Home Bibles ಯೆಹೆಜ್ಕೇಲ 44:27 · ಕನ್ನಡ ಬೈಬಲ್
ಯೆಹೆಜ್ಕೇಲ 44:27 · ಕನ್ನಡ ಬೈಬಲ್

ಅವನು ಪರಿಶುದ್ಧ ಸ್ಥಳದಲ್ಲಿ ಸೇವೆ ಮಾಡುವದ ಕ್ಕೋಸ್ಕರ ಒಳಗಿನ ಅಂಗಳದ ಪರಿಶುದ್ಧ ಸ್ಥಳಕ್ಕೆ ಬರುವ ದಿನದಲ್ಲಿ ತನ್ನ ಪಾಪ ಬಲಿಯನ್ನು ಅರ್ಪಿಸಬೇಕೆಂದು ದೇವರಾದ ಕರ್ತನು ಹೇಳುತ್ತಾನೆ.

Cross references

ಲೇವ್ಯಕಾಂಡ 4:3

ಜನರು ಪಾಪಮಾಡುವ ಹಾಗೆ ಅಭಿಷಿಕ್ತನಾದ ಯಾಜಕನು ಪಾಪಮಾಡಿದರೆ ಅವನು ತನ್ನ ಪಾಪಕ್ಕಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನು ಪಾಪದ ಬಲಿಗಾಗಿ ಕರ್ತನಿಗೆ ತರಬೇಕು.

ಲೇವ್ಯಕಾಂಡ 8:14

ಪಾಪದ ಬಲಿಗಾಗಿ ಅವನು ಹೋರಿಯನ್ನು ತಂದನು. ಆರೋನನೂ ಅವನ ಕುಮಾರರೂ ಪಾಪದ ಬಲಿಗಾಗಿ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.

ಅಂಕೆಗಳ ಪುಸ್ತಕ 6:9

ಅವನ ಬಳಿಯಲ್ಲಿ ಒಬ್ಬನು ಅಕಸ್ಮಾತ್ತಾಗಿ ಸತ್ತರೆ ಅವನ ನಾಜೀರತನದ ತಲೆಯು ಅಶುದ್ಧವಾದದ್ದರಿಂದ ಅವನು ಶುದ್ಧನಾಗುವ ದಿವಸದಲ್ಲಿ ತನ್ನ ತಲೆಯನ್ನು ಬೋಳಿಸಿ ಕೊಳ್ಳಬೇಕು, ಏಳನೇ ದಿವಸದಲ್ಲಿ ಬೋಳಿಸಿಕೊಳ್ಳ ಬೇಕು.

ಯೆಹೆಜ್ಕೇಲ 44:17

ಅವರು ಒಳ ಗಿನ ಅಂಗಳಗಳ ಬಾಗಿಲನ್ನು ಪ್ರವೇಶಿಸುವಾಗ ನಾರಿನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು; ಒಳಗಿನ ಅಂಗಳದ ಬಾಗಿಲುಗಳಲ್ಲಿಯೂ ಒಳಗಡೆಯೂ ಸೇವಿ ಸುತ್ತಿರುವಾಗ ಅವರ ಮೇಲೆ ಉಣ್ಣೆಯ ಉಡುಪೂ ಇರಕೂಡದು.

ಹೆಬ್ರಿಯರಿಗೆ 7:26

ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.

Interlinear

Choose Theme