಇದರೊಳಗೆ ಒಳಗಿನ ದೇವಾಲಯವೂ ಅಂಗಳದ ದ್ವಾರಂಗಣ ಶಾಲೆಗಳೂ ಇದ್ದವು;

ಯೆಹೆಜ್ಕೇಲ 42:5

ಈಗ ಮೇಲಿನ ಕೊಠಡಿಗಳೇ ಚಿಕ್ಕವುಗಳಾಗಿದ್ದವು. ಕಟ್ಟಡದ ಕೆಳಗಿನ ಭಾಗಕ್ಕಿಂತಲೂ ಮಧ್ಯಭಾಗಕ್ಕಿಂತಲೂ ಪಡ ಸಾಲೆಗಳು ಎತ್ತರದಲ್ಲಿತ್ತು.

Interlinear

Choose Theme