ಆಮೇಲೆ ಕರ್ತನು ನನಗೆ ಹೇಳಿದ್ದೇನಂದರೆ--ಈ ಬಾಗಿಲು ಮುಚ್ಚಲ್ಪಟ್ಟಿರಬೇಕು, ಇದು ತೆರೆಯಬಾರದು; ಯಾವ ಮನುಷ್ಯನೂ ಇದರಿಂದ ಪ್ರವೇಶಿಸಬಾರದು; ಇಸ್ರಾಯೇಲ್ಯರ ದೇವರಾದ ಕರ್ತನು ಇದರಿಂದ ಪ್ರವೇಶಿಸಿದ್ದಾನೆ. ಆದದರಿಂದ ಇದು ಮುಚ್ಚಲ್ಪಡಬೇಕು.
Cross references
ಅವರು ಇಸ್ರಾಯೇಲಿನ ದೇವರನ್ನು ನೋಡಿದರು. ಆತನ ಪಾದಗಳ ಕೆಳಗೆ ನೀಲವರ್ಣದ ಕಲ್ಲಿನ ಕೆಲಸಕ್ಕೆ ಸಮಾನವಾದದ್ದೂ ಆಕಾಶದ ಹಾಗೆ ನಿರ್ಮಲವಾದದ್ದೂ ಇತ್ತು.
ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಕರ್ತನು ಉನ್ನ ತೋನ್ನತವಾಗಿ ಸಿಂಹಾಸನಾರೂಢನಾಗಿರುವದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು.
ಆ ಮೇಲೆ ಅವನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾದ ಬಾಗಲಿಗೆ ಕರೆದು ಕೊಂಡು ಹೋದನು;
ಇಗೋ, ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವ ಮಾರ್ಗವಾಗಿ ಬಂದಿತು, ಆತನ ಧ್ವನಿಯು ಬಹು ನೀರುಗಳ ಶಬ್ಧದಂತೆ ಇತ್ತು; ಭೂಮಿಯು ಆತನ ಮಹಿಮೆಯಿಂದ ಪ್ರಕಾ ಶಿಸುತ್ತಿತ್ತು.
ಆಗ ಕರ್ತನ ಮಹಿಮೆಯು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಲಿನ ಮಾರ್ಗವಾಗಿ ಆಲಯದೊಳಗೆ ಪ್ರವೇಶಿ ಸಿತು.
ದೇವರಾದಕರ್ತನು ಹೀಗೆ ಹೇಳುತ್ತಾನೆ--ಒಳಗಿನ ಅಂಗಳದ ಪೂರ್ವದಿಕ್ಕಿಗೆ ಎದುರಾಗಿರುವ ಬಾಗಲು ಕೆಲಸ ನಡೆಯುವ ಆರು ದಿವಸಗಳಲ್ಲಿ ಮುಚ್ಚಲ್ಪಡಬೇಕು; ಆದರೆ ಸಬ್ಬತ್ ದಿವಸದಲ್ಲಿ ಅದು ತೆರೆಯಲ್ಪಡಬೇಕು, ಅಮಾವಾಸ್ಯೆಯ ದಿನದಲ್ಲೂ ಅದು ತೆರೆಯಲ್ಪಡಬೇಕು.