ಇದು ಪ್ರಭುವಿಗಾಗಿದೆ; ಪ್ರಭುವು ಅದರೊಳಗೆ ಕುಳಿತುಕೊಂಡು, ಕರ್ತನ ಮುಂದೆ ರೊಟ್ಟಿಯನ್ನು ತಿನ್ನಬೇಕು; ಆತನು ಆ ಬಾಗಿಲಿನ ಪಡಸಾಲೆಯ ಮೂಲಕ ಪ್ರವೇಶಿಸಿ ಅದೇ ಮಾರ್ಗ ವಾಗಿ ಹೊರಗೆ ಹೋಗಬೇಕು.
Cross references
ಯಾಕೋ ಬನು ಆ ಬೆಟ್ಟದಲ್ಲಿ ಬಲಿಯನ್ನು ಅರ್ಪಿಸಿ ರೊಟ್ಟಿ ಯನ್ನು ತಿನ್ನುವದಕ್ಕೆ ತನ್ನ ಸಹೋದರರನ್ನು ಕರೇ ಕಳುಹಿಸಿದನು. ಅವರು ರೊಟ್ಟಿಯನ್ನು ತಿಂದು ಬೆಟ್ಟದಲ್ಲಿಯೇ ರಾತ್ರಿ ಇಳುಕೊಂಡರು.ಹೊತ್ತಾರೆ ಲಾಬಾನನು ಎದ್ದು ತನ್ನ ಕುಮಾರರಿಗೂ ಕುಮಾರ್ತೆ ಯರಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
ಆಗ ಮೋಶೆಯೂ ಅರೋನನೂ ನಾದಾಬನೂ ಅಬೀಹುವೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಜನರೂ ಏರಿಹೋದರು.
ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು.
ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳ ಚೊಚ್ಚಲಾದವುಗಳನ್ನೂ ನೀನು ಮಾಡುವ ಎಲ್ಲಾ ಪ್ರಮಾಣಗಳನ್ನೂ ಉಚಿತ ವಾದ ಕಾಣಿಕೆಗಳನ್ನೂ ಕೈ ಎತ್ತುವ ಅರ್ಪಣೆಯನ್ನೂ ನಿನ್ನ ಬಾಗಲುಗಳಲ್ಲಿ ತಿನ್ನಬೇಡ.
ಇದಲ್ಲದೆ ಮನೆಯಲ್ಲಿ ಅವರು ಕಟ್ಟಿಸಿದ ಸಬ್ಬತ್ತಿಗೋಸ್ಕರ ಇದ್ದ ಒಪ್ಪಾರನ್ನೂ ಹೊರಗಿದ್ದ ಅರಸನ ಪ್ರವೇಶವನ್ನೂ ಅಶ್ಶೂರಿನ ಅರಸನ ನಿಮಿತ್ತವಾಗಿ ಕರ್ತನ ಮನೆಯಿಂದ ತಿರುಗಿಸಿದನು.
ಇಗೋ, ಪ್ರವೇಶದ್ವಾರದ ತನ್ನ ಸ್ತಂಭದ ಬಳಿ ಯಲ್ಲಿ ಅರಸನು ನಿಂತಿದ್ದನು. ಪ್ರಧಾನರೂ ತುತೂರಿ ಹಿಡಿಯುವವರೂ ಅರಸನ ಬಳಿಯಲ್ಲಿ ಇದ್ದರು. ಇದಲ್ಲದೆ ದೇಶದ ಜನರೆಲ್ಲರು ಸಂತೋಷಪಟ್ಟು ತುತೂರಿಗಳನ್ನು ಊದಿದರು. ಹಾಗೆಯೇ ಹಾಡು ಗಾರರೂ ಗೀತವಾದ್ಯಗಳನ್ನು ಹಿಡಿದು ಸ್ತುತಿಸುವದಕ್ಕೆ ಬೋಧಿಸುವವರೂ ಇದ್ದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು.
ಅರಸನು ತನ್ನ ಸ್ಥಳದಲ್ಲಿ ನಿಂತುಕೊಂಡು ಕರ್ತನನ್ನು ಹಿಂಬಾಲಿಸುವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನೂ ತನ್ನ ಪೂರ್ಣಹೃದಯದಿಂದಲೂ ತನ್ನ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳ ಹಾಗೆ ಮಾಡುವದಕ್ಕೂ ಕರ್ತನ ಮುಂದೆ ಒಡಂಬಡಿಕೆ ಮಾಡಿದನು.
(ಆದರೆ) ಅವಳ ವ್ಯಾಪಾರವೂ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಕರ್ತನಿಗೆ ಪರಿಶುದ್ಧವಾಗು ವದು. ಅವಳ ವ್ಯಾಪಾರವು ಕರ್ತನ ಸನ್ನಿಧಾನದಲ್ಲಿ ವಾಸಿಸುವ ವರೆಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನು ಕೂಲವಾಗುವದು.
ಆದರೆ ಅದನ್ನು ಕೂಡಿಸಿದವರು ಅದನ್ನು ತಿಂದು ಕರ್ತನನ್ನು ಸ್ತುತಿಸುವರು; ಅದನ್ನು ಸೇರಿಸಿ ತಂದವರು ನನ್ನ ಪರಿಶುದ್ಧ ಅಂಗಳಗಳಲ್ಲಿ ಅದನ್ನು ಕುಡಿಯುವರು.
ಕರ್ತನಾದ ನಾನೇ ಅವುಗಳಿಗೆ ದೇವರಾಗಿರುವೆನು; ಮತ್ತು ನನ್ನ ಸೇವಕನಾದ ದಾವೀದನು ಅವುಗಳ ಮಧ್ಯೆ ಪ್ರಧಾನನಾಗಿರುವನೆಂದು ಕರ್ತನಾದ ನಾನೇ ಅದನ್ನು ಮಾತಾಡಿದ್ದೇನೆ;
ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು.
ಆಮೇಲೆ ಬಾಗಲಿನ ದ್ವಾರಾಂಗಣವನ್ನು ಎಂಟು ಮೊಳವೆಂದೂ ಅದರ ಕಂಬಗಳನ್ನು ಎರಡು ಮೊಳವೆಂದೂ ಅಳೆದನು; ದ್ವಾರಾಂಗಣದ ಬಾಗಲು ಒಳಗಡೆ ಇತ್ತು.
ಪ್ರಭುವು ಆ ಬಾಗಲಿನ ದ್ವಾರಾಂಗಣ ಮಾರ್ಗವಾಗಿ ಹೊರಗಿ ನಿಂದ ಪ್ರವೇಶಿಸಿ ಬಾಗಲಿನ ಕಂಬದ ಬಳಿಯಲ್ಲಿ ನಿಲ್ಲಬೇಕು, ಆಗ ಯಾಜಕರು ಅವನ ದಹನಬಲಿಯನ್ನು ಸಮಾಧಾನದ ಬಲಿಗಳನ್ನು ಸಿದ್ಧಮಾಡಬೇಕು; ಬಾಗ ಲಿನ ಹೊಸ್ತಿಲಲ್ಲಿ ಆರಾಧಿಸಿ ಹೋಗಬೇಕು. ಆದರೆ ಬಾಗಲು ಸಂಜೆಯವರೆಗೂ ಮುಚ್ಚಲ್ಪಡಬಾರದು;
ಪ್ರಧಾನರು ಪ್ರವೇಶಿಸುವಾಗ, ಅವನು ಬಾಗಲಿನ ದ್ವಾರಾಂಗಣದ ಪ್ರಕಾರವಾಗಿ ಪ್ರವೇಶಿಸಿ, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು.
ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು.
ಶರೀರದ ಪ್ರಕಾರ ಇಸ್ರಾಯೇಲ್ಯರನ್ನು ನೋಡಿರಿ; ಯಜ್ಞ ಮಾಡಿದವು ಗಳನ್ನು ತಿನ್ನುವವರು ಯಜ್ಞವೇದಿಯೊಂದಿಗೆ ಪಾಲು ಗಾರರಾಗಿದ್ದಾರಲ್ಲವೇ?
ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು.